Advertisement

ಮಹಾರಾಷ್ಟ್ರ: ಐವರು ಸಚಿವರಿಗೆ ಕೋವಿಡ್ 19 ಸೋಂಕು ದೃಢ, ಕೆಲವೆಡೆ ಲಾಕ್ ಡೌನ್

03:17 PM Feb 24, 2021 | Team Udayavani |

ಮುಂಬೈ: ಮಹಾರಾಷ್ಟ್ರದಲ್ಲಿ ಕೋವಿಡ್ 19 ಸೋಂಕು ಪ್ರಕರಣ ಮತ್ತೆ ಹೆಚ್ಚಳವಾಗುತ್ತಿದ್ದು, ಕಳೆದ ವಾರ ಐವರು ಸಚಿವರಿಗೆ ಕೋವಿಡ್ 19 ಸೋಂಕು ದೃಢಪಟ್ಟಿರುವುದಾಗಿ ವರದಿ ತಿಳಿಸಿದೆ. ಕೋವಿಡ್ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಮಹಾರಾಷ್ಟ್ರ ಸರ್ಕಾರ ಕೆಲವು ಜಿಲ್ಲೆಗಳಲ್ಲಿ ನಿರ್ಬಂಧ ಜಾರಿಗೊಳಿಸಿದೆ.

Advertisement

ಇದನ್ನೂ ಓದಿ:ಕಳೆದುಹೋದ ಮರ್ಯಾದೆ ಮತ್ತೆ ಬರುವಂತೆ ದುರ್ಗಾ ದೇವಿಗೆ ಪತ್ರ ಬರೆದು ಬೇಡಿಕೊಂಡ ಭಕ್ತ!

ಕೋವಿಡ್ 19 ಸೋಂಕು ದೃಢಪಟ್ಟವರ ಪಟ್ಟಿಯಲ್ಲಿ ಇದೀಗ ಮಹಾರಾಷ್ಟ್ರದ ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ಸಚಿವ ಛಗನ್ ಭುಜ್ ಬಲ್ ಸೇರ್ಪಡೆಗೊಂಡಿರುವುದಾಗಿ ವರದಿ ವಿವರಿಸಿದೆ. ಕೋವಿಡ್ ಪರೀಕ್ಷೆಯಲ್ಲಿ ನನಗೆ ಕೋವಿಡ್ 19 ಇದ್ದಿರುವುದು ದೃಢಪಟ್ಟಿದ್ದು, ಕಳೆದ ಎರಡು, ಮೂರು ದಿನಗಳಿಂದ ನನ್ನ ಸಂಪರ್ಕದಲ್ಲಿದ್ದವರು ಕೋವಿಡ್ ಸೋಂಕು ಪರೀಕ್ಷೆಗೆ ಒಳಗಾಗುವಂತೆ ಭುಜ್ ಬಲ್ ಟ್ವೀಟ್ ಮೂಲಕ ಮನವಿ ಮಾಡಿಕೊಂಡಿದ್ದಾರೆ.

ಈಗಾಗಲೇ ಜಲಸಂಪನ್ಮೂಲ ಸಚಿವ ಜಯಂತ್ ಪಾಟೀಲ್, ಆಹಾರ ಖಾತೆ ಸಚಿವ ಡಿ.ರಾಜೇಂದ್ರ ಶಿಂಗ್ನೆ, ಆರೋಗ್ಯ ಸಚಿವ ರಾಜೇಶ್ ಟೋಪೆ ಮತ್ತು ಶಿಕ್ಷಣ ಸಚಿವ ಓಂಪ್ರಕಾಶ್ ಅಲಿಯಾಸ್ ಬಚ್ಚುಕಾಡು ಅವರಿಗೆ ಕೋವಿಡ್ 19 ಸೋಂಕು ದೃಢಪಟ್ಟಿತ್ತು.

ಮಹಾರಾಷ್ಟ್ರ ಸರ್ಕಾರದ 43 ಸಚಿವರಲ್ಲಿ ಈವರೆಗೆ 26 ಸಚಿವರು ಕೋವಿಡ್ 19 ಸೋಂಕು ಪರೀಕ್ಷೆಗೆ ಒಳಗಾಗಿದ್ದಾರೆ. ಉಪಮುಖ್ಯಮಂತ್ರಿ ಅಜಿತ್ ಪವಾರ್, ಗೃಹ ಸಚಿವ ಅನಿಲ್ ದೇಶ್ ಮುಖ್, ಲೋಕೋಪಯೋಗಿ ಸಚಿವ ಅಶೋಕ್ ಚವಾಣ್ ಕೋವಿಡ್ 19 ಸೋಂಕಿಗೆ ಒಳಗಾಗಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next