Advertisement

ಜೂ. 1ರಿಂದ ಜು. 31 ಯಾಂತ್ರಿಕೃತ ಮೀನುಗಾರಿಕೆ ನಿಷೇಧ

02:59 PM May 20, 2020 | sudhir |

ಮಲ್ಪೆ: ಕರ್ನಾಟಕ ಕರಾವಳಿ ಮೀನುಗಾರಿಕೆ ನಿಯಂತ್ರಣ ಕಾಯ್ದೆಯನ್ವಯ ಉಡುಪಿ ಜಿಲ್ಲೆ ಸೇರಿದಂತೆ ಕರ್ನಾಟಕದ ಕರಾವಳಿಯಲ್ಲಿ ಯಾವುದೇ ಬಲೆಗಳನ್ನು/ಸಾಧನಗಳನ್ನು ಉಪಯೋಗಿಸಿ ಎಲ್ಲ ಯಾಂತ್ರೀಕೃತ ದೋಣಿಗಳ ಮುಖಾಂತರ ಹಾಗೂ 10 ಅಶ್ವಶಕ್ತಿ ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಇನ್‌ಬೋರ್ಡ್‌ ಅಥವಾ ಔಟ್‌ಬೋರ್ಡ್‌ ಯಂತ್ರಗಳನ್ನು ಅಳವಡಿಸಿರುವ ಸಾಂಪ್ರದಾಯಿಕ ದೋಣಿಗಳ ಮುಖಾಂತರ ಕೈಗೊಳ್ಳುವ ಮೀನುಗಾರಿಕೆ ಚಟುವಟಿಕೆಗೆ ಜೂ. 1ರಿಂದ ಜು. 31ರ ವರೆಗೆ ನಿಷೇಧ ಹೇರಿ ಆದೇಶ ಹೊರಡಿಸಲಾಗಿದೆ.

Advertisement

10 ಅಶ್ವಶಕ್ತಿಯ ವರೆಗಿನ ಸಾಮರ್ಥ್ಯದ ಮೋಟರೀಕೃತ ದೋಣಿ ಹಾಗೂ ಸಾಂಪ್ರದಾಯಕ ನಾಡದೋಣಿಗಳಿಗೆ ಅವಕಾಶವಿದೆ. ಅಲ್ಲದೆ ಕೇಂದ್ರ ಕೃಷಿ, ಪಶುಸಂಗೋಪನೆ ಮತ್ತು ಮೀನುಗಾರಿಕೆ ಸಚಿವಾಲಯವು ಆದೇಶದಂತೆ ಕರ್ನಾಟಕ ಸೇರಿದಂತೆ ಪಶ್ಚಿಮ ಕರಾವಳಿಯ ಎಲ್ಲ ರಾಜ್ಯಗಳ ವಿಶೇಷ ಆರ್ಥಿಕ ವಲಯದ (12ರಿಂದ 200 ನಾಟಿಕಲ್‌ ಮೈಲಿ) ಜಲ ಪ್ರದೇಶದಲ್ಲಿ ಜೂ. 1ರಿಂದ ಜು. 31ರ ವರೆಗೆ ಮೀನುಗಾರಿಕೆ ನಿಷೇಧವನ್ನು ಹೇರಿ ಏಕರೂಪದ ಮೀನುಗಾರಿಕೆ ನಿಷೇಧವನ್ನು ಜಾರಿಗೊಳಿಸಿದೆ.

ಆದೇಶ ಉಲ್ಲಂಘಿಸುವ ದೋಣಿಗಳು ಮತ್ತು ಮೀನುಗಾರರು ಕರ್ನಾಟಕ ಕಡಲ ಮೀನುಗಾರಿಕೆ ಕಾಯ್ದೆ-1986ರಲ್ಲಿ ವಿಧಿಸಲಾಗಿರುವ ದಂಡನೆಗಳಿಗೆ ಹೊಣೆಯಾಗುವುದಲ್ಲದೇ ಒಂದು ವರ್ಷದ ಅವಧಿಗೆ ಡೀಸೆಲ್‌ ಮೇಲಿನ ಸಹಾಯಧನ ಪಡೆಯಲು ಅನರ್ಹರಾಗುತ್ತಾರೆ ಎಂದು ಉಡುಪಿ ಮೀನುಗಾರಿಕಾ ಉಪನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next