Advertisement

Malpe: ಮೀನುಗಾರ ಅಸ್ವಸ್ಥಗೊಂಡು ಸಾವು

08:39 PM Aug 17, 2024 | Team Udayavani |

ಮಲ್ಪೆ: ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ವೇಳೆ ತಮಿಳುನಾಡು ಮೂಲದ ಗಣೇಶನ್‌ (64) ರವರು ಎದೆನೋವಿನಿಂದ ಮೃತಪಟ್ಟ ಘಟನೆ ಸಂಭವಿಸಿದೆ.

Advertisement

ಗಣೇಶನ್‌ ಅವರು ಮಲ್ಪೆ ಬಂದರಿನಲ್ಲಿ ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದು, ಆ.10ರಂದು ಮೀನುಗಾರಿಕೆಗೆ ತೆರಳಿದ್ದರು. ಆ.10ರಂದು ಬೆಳಗ್ಗೆ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು, ತತ್‌ಕ್ಷಣ ಅವರನ್ನು ಮಲ್ಪೆ ಬಂದರಿಗೆ ತಂದು ಅಲ್ಲಿಂದ ಅಜ್ಜರಕಾಡು ಜಿಲ್ಲಾಸ್ಪತ್ರೆ ಕರೆದೊಯ್ಯಲಾಯಿತು. ಪರೀಕ್ಷಿಸಿದ ವೈದ್ಯರು ಈಗಾಗಲೇ ಗಣೇಶನ್‌ ಮೃತ ಪಟ್ಟಿರುವುದಾಗಿ ತಿಳಿಸಿದ್ದಾರೆ. ಮಲ್ಪೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next