ಕಾಪು : ಟ್ಯೂಬ್ ಮೂಲಕ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿ ಸೆರೆಯ ಅಬ್ಬರಕ್ಕೆ ಸಿಲುಕಿ ಸಮುದ್ರ ಪಾಲಾದ ಘಟನೆ ಬುಧವಾರ ಉಳಿಯಾರಗೋಳಿ ಕಡಲ ಕಿನಾರೆಯಲ್ಲಿ ನಡೆದಿದೆ.
ಉಳಿಯಾರಗೋಳಿ ಯಾರ್ಡ್ ಬಳಿಯ ನಿವಾಸಿ ಸಂತೋಷ್ (48) ಮೀನುಗಾರಿಕೆಗೆ ತೆರಳಿ ನಾಪತ್ತೆಯಾಗಿರುವ ವ್ಯಕ್ತಿ.
ಸಾಂಪ್ರದಾಯಿಕ ರೀತಿಯಲ್ಲಿ ಬಲೆ ಬೀಸಿ ಮೀನುಗಾರಿಕೆ ನಡೆಸುತ್ತಿದ್ದ ಸಂತೋಷ್ ಬುಧವಾರ ಸಂಜೆ 5 ಗಂಟೆಯ ವೇಳೆಗೆ ಟ್ಯೂಬ್ ಧರಿಸಿಕೊಂಡು ಮೀನುಗಾರಿಕೆಗೆ ತೆರಳಿದ್ದು, ಬಲೆ ಬೀಸಿ ವಾಪಸ್ಸಾಗುತ್ತಿರುವಾಗ ಈ ಘಟನೆ ಸಂಭವಿಸಿದೆ.
ಟ್ಯೂಬ್ ಮಗುಚಿ ಸಮುದ್ರ ಪಾಲಾದ ಸುದ್ದಿ ತಿಳಿಯುತ್ತಲೇ ಸ್ಥಳೀಯರು ಅವರ ಸಹಾಯಕ್ಕೆ ಧಾವಿಸಿದ್ದು, ಅಷ್ಟರೊಳಗೆ ಸಮುದ್ರ ಪಾಲಾಗಿ ಬಿಟ್ಡಿದ್ದರು.
ಬಳಿಕ ಮೀನುಗಾರರು ಮತ್ತು ಪೊಲೀಸರ ಮನವಿಯ ಮೇರೆಗೆ ಸ್ಥಳಕ್ಕೆ ಧಾವಿಸಿದ ಮಲ್ಪೆಯ ಮುಳುಗು ತಜ್ಞ ಈಶ್ವರ್ ಮಲ್ಪೆ ಮತ್ತು ಸಂಗಡಿಗರು ಸಮುದ್ರದಲ್ಲಿ ಮುಳುಗಿರುವ ವ್ಯಕ್ತಿಗಾಗಿ ಶೋಧ ಕಾರ್ಯ ನಡೆಸಿದ್ದು ರಾತ್ರಿಯವರೆಗೂ ಪತ್ತೆಯಾಗಿಲ್ಲ ಎಂದು ತಿಳಿದು ಬಂದಿದೆ.
ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ನಾಪತ್ತೆ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಇದನ್ನೂ ಓದಿ: ಗಾಂಧಿ ಮೌಲ್ಯಗಳು ಜಗತ್ತನ್ನು ಪ್ರೇರೇಪಿಸುತ್ತಿವೆ: ಸಬರಮತಿ ಆಶ್ರಮಕ್ಕೆ ಆಸ್ಟ್ರೇಲಿಯ ಪ್ರಧಾನಿ