Advertisement

23 ಸಾವಿರ ಜನ ಮೀನುಗಾರರಿಗೆ 60 ಕೋಟಿ ರೂಪಾಯಿ ಸಾಲಮನ್ನಾ: ಹಣಕಾಸು ಇಲಾಖೆಯಿಂದ ಅಧಿಕೃತ ಆದೇಶ

08:09 AM Apr 25, 2020 | keerthan |

ಕಾರವಾರ; ರಾಜ್ಯ ಸರ್ಕಾರ ಘೋಷಣೆ ಮಾಡಿದ ಮೀನುಗಾರರ ಸಾಲಮನ್ನಾ ಯೋಜನೆಯಡಿ 23 ಸಾವಿರ ಜನ ಫಲಾನುಭವಿಗಳಿಗೆ 60 ಕೋಟಿ ರೂಪಾಯಿಯನ್ನು ರಾಜ್ಯ ಹಣಕಾಸು ಇಲಾಖೆ ಅಧಿಕೃತವಾಗಿ ಇಂದು ಬಿಡುಗಡೆ ಮಾಡಿದೆ ಎಂದು ರಾಜ್ಯ ಮೀನುಗಾರಿಕೆಗೆ ಸಚಿವ  ಕೋಟ ಶ್ರೀನಿವಾಸ ಪೂಜಾರಿ ಪತ್ರಿಕಾ ಪ್ರಕಟಣೆಯಲ್ಲಿ  ತಿಳಿಸಿದ್ದಾರೆ.

Advertisement

ಈ ಸಾಲ ಮನ್ನಾದ ಹಣ ಭೂಮಿ ಕೋಶದ ಮೂಲಕ ಸಾಲಗಾರರ ಖಾತೆಗೆ ಜಮಾ ಮಾಡಲು ತುರ್ತು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಹೇಳಿದ್ದಾರೆ

ಈ ಕೋವಿಡ್-19 ನ ಸಂಕಷ್ಟದ ದಿನಗಳಲ್ಲೂ ಕೂಡ ಮೀನುಗಾರರ ಹಿತರಕ್ಷಣೆಗಾಗಿ 60 ಕೋಟಿ ರೂಪಾಯಿಯನ್ನು ಬಿಡುಗಡೆ ಮಾಡಿದ ಮುಖ್ಯಮಂತ್ರಿ ನಡೆಯನ್ನು ಸಚಿವರು ಸ್ವಾಗತಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next