Advertisement

ಧಾರವಾಡದಲ್ಲಿ ಮತ್ತೆ ಐದು ಕೋವಿಡ್-19 ಪಾಸಿಟಿವ್ ಪ್ರಕರಣ ಪತ್ತೆ

03:14 PM May 21, 2020 | keerthan |

ಧಾರವಾಡ: ಜಿಲ್ಲೆಯಲ್ಲಿ ಮತ್ತೆ ಐದು ಕೋವಿಡ್-19 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಡಿಸಿ ದೀಪಾ ಚೋಳನ್ ತಿಳಿಸಿದ್ದಾರೆ.

Advertisement

ಇಂದು ಸೋಂಕು ದೃಢಪಟ್ಟಿದ್ದು, ಪಿ-1505 (06 ವರ್ಷ ಬಾಲಕಿ) ಹಾಗೂ ಪಿ-1506 (29 ವರ್ಷ ಮಹಿಳೆ) ಇವರಿಬ್ಬರು  ತೆಲಂಗಾಣದ ಪ್ರಯಾಣ ಹಿನ್ನೆಲೆ ಹೊಂದಿದ್ದಾರೆ. ಪಿ-1507 (09 ವರ್ಷದ ಬಾಲಕಿ ) ಪಿ-1508 ( 24 ವರ್ಷದ ಮಹಿಳೆ), ಪಿ-1509 (35 ವರ್ಷದ ಪುರುಷ) ಈ ಮೂವರು ವ್ಯಕ್ತಿಗಳು ಮಹಾರಾಷ್ಟ್ರ, ಮುಂಬೈ ಪ್ರಯಾಣದ ಹಿನ್ನೆಲೆ  ಹೊಂದಿದ್ದಾರೆ.

ಇದರಿಂದ ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ 31 ಕ್ಕೆ ಏರಿಕೆಯಾಗಿದೆ. ಈಗಾಗಲೇ 09 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಉಳಿದವರು ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ರಾಜ್ಯದಲ್ಲಿ ಇಂದು ಒಟ್ಟು 116 ಹೊಸ ಕೋವಿಡ್ ಸೋಂಕು ಪ್ರಕರಣಗಳು ಪತ್ತೆಯಾಗಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1578ಕ್ಕೆ ಏರಿದೆ. ಇದರಲ್ಲಿ 41 ಜನರು ಸೋಂಕಿನ ಕಾರಣದಿಂದ ಮೃತಪಟ್ಟಿದ್ದಾರೆ. ಓರ್ವ ಸೋಂಕಿತ ಕೋವಿಡ್ ಅಲ್ಲದ ಕಾರಣದಿಂದ ಸಾವನ್ನಪ್ಪಿದ್ದಾನೆ.

Advertisement

Udayavani is now on Telegram. Click here to join our channel and stay updated with the latest news.

Next