Advertisement
ಅವರು ಶನಿವಾರ ಕೋಡಿಯ ಕಡಲ ಕಿನಾರೆಯಲ್ಲಿ ಅರಣ್ಯ ಇಲಾಖೆ, ಕ್ಲೀನ್ ಕುಂದಾಪುರ ಪ್ರಾಜೆಕ್ಟ್, ಎಫ್ ಎಸ್‌ಎಲ್ ಇಂಡಿಯಾ ಆಶ್ರಯ ಹಾಗೂ ಹಾಗೂ ವಿವಿಧ ಸಂಘಟನೆಗಳ ಸಹಭಾಗಿತ್ವದಲ್ಲಿ ಆಯೋಜಿಸಿದ ಆಮೆ ಹಬ್ಬ, ಬೀಚ್ ಸ್ವಚ್ಛತೆ, ಕಡಲಾಮೆ ಜಾಗೃತಿ, ಮರಳು ಶಿಲ್ಪ, ಗಾಳಿಪಟ ಉತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
Related Articles
Advertisement
ನಟ ಶೈನ್ ಶೆಟ್ಟಿ, ಕೋಡಿ ಚಕ್ರೇಶ್ವರೀ ದೇವಸ್ಥಾನದ ಗೋಪಾಲ್ ಪೂಜಾರಿ, ಮಂಗಳೂರು ಡಿಸಿಎಫ್ ದಿನೇಶ್, ಕುದುರೆಮುಖ ವನ್ಯಜೀವಿ ಸಂರಕ್ಷಣಾ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಗಣಪತಿ ಕೆ., ವಿಜ್ಞಾನಿ ಡಾ| ಸೂರ್ಯ, ಎಫ್‌ಎಸ್‌ಎಲ್ ಅಧ್ಯಕ್ಷ ರಾಕೇಶ್, ಮತ್ತಿತರರು ಉಪಸ್ಥಿತರಿದ್ದರು.
ಗೌರವ
ಕಡಲಾಮೆ ಸಂರಕ್ಷಣೆಯಲ್ಲಿ ತೊಡಗಿಸಿಕೊಂಡ ಬಾಬು ಮೊಗವೀರ, ಗೋಪಾಲ ಬಾಳಿಗ, ಗೋಪಾಲ ಪೂಜಾರಿ ಕೋಡಿ, ಪುರಸಭಾ ಸದಸ್ಯರಾದ ನಾಗರಾಜ ಕಾಂಚನ್, ಕಮಲಾ ಮಂಜುನಾಥ ಪೂಜಾರಿ, ಲಕ್ಷ್ಮೀ ಬಾೖ, ಅಶ್ಫಕ್, ಎಫ್‌ಎಸ್‌ಎಲ್‌ನ ವೆಂಕಟೇಶ, ದಿನೇಶ್ ಸಾರಂಗ, ನಾಗರಾಜ ಶೆಟ್ಟಿ, ಅಶೋಕ್ ಪೂಜಾರಿ ಕೋಡಿ, ರಾಘವೇಂದ್ರ ಕೋಡಿ, ಕ್ಲೀನ್ ಕುಂದಾಪುರ ಪ್ರಾಜೆಕ್ಟ್‌ನ ಭರತ್ ಬಂಗೇರ, ಸ್ಥಳೀಯರಾದ ಶಂಕರ ಪೂಜಾರಿ ಕೋಡಿ, ರೀಫ್ ವಾಚ್ ಸಂಸ್ಥೆಯ ತೇಜಸ್ವಿ ಅವರನ್ನು ಗೌರವಿಸಲಾಯಿತು.
ಬ್ರಹ್ಮರಥ ಪ್ರತಿಕೃತಿ
ಇದೇ ಮೊದಲ ಬಾರಿಗೆ ಕುಂದಾಪುರಕ್ಕೆ ಆಗಮಿಸಿದ ಮೈಸೂರಿನ ಮಹಾರಾಜರಿಗೆ ಈ ಭಾಗದ ದೊಡ್ಡ ದೇವ ಸ್ಥಾನವಾದ ಕೋಟೇಶ್ವರದ ಬ್ರಹ್ಮರಥದ ಪ್ರತಿಕೃತಿಯನ್ನು ಸ್ಮರಣಿಕೆಯಾಗಿ ಹಸ್ತಾಂತರಿಸಲಾಯಿತು.
ಉಪ ಅರಣ್ಯ ಸಂರಕ್ಷಣಾಧಿಕಾರಿ ಆಶೀಶ್ ರೆಡ್ಡಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ವಲಯ ಅರಣ್ಯಾಧಿಕಾರಿ ಪ್ರಭಾಕರ ಕುಲಾಲ್ ಎಫ್‌ಎಸ್‌ಎಲ್ ಇಂಡಿಯಾದ ವೆಂಕಟೇಶ್ ಸ್ವಾಗತಿಸಿ, ಕಲ್ಪನಾ ಭಾಸ್ಕರ್ ವಂದಿಸಿದರು. ಅರಣ್ಯ ಇಲಾಖೆಯ ನಾಗರಾಜ ಪಟವಾಲ್ ಕಾರ್ಯಕ್ರಮ ನಿರೂಪಿಸಿದರು.