Advertisement
ಋತುವಿನ ಆರಂಭದಲ್ಲಿಯೇ ಜಿಎಸ್‌ಟಿ, ಹವಾಮಾನ ವೈಪರೀತ್ಯ ದಿಂದಾಗಿ 2 ತಿಂಗಳು ಮೀನುಗಾರಿಕೆಗೆ ಹಿನ್ನಡೆಯಾಗಿತ್ತು. ಬಳಿಕ ಮತ್ಸéಕ್ಷಾಮ ಎದುರಾಯಿತು. ಇದೀಗ ಲಾಕ್‌ಡೌನ್ ಮೀನುಗಾರರ ಗಾಯದ ಮೇಲೆ ಬರೆ ಎಳೆದಿದೆ. ದ.ಕ., ಉಡುಪಿ ಮತ್ತು ಉ.ಕ. ಜಿಲ್ಲೆಯಲ್ಲಿ ಸುಮಾರು 1 ಲಕ್ಷ ಮಂದಿ ಮೀನುಗಾರಿಕೆಯಲ್ಲಿ ತೊಡಗಿಕೊಂಡಿದ್ದಾರೆ. ಕೋವಿಡ್ 19 ಪರಿಣಾಮ ಮಾ. 20 ರಿಂದ ಮೀನುಗಾರಿಕೆ ಸ್ಥಗಿತವಾಗಿದೆ. ಜೂನ್‌ನಿಂದ ಆಗಸ್ಟ್ ವರೆಗೆ ಮೀನುಗಾರಿಕೆಗೆ ನಿಷೇಧವಿದೆ. ಈಗಿನ ಪರಿಸ್ಥಿತಿ ಮುಂದುವರಿದರೆ ಸುಮಾರು 5 ತಿಂಗಳು ಮೀನುಗಾರಿಕೆ ಸಂಪೂರ್ಣ ಸ್ತಬ್ಧವಾಗಿ ಮೀನುಗಾರರ ಬದುಕು ದುರ್ಭರವಾಗಲಿದೆ ಎಂದು ಅವರು ತಿಳಿಸಿದ್ದಾರೆ.
Advertisement
ಮೀನುಗಾರರಿಗೆ ಗರಿಷ್ಠ ಪರಿಹಾರಕ್ಕೆ ಮನವಿ
10:33 AM Apr 04, 2020 | Sriram |
Advertisement
Udayavani is now on Telegram. Click here to join our channel and stay updated with the latest news.