Advertisement
ಮನೆ ಕಳವು ಮಾಡುತ್ತಿದ್ದ ಭಾರತಿ ನಗರದ ನಯಾಜ್ ಖಾನ್ (33), ದೇವರಜೀವನಹಳ್ಳಿಯ ಅಪ್ಸರ್ (31)ಎಂಬುವವರನ್ನು ಸುಬ್ರಹ್ಮಣ್ಯಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಇವರಿಂದ 17 ಲಕ್ಷ ಮೌಲ್ಯದ 550 ಗ್ರಾಂ ಚಿನ್ನಾಭರಣ, ಬೆಳ್ಳಿ ವಸ್ತುಗಳು ಸೇರಿದಂತೆ ಇತರೆ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
Related Articles
Advertisement
ಸರಗಳ್ಳನ ಬಂಧನ: ಕಳವು ಮಾಡಿದ ಬೈಕ್‌ನಲ್ಲಿ ಸುತ್ತಾಡುತ್ತ ಒಂಟಿಯಾಗಿ ಓಡಾಡುವ ಮಹಿಳೆಯರಿಗೆ ಚಾಕು ತೋರಿಸಿ ಬೆದರಿಸಿ ಚಿನ್ನದ ಸರಗಳನ್ನು ಕಳವು ಮಾಡುತ್ತಿದ್ದ ಶ್ಯಾಮಣ್ಣ ಗಾರ್ಡನ್‌ನ ಅಬ್ರಾರ್ ಪಾಷಾ (28)ಎಂಬಾತನನ್ನು ಕೆಂಪೇಗೌಡ ನಗರ ಪೊಲೀಸರು ಬಂಧಿಸಿದ್ದಾರೆ.
ಈತನಿಂದ 7.20 ಲಕ್ಷ ಮೌಲ್ಯದ 277 ಗ್ರಾಂ ತೂಕದ ಚಿನ್ನದ ಸರಗಳು, ಒಂದು ಬೈಕ್‌ನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಯು ಕೆಂಪೇಗೌಡ ನಗರ, ಶಂಕರಪುರ, ಹನುಮಂತನಗರ, ಗಿರಿನಗರ, ಸಿ.ಕೆ.ಅಚ್ಚುಕಟ್ಟು ಪ್ರದೇಶದ ನಿರ್ಜನ ಪ್ರದೇಶಗಳಲ್ಲಿ ಸುತ್ತಾಡುತ್ತ ಒಂಟಿ ಮಹಿಳೆಯರನ್ನು ಬೆದರಿಸಿ ಚಿನ್ನದ ಸರಗಳನ್ನು ದೋಚಿ ಪರಾರಿಯಾಗುತ್ತಿದ್ದ. ಆರೋಪಿಯ ಬಂಧನದಿಂದ ಇತರೆ 5 ಪ್ರಕರಣಗಳು ಬೆಳಕಿಗೆ ಬಂದಿವೆ.
ದರೋಡೆಕೋರರ ಬಂಧನ: ರಾತ್ರಿವೇಳೆ ಒಂಟಿಯಾಗಿ ಓಡಾಡುವವರನ್ನು ಅಡ್ಡಗಟ್ಟಿ ಹಲ್ಲೆ ನಡೆಸಿ ಸುಲಿಗೆ ಮಾಡುತ್ತಿದ್ದ ನಾಲ್ವರು ದರೋಡೆಕೋರರನ್ನು ಹನುಮಂತನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹೊಸಕೆರೆಹಳ್ಳಿಯ ಮೂಕಾಂಬಿಕಾ ನಗರದ ಪ್ರವೀಣ್ ಕುಮಾರ್ (19), ಕರಿಯಾ (20), ಹರೀಶ್(24), ಮಂಜುನಾಥ (19) ಬಂಧಿತರು.
ಆರೋಪಿಗಳು ಶ್ರೀನಗರದ ಸಪ್ತಗಿರಿ ಶಾಲೆಯ ಬಳಿ ಒಂಟಿಯಾಗಿ ಓಡಾಡುವವರನ್ನು ಟಾರ್ಗೆಟ್ ಮಾಡಿಕೊಂಡು ಹಣ ಮತ್ತು ಚಿನ್ನಾಭರಣಗಳನ್ನು ಸುಲಿಗೆ ಮಾಡುತ್ತಿದ್ದರು. ಸೋಮವಾರ ರಾತ್ರಿ ಡಕಾಯಿತಿಗೆ ಹೊಂಚು ಹಾಕುತ್ತಿದ್ದ ಸಂದರ್ಭದಲ್ಲಿ ದಾಳಿ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಡಾ ಶರಣಪ್ಪ ತಿಳಿಸಿದ್ದಾರೆ.