Advertisement
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತ ಚುನಾವಣಾ ಆಯೋಗವು 16ನೇ ಲೋಕಸಭೆಸಾರ್ವತ್ರಿಕ ಚುನಾವಣೆ ಅಧಿ ಸೂಚನೆ ಈಗಾಗಲೇ ಹೊರಡಿಸಿದೆ. ಈ ಅಧಿಸೂಚನೆಯನ್ವಯ ಲೋಕಸಭೆ ಚುನಾವಣೆ ರಾಜ್ಯದಲ್ಲಿ ಎರಡು ಹಂತಗಳಲ್ಲಿ
ನಡೆಯಲಿದ್ದು, ಬೀದರ ಜಿಲ್ಲೆಯಲ್ಲಿ ಎರಡನೇ ಹಂತದಲ್ಲಿ ನಡೆಯಲಿದೆ ಎಂದು ಮಾಹಿತಿ ನೀಡಿದರು.
Related Articles
ಇವುಗಳನ್ನು ಚುನಾವಣೆ ಕರ್ತವ್ಯಕ್ಕೆ ಮಾತ್ರ ಬಳಕೆ ಮಾಡಲಾಗುವುದು ಎಂದರು.
Advertisement
ಅದರಂತೆ ಎಲ್ಲ ಚುನಾಯಿತರು ಹಾಗೂ ನಾಮ ನಿರ್ದೇಶಿತಗೊಂಡ ರಾಜಕೀಯ ಮುಖಂಡರಿಗೆ ನೀಡಲಾಗಿರುವ ಸರ್ಕಾರಿ ವಾಹನ ಸೌಲಭ್ಯವನ್ನು ಮರಳಿ ಜಿಲ್ಲಾಡಳಿತ ವಶಕ್ಕೆ ಪಡೆಯಲಾಗಿದೆ. ಚುನಾಯಿತ, ನಾಮ ನಿರ್ದೇಶಿತಗೊಂಡಿರುವ ಅಧಿಕಾರೇತರ ಸದಸ್ಯರ ಚೆಂಬರ್‌ಗಳನ್ನು ಮುಚ್ಚಿಸಿ ಸೀಲ್ ಮಾಡಲಾಗಿದೆ ಎಂದು ತಿಳಿಸಿದರು.
ಜಿಲ್ಲಾದ್ಯಂತ ಮತದಾರರಿಗೆ ಪ್ರಭಾವಕ್ಕೊಳಪಡುವ ರಾಜಕೀಯ ಸಭೆ, ಸಮಾರಂಭ ನಿಷೇಧಿ ಸಲಾಗಿದೆ. ಒಂದು ವೇಳೆ ಯಾವುದೇ ರೀತಿಯ ಸಭೆ ಸಮಾರಂಭ ನಡೆಸುವ ಮುನ್ನ ಚುನಾವಣಾಧಿ ಕಾರಿಗಳಿಂದ ಪರವಾನಗಿ ಪಡೆಯಬೇಕೆಂದು ಸಾರ್ವಜನಿಕರಿಗೆ ತಿಳಿಸಲಾಗಿದೆ ಎಂದ ಅವರು, ರಾಜಕೀಯ ಬ್ಯಾನರ್ಗಳು ತೆರೆವುಗೊಳಿಸಲಾಗಿದೆ ಎಂದರು. 1,999 ಮತಗಟ್ಟೆ ಚುನಾವಣೆ ಪ್ರಕ್ರಿಯೆ ಅಚ್ಚುಕಟ್ಟಾಗಿ ನಡೆಸುವ ನಿಟ್ಟಿನಲ್ಲಿ ಲೋಕಸಭೆ ಕ್ಷೇತ್ರದಲ್ಲಿ 1,999 ಮತಗಟ್ಟೆ ಸಜ್ಜುಗೊಳಿಸಿದ್ದು, ಇವುಗಳಲ್ಲಿ 77 ಸೂಕ್ಷ್ಮ ಮತಗಟ್ಟೆಗಳೆಂದು ಗುರುತಿಸಲಾಗಿದೆ. ಈ ಮತಗಟ್ಟೆಗಳಿಗೆ ಹೆಚ್ಚಿನ ಭದ್ರತೆ ಒದಗಿಸಲಾಗುವುದು ಎಂದು ಹೇಳಿದರು. ಚುನಾವಣೆ ಅಕ್ರಮ ತಡೆಯುವ ನಿಟ್ಟಿನಲ್ಲಿ ಒಟ್ಟಾರೆ 27 ಚೆಕ್‌ಪೋಸ್ಟ್ ಅಳವಡಿಸಿದ್ದು, ಹಗಲು-ರಾತ್ರಿ ಅಧಿಕಾರಿಗಳ ತಂಡ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು
ವಿವರಿಸಿದರು. ಕಾನೂನು ಉಲ್ಲಂಘನೆ ಬೇಡ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಯಾವುದೇ ಪಕ್ಷದವರು ಅಥವಾ ವ್ಯಕ್ತಿಗಳು ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ಮಾಡುವುದು, ಸರ್ವೆ ನಡೆಸುವುದು ಸೇರಿದಂತೆ ಸಾಮಾಜಿಕ ಜಾಲತಾಣಗಳನ್ನು ರಾಜಕೀಯಕ್ಕೆ ಬಳಸಿಕೊಂಡರೆ ಕಾನೂನು ಕ್ರಮ ಕೈಗೊಳ್ಳಲು ವಿಶೇಷ ಅ ಧಿಕಾರಿಗಳ ತಂಡ ರಚಿಸಲಾಗಿದೆ. ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಸಾಮಾಜಿಕ ಜಾಲತಾಣದ ಸದಸ್ಯರ ವಿರುದ್ಧ ಎರಡು
ಪ್ರಕರಣ ದಾಖಲಿಸಲಾಗುತ್ತಿದೆ ಎಂದು ತಿಳಿಸಿದರು. ಅಪರ ಜಿಲ್ಲಾಧಿಕಾರಿ ರುದ್ರೇಶ ಗಾಳಿ ಮಾತನಾಡಿ, ಚುನಾವಣೆ ದಿನಾಂಕ ಘೋಷಣೆಯಾದ ದಿನದಿಂದ ಇಲ್ಲಿಯವರೆಗೆ 1,33,64,584 ರೂ. ಮೌಲ್ಯದ 6,716
ಲೀ. ಮದ್ಯ ಹಾಗೂ 4,70,000 ರೂ. ಮೌಲ್ಯದ 117.539 ಕಿ.ಗ್ರಾಂ ಮಾದಕ ವಸ್ತುಗಳನ್ನು ವಶಕ್ಕೆ ಪಡೆದಿದ್ದು, ಒಟ್ಟು 118 ಪ್ರಕರಣ ದಾಖಲಿಸಲಾಗಿದೆ
ಎಂದು ಮಾಹಿತಿ ನೀಡಿದರು. ದೂರು-ಪ್ರತಿ ದೂರು
ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಕಾಂಗ್ರೆಸ್ -ಬಿಜೆಪಿ ಮುಖಂಡರ ವಿರುದ್ಧ ವಿವಿಧ ಆರೋಪಗಳು ಮಾಡಿ ದೂರು, ಪ್ರತಿ ದೂರು ಸಲ್ಲಿಸುವ ಕಾರ್ಯ
ಶುರುವಾಗಿದೆ. ಈಗಾಗಲೇ ಕಾಂಗ್ರೆಸ್ ವತಿಯಿಂದ ಒಂದು ದೂರು, ಬಿಜೆಪಿಯಿಂದ ಒಂದು ದೂರು ಚುನಾವಣಾಧಿಕಾರಿಗಳಾದ ಜಿಲ್ಲಾಧಿಕಾರಿ ಡಾ| ಎಚ್.ಆರ್. ಮಹಾದೇವ ಅವರಿಗೆ ಸಲ್ಲಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಈಶ್ವರ ಖಂಡ್ರೆ ಅವರಿಗೆ ಸಂಬಂಧಿಸಿದ ಶಾಂತಿವರ್ಧಕ ಶಿಕ್ಷಣ ಸಂಸ್ಥೆ ಅಡಿಯಲ್ಲಿ ನಡೆಯುತ್ತಿರುವ ವಿವಿಧ ವಿದ್ಯಾ ಸಂಸ್ಥೆಯ ಸಿಬ್ಬಂದಿಗಳು
ಹಾಗೂ ಪಿಠೊಪಕರಣಗಳನ್ನು ಚುನಾವಣಾ ಪ್ರಚಾರಕ್ಕೆ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಬಿಜೆಪಿ ಮುಖಂಡರು ಚುನಾವಣಾಧಿ ಕಾರಿಗೆ ದೂರು
ಸಲ್ಲಿಸಿದ್ದಾರೆ. ಅಲ್ಲದೆ, ಹೋಳಿ ಹಬ್ಬದ ಸಂದರ್ಭದಲ್ಲಿ ಭಗವಂತ ಖೂಬಾ ಹಣ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಖೂಬಾ ವಿರುದ್ಧ ಕ್ರಮ ಕೈಗೊಳ್ಳುವಂತೆ
ಕಾಂಗ್ರೆಸ್ ಮುಖಂಡರು ಚುನಾವಣಾಧಿಕಾರಿಗಳಿಗೆ ದೂರು ನೀಡಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿದ ಚುನಾವಣಾಧಿಕಾರಿ ಡಾ| ಎಚ್.ಆರ್. ಮಹಾದೇವ, ಭಗವಂತ ಖೂಬಾ ವಿರುದ್ಧ ನೀಡಲಾದ ದೂರಿನ ಆಧಾರದಲ್ಲಿ ಪ್ರಕರಣ ದಾಖಲಿಸಲಾಗುತ್ತಿದೆ. ಅಲ್ಲದೆ, ಈಶ್ವರ ಖಂಡ್ರೆ ಸಂಬಂಧಿ ಸಿದ ಶಿಕ್ಷಣ ಸಂಸ್ಥೆಯಲ್ಲಿನ ಸಿಬ್ಬಂದಿಗಳನ್ನು ಬೇರೆ ಕಡೆ ಕರ್ತವ್ಯಕ್ಕೆ ನಿಯೋಜನೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.