Advertisement
ಇತ್ತೀಚೆಗೆ ಮಹಾರಾಷ್ಟ್ರದ ಥಾಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 9 ಮಂದಿ ಬ್ಲಾಂಗಾ ಪ್ರಜೆಗಳನ್ನು ಬಂಧಿಸಲಾಗಿತ್ತು. ಅವರ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಐವರನ್ನು ಬಂಧಿಸಲಾಗಿದೆ ಎಂದು ಸಿಸಿಬಿ ಮೂಲಗಳು ತಿಳಿಸಿವೆ. ಆರೋಪಿಗಳು ರೈಲು ಮೂಲಕ ಗುರುವಾರವಷ್ಟೇ ನಗರಕ್ಕೆ ಬಂದಿದ್ದು, ಕಾಡುಗೋಡಿಯಲ್ಲಿ ಕಾರ್ಮಿಕರ ಶೆಡ್ ವೊಂದರಲ್ಲಿ ನೆಲೆಸಿದ್ದರು.
Related Articles
Advertisement
ಅಕ್ರಮ ವಲಸಿಗರ ಬಗ್ಗೆ ಎಚ್ಚರಿಕೆ: ಜ್ಞಾನೇಂದ್ರ
ಬೆಂಗಳೂರು: ರಾಜ್ಯದಲ್ಲಿ ಅಕ್ರಮ ವಲಸಿಗರ ಬಗ್ಗೆ ಸರ್ಕಾರ ಎಚ್ಚರಿಕೆ ವಹಿಸಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅವರು, ಅಕ್ರಮ ವಲಸಿಗರ ಪಟ್ಟಿ ಮಾಡಲು ಪೊಲೀಸ್ ಠಾಣೆಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಹೇಳಿದ್ದಾರೆ.
ಸಿಸಿಬಿ ಪೊಲೀಸರು ಐದು ಜನ ಬಾಂಗ್ಲಾ ಅಕ್ರಮ ವಲಸಿಗರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ರಾಜ್ಯದಲ್ಲಿ ಇರುವ ಅಕ್ರಮ ವಲಸಿಗರ ಪಟ್ಟಿ ಮಾಡಿ ಅವರನ್ನು ಡಿಟೆಂಷನ್ ಸೆಂಟರ್ ತಂದು ಹಾಕಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಅಕ್ರಮ ವಲಸಿಗರು ದೇಶದ ಭದ್ರತೆಗೆ ಅಪಾಯಕಾರಿ. ಅವರು ಹೇಗೆ ಬಂದಿದ್ದಾರೆ, ಯಾರು ಕಳೆದುಕೊಂಡು ಬಂದಿದ್ದಾರೆ ಎಂಬ ಬಗ್ಗೆ ತನಿಖೆ ನಡೆಸಲಾಗುವುದು.
ಕೆಲವೆಡೆ ಅಕ್ರಮ ವಲಸಿಗರು ಬಿಲ್ಡಿಂಗ್ ಕೆಲಸ ,ಕಾಫಿ ಎಸ್ಟೇಟ್ ಕೆಲಸಕ್ಕೆ ಬಂದಿದ್ದಾರೆ ಎಂಬ ಬಗ್ಗೆ ತನಿಖೆ ನಡೆಸಿ ಮೂಲ ಹುಡಕಲಾಗುವುದು ಎಂದು ಹೇಳಿದರು.ಅಕ್ರಮ ವಲಸಿಗರಿಗೆ ದಾಖಲೆ ಕೊಡಿಸುವ ಜಾಲವೇ ಇದೆ.ಕರ್ನಾಟಕದಲ್ಲಷ್ಟೇ ಅಲ್ಲ, ಅಸ್ಸಾಂ ಭಾಗದಲ್ಲಿ ಇದೆ. ಕೇಂದ್ರಕ್ಕೆ ಹಾಗೂ ಆಯಾ ರಾಜ್ಯಕ್ಕೆ ಈ ಬಗ್ಗೆ ತಿಳಿಸಿದ್ದೇವೆ ಎಂದು ತಿಳಿಸಿದರು.