Advertisement

ಕಾಪು: ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿ ಬಲೆಗೆ ಸಿಲುಕಿ ಸಾವು!

12:12 PM Feb 08, 2021 | Team Udayavani |

ಕಾಪು: ಲೈಟ್ ಹೌಸ್ ಬಳಿ ಸಾಂಪ್ರದಾಯಿಕ ಮೀನುಗಾರಿಕೆಗೆ ತೆರಳಿದ್ದ ಮೀನುಗಾರನೋರ್ವ ಬಲೆಗೆ ಸಿಲುಕಿ ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ.

Advertisement

ಮೃತಪಟ್ಟ ಮೀನುಗಾರನನ್ನು ಕಾಪು ಗರಡಿ ಬಳಿ ನಿವಾಸಿ ಕಾಸ್ಮರ್ (65) ಎಂದು ಗುರುತಿಸಲಾಗಿದೆ.

ಇದನ್ನೂ ಓದಿ:ಜಗದೀಶ್ ಅಧಿಕಾರಿಯ ಮುಖಕ್ಕೆ ಮಸಿ ಬಳಿದರೆ 1 ಲಕ್ಷ ರೂ. ನೀಡುತ್ತೇನೆ : ಪ್ರತಿಭಾ ಕುಳಾಯಿ ಘೋಷಣೆ

ಸೋಮವಾರ ಬೆಳಗ್ಗೆ ಸಾಂಪ್ರದಾಯಿಕ ಮೀನುಗಾರಿಕೆಗೆ ತೆರಳಿದ್ದ ಅವರು, ಮೀನುಗಾರಿಕೆಯಲ್ಲಿ ನಿರತರಾಗಿದ್ದ ವೇಳೆಯೇ ಬಲೆಯೊಳಗೆ‌ ಸಿಲುಕಿ, ಸಮುದ್ರಕ್ಕೆ ಬಿದ್ದು ಮೃತಪಟ್ಟಿರಬೇಕೆಂದು ಸಂಶಯಿಸಲಾಗಿದೆ.

ಕಾಸ್ಮಾರ್ ನೀರಿನಲ್ಲಿ‌ ಮುಳುಗುತ್ತಿರುವುದನ್ನು ಸ್ಥಳೀಯ ಮೀನುಗಾರರು ಗಮನಿಸಿದ್ದು, ತಕ್ಷಣ ಅವರ ನೆರವಿಗೆ ಧಾವಿಸಿದರು.‌ ಆದರೆ ಅಷ್ಟರಲ್ಲೇ ಅವರು ಮೃತಪಟ್ಟಿದ್ದರು.

Advertisement

ಮೃತದೇಹವನ್ನು ಮೇಲಕ್ಕೆತ್ತಲಾಗಿದ್ದು, ಕಾಪು‌ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next