Advertisement

ಭೀಮಾ ತೀರದ ಭೈರಗೊಂಡ ಮೇಲೆ ಗುಂಡಿನ ದಾಳಿ ಪ್ರಕರಣ: ಮತ್ತೆ ಐವರ ಬಂಧನ

12:45 PM Nov 07, 2020 | keerthan |

ವಿಜಯಪುರ: ಭೀಮಾತೀರದ ರೌಡಿಶೀಟರ್ ಮಹಾದೇವ ಸಾಹುಕಾರ್ ಭೈರಗೊಂಡ ಮೇಲಿನ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಪೊಲೀಸರು ಮತ್ತೆ ಐವರು ಆರೋಪಗಳನ್ನು ಬಂಧಿಸಿದ್ದಾರೆ.

Advertisement

ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಬಂಧಿತರ ಕುರಿತು ಮಾಹಿತಿ ನೀಡಿದ ಎಸ್ಪಿ ಅನುಪಮ್ ಅಗರವಾಲ, ಅತಾಲಟ್ಟಿ ಗ್ರಾಮದ ಯಾಶೀನ್ ರಮಜಾನಸಾಬ ದಂದರಗಿ (25), ಕರೆಪ್ಪ ಊರ್ಫ್ ಗೂಳಿ ಮಹಾದೇವ ಸೊನ್ನದ (25), ಸಿದ್ದು ಊರ್ಫ್ ಸಿದರಾಯ ಬಸಪ್ಪ ಬೊಮ್ಮನಜೋಗಿ (34), ಅಲಿಯಾಬಾದ ಗ್ರಾಮದ ಸಂಜು ಊರ್ಫ್ ಸಚಿನ ತುಕಾರಾಮ ಮಾನವರ (28) ಹಾಗೂ ಚಡಚಣದ ರವಿ ಧರೆಪ್ಪ ಬಂಡಿ (20) ಬಂಧಿತ ಆರೋಪಿಗಳು ಎಂದು ವಿವರಿಸಿದರು.

ಇದನ್ನೂ ಓದಿ:ಗುಂಡೇಟಿನಿಂದ ಗಾಯಗೊಂಡ ಮಹಾದೇವ ಭೈರಗೊಂಡ ಮತ್ತೊಂದು ಆಸ್ಪತ್ರೆಗೆ ಸ್ಥಳಾಂತರ

ಬಂಧಿತರಿಂದ 2 ಕಂಟ್ರಿ ಪಿಸ್ತೂಲ್, 5 ಜೀವಂತ ಗುಂಡು, 4 ಮೊಬೈಲ್, 1 ಆಟೋ ರಿಕ್ಷಾ, 1 ಮಚ್ಚು ವಶಕ್ಕೆ ಪಡೆಯಲಾಗಿದೆ.

ಈವರೆಗೆ ಒಟ್ಟು 7 ಆರೋಪಿಗಳನ್ನು ಬಂಧಿಸಲಾಗಿದ್ದು, ತನಿಖೆ ಮುಂದುವರಿದಿದೆ. ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಎಎಸ್ಪಿ ಡಾ.ರಾಮ ಅರಸಿದ್ದಿ, ಡಿವೈಎಸ್ ಪಿ ಲಕ್ಷ್ಮಿನಾರಾಯಣ, ಸಂಕದ ಸಿಪಿಐಗಳಾದ ಎಂ.ಕೆ. ದ್ಯಾಮಣ್ಣವರ, ರವೀಂದ್ರ‌ ನಾಯ್ಕೋಡಿ, ಸುನೀಲ‌ ಕಾಂಬಳೆ, ಸುರೇಶ ಬೆಂಡೆಗುಂಬಳ, ಬಸವರಾಜ ಮೂಕರ್ತಿಹಾಳ ಹಾಗೂ ಪಿಎಸ್ ಐ ತಂಡ ಯಶಸ್ವಿಯಾಗಿದೆ ಎಂದು ಶ್ಲಾಘಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next