ಸಿಂಧನೂರು(ರಾಯಚೂರು): ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿನ ರೈತರ ಸಾಲ ಮನ್ನಾ ಮಾಡಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು ಯುವ ಕಾಂಗ್ರೆಸ್ ಜು.31ರಿಂದ ಸಿಂಧನೂರಿನಿಂದ ರಾಯಚೂರಿಗೆ 5 ದಿನಗಳ ಪಾದಯಾತ್ರೆ ಹಮ್ಮಿಕೊಂಡಿದೆ ಎಂದು ಕಾಂಗ್ರೆಸ್ ಯುವ ಘಟಕದ ರಾಜ್ಯಾಧ್ಯಕ್ಷ ಬಸನಗೌಡ ಬಾದರ್ಲಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬರದಿಂದ ನಲುಗುತ್ತಿರುವ ರೈತರ ಮೇಲಿನ ಋಣಭಾರ ಕಡಿಮೆಯಾಗಬೇಕಾದರೆ ಕೇಂದ್ರ ಸರ್ಕಾರವೂ ರೈತರು ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಮಾಡಿರುವ ಸಾಲವನ್ನು
ಮನ್ನಾ ಮಾಡಬೇಕು. ಆದರೆ ಕೇಂದ್ರ ಸರ್ಕಾರ ನಿರಾಕರಿಸುತ್ತಿದೆ. ಈ ಹಿನ್ನೆಲೆಯಲ್ಲಿ ರೈತರ ಸಾಲ ಮನ್ನಾಕ್ಕೆ ಆಗ್ರಹಿಸಿ ಜು.31ರಂದು ಸಿಂಧನೂರಿನಲ್ಲಿ ಬೃಹತ್ ಸಮಾವೇಶ ಮಾಡಿ, ರಾಯಚೂರುವರೆಗೆ ಪಾದಯಾತ್ರೆ ನಡೆಸಲಾಗುವುದು. ಪಾದಯಾತ್ರೆಗೆ ಚಿತ್ರನಟ ಯಶ್ ಚಾಲನೆ ನೀಡಲಿದ್ದಾರೆ.
ಪಾದಯಾತ್ರೆ ಆ.4ರಂದು ರಾಯಚೂರು ತಲುಪಲಿದ್ದು, ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ ಇತರರುರಾಯಚೂರು 10 ಕಿ.ಮೀ. ದೂರವಿದ್ದಾಗ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ.ಆ.4ರಂದು ಬೃಹತ್ ಸಮಾವೇಶ ನಡೆಸಿ ಪಾದಯಾತ್ರೆಯನ್ನು ಮುಗಿಸಲಾಗುವುದು ಎಂದು ಹೇಳಿದರು.
4ರಂದು ವಿಚಾರ ಸಂಕಿರಣ: ಹೈದ್ರಾಬಾದ್-ಕರ್ನಾಟಕ ಪ್ರದೇಶ ಸಮಗ್ರ ಅಭಿವೃದಿಟಛಿಗಾಗಿ ಜಾರಿಯಾಗಿರುವ 371 (ಜೆ ಕಲಂ ಕುರಿತು ರಾಯಚೂರಿನ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ಆ.4ರಂದು ವಿಚಾರ ಸಂಕಿರಣ ನಡೆಯಲಿದೆ. ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ| ಜಿ.ಪರಮೇಶ್ವರ, ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ, ದಿನೇಶ ಗುಂಡೂರಾವ್, ಎಸ್.ಆರ್.ಪಾಟೀಲ್ ಸೇರಿದಂತೆ ಅನೇಕ ಸಚಿವರು, ಸಂಸದರು, ಶಾಸಕರು ಭಾಗವಹಿಸಲಿದ್ದಾರೆ.