Advertisement

ಸ್ಕೌಟ್ಸ್‌, ಗೈಡ್ಸ್‌ಗೆ ಐದೂವರೆ ಲಕ್ಷ ನೋಂದಣಿ

12:33 PM Dec 12, 2018 | |

ಬೆಂಗಳೂರು: ರಾಜ್ಯದಲ್ಲಿ ಸ್ಕೌಟ್ಸ್‌ ಮತ್ತು ಗೈಡ್ಸ್‌ಗೆ ಪ್ರಸ್ತುತ ಐದೂವರೆ ಲಕ್ಷ ಜನ ನೋಂದಣಿಯಾಗಿದ್ದು, ಮುಂದಿನ ದಿನಗಳಲ್ಲಿ ಇದನ್ನು ದುಪ್ಪಟ್ಟುಗೊಳಿಸುವ ಗುರಿ ಇದೆ ಎಂದು ಮಾಜಿ ಸಚಿವ ಹಾಗೂ ಭಾರತ್‌ ಸ್ಕೌಟ್ಸ್‌ ಮತ್ತು ಗೈಡ್ಸ್‌ ಕರ್ನಾಟಕ ಮುಖ್ಯ ಆಯುಕ್ತ ಪಿ.ಜಿ.ಆರ್‌. ಸಿಂಧ್ಯಾ ತಿಳಿಸಿದರು.

Advertisement

ನಗರದಲ್ಲಿ ಮಂಗಳವಾರ ಲಯನ್ಸ್‌ ಕ್ಲಬ್ಸ್ ಇಂಟರ್‌ನ್ಯಾಷನಲ್‌ ಹಾಗೂ ಭಾರತ್‌ ಸ್ಕೌಟ್ಸ್‌ ಮತ್ತು ಗೈಡ್ಸ್‌ ಸಂಯುಕ್ತವಾಗಿ ಹಮ್ಮಿಕೊಂಡಿದ್ದ ಕೊಂಡಜ್ಜಿ ಬಸಪ್ಪ ಅವರ 103ನೇ ಜನ್ಮದಿನಾಚರಣೆಯಲ್ಲಿ ಮಾತನಾಡಿದರು. ತಂತ್ರಜ್ಞಾನ ಯುಗದಲ್ಲಿ ನೋಂದಣಿ ದೊಡ್ಡ ಸಮಸ್ಯೆಯೇ ಅಲ್ಲ.

ಮೊಬೈಲ್‌ಗ‌ಳ ಮೂಲಕ ಮಕ್ಕಳನ್ನು ತಲುಪದೆ, ವಿಭಿನ್ನ ಕಾರ್ಯಕ್ರಮಗಳು, ತತ್ವ-ಸಿದ್ಧಾಂತಗಳೊಂದಿಗೆ ತಲುಪುವುದು ನಮ್ಮ ಉದ್ದೇಶ. ಈ ನಿಟ್ಟಿನಲ್ಲಿ ಸ್ಕೌಟ್ಸ್‌ ಮತ್ತು ಗೈಡ್ಸ್‌ ಯೋಜನೆಗಳನ್ನು ಹಾಕಿಕೊಂಡಿದೆ. ಇದಕ್ಕೆ ಉತ್ತಮ ಸ್ಪಂದನೆಯೂ ದೊರೆಯುತ್ತಿದೆ. ಕೆಲವೇ ದಿನಗಳಲ್ಲಿ ನೋಂದಾಯಿತರ ಸಂಖ್ಯೆ ಹತ್ತು ಲಕ್ಷ ದಾಟಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬೃಹತ್‌ ಸಮಾವೇಶ: ಏಪ್ರಿಲ್‌ನಲ್ಲಿ ರಾಜ್ಯದಲ್ಲಿ ಬೃಹತ್‌ ಸಮಾವೇಶ ನಡೆಸಲು ಉದ್ದೇಶಿಸಲಾಗಿದೆ. ಅದರಲ್ಲಿ ಎನ್‌ಸಿಸಿ, ಎನ್‌ಎಸ್‌ಎಸ್‌, ರೋಟರಿಯಂತಹ ಎಲ್ಲ ಸಂಸ್ಥೆಗಳನ್ನು ಒಂದೇ ವೇದಿಕೆಯಲ್ಲಿ ತರಲಾಗುವುದು ಎಂದು ಪಿಜಿಆರ್‌ ಸಿಂಧ್ಯಾ ಇದೇ ವೇಳೆ ಮಾಹಿತಿ ನೀಡಿದರು.  

ಹುಟ್ಟು ಮತ್ತು ಸಾವು ಸಹಜ. ಇವುಗಳ ನಡುವೆ ನಾವು ಮಾಡುವ ಕೆಲಸ ಶಾಶ್ವತವಾಗಿರಬೇಕು. ಈ ನಿಟ್ಟಿನಲ್ಲಿ ನಮಗೆ ಕೊಂಡಜ್ಜಿ ಬಸಪ್ಪ ಮಾದರಿಯಾಗಿದ್ದಾರೆ. ಅವರು ತಮ್ಮ ಇಡೀ ಜೀವನವನ್ನು ಯುವಜನರ ಆಂದೋಲನಕ್ಕೆ ಮೀಸಲಿಟ್ಟರು. ಇದು ಮುಂದಿನ ಪೀಳಿಗೆಗೆ ಅನುಕೂಲಕ್ಕೆ ಕಾರಣವಾಯಿತು ಎಂದು ಸ್ಮರಿಸಿದರು.

Advertisement

ಪದಾಧಿಕಾರಿಗಳಾದ ಕೊಂಡಜ್ಜಿ ಬಿ. ಷಣ್ಮುಖಪ್ಪ, ಬಿ.ಎಸ್‌. ರವೀಂದ್ರ, ಎಂ.ಬಿ. ದೀಪಕ್‌ ಸುಮನ್‌, ನಿವೃತ್ತ ಲೆಫ್ಟಿನೆಂಟ್‌ ಜನರಲ್‌ ಸಿ.ಆರ್‌. ಸಂಪತ್‌ಕುಮಾರ್‌, ಮಕ್ಕಳ ಹೃದ್ರೋಗ ತಜ್ಞೆ ಡಾ.ವಿಜಯಲಕ್ಷ್ಮೀ ಬಾಳೇಕುಂದ್ರಿ, ನಿಮ್ಹಾನ್ಸ್‌ನ ಮನೋವೈದ್ಯ ಡಾ.ಶಶಿಧರ್‌ ಮತ್ತಿತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next