ಉಡುಪಿ: ಜಿಲ್ಲೆಯಲ್ಲಿ ಇಂದು ಮತ್ತೆ ಐದು ಸೋಂಕು ಪ್ರಕರಣಗಳು ಪತ್ತೆಯಾಗಿದೆ. ಇದರಿಂದ ಕಳೆದ 24 ಗಂಟೆಯಲ್ಲಿ ಜಿಲ್ಲೆಯಲ್ಲಿ ಒಟ್ಟು 23 ಜನರಿಗೆ ಸೋಂಕು ತಾಗಿರುವುದು ದೃಢವಾಗಿದೆ.
ಈ ಮೂರು ಪ್ರಕರಣಗಳ ಪೈಕಿ ಮೂವರು ಮಹಾರಾಷ್ಟ್ರದಿಂದ ಬಂದವರಾಗಿದ್ದರೆ, ಓರ್ವ ತೆಲಂಗಾಣದ ಬಂದ ಪ್ರಯಾಣ ಇತಿಹಾಸ ಹೊಂದಿದ್ದಾರೆ. ಓರ್ವ ಮಹಿಳೆಯು ಯುಎಇನಿಂದ ಬಂದಿದ್ದು, ಅವರಿಗೆ ಸೋಂಕು ದೃಢಪಟ್ಟಿದೆ.
ಕಳೆದ 24 ಗಂಟೆಯಲ್ಲಿ ಜಿಲ್ಲೆಯಲ್ಲಿ ಒಟ್ಟು 23 ಪ್ರಕರಣಗಳು ದೃಢವಾಗಿದೆ. ಇದರಲ್ಲಿ ಕಾರ್ಕಳ, ಅಜೆಕಾರು ಮತ್ತು ಬ್ರಹ್ಮಾವರ ಠಾಣೆಯ ತಲಾ ಓರ್ವ ಪೊಲೀಸ್ ಸಿಬ್ಬಂದಿಗೆ ಸೋಂಕು ದೃಢವಾಗಿದೆ.
ಇಂದಿನ 23 ಪ್ರಕರಣಗಳು ಸೇರಿ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 76ಕ್ಕೆ ಏರಿಕೆಯಾಗಿದೆ. ಇವರಲ್ಲಿ ಮೂವರು ಗುಣಮುಖರಾಗಿ ಮನೆಗೆ ಮರಳಿದ್ದು, ಓರ್ವ ಸಾವನ್ನಪ್ಪಿದ್ದಾರೆ.
ರಾಜ್ಯದಲ್ಲಿ ಇಂದು ಒಟ್ಟು 130 ಹೊಸ ಸೋಂಕು ಪ್ರಕರಣಗಳು ದೃಢವಾಗಿದೆ. ಇದರೊಂದಿಗೆ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 2089ಕ್ಕೆ ಏರಿಕೆಯಾಗಿದೆ. ಇದರಲ್ಲಿ 654 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 42 ಮಂದಿ ಸೋಂಕಿನ ಕಾರಣದಿಂದ ಸಾವನ್ನಪ್ಪಿದ್ದಾರೆ. ಇಬ್ಬರು ಸೋಂಕಿತರು ಕೋವಿಡ್-19 ಅಲ್ಲದ ಕಾರಣದಿಂದ ಮರಣ ಹೊಂದಿದ್ದಾರೆ.