Advertisement

ವಿಜಯಪುರ: ಮಹಾರಾಷ್ಟ್ರದಿಂದ ಬಂದ ಐವರಿಗೆ ಸೋಂಕು, 75ಕ್ಕೇರಿದ ಸಂಖ್ಯೆ

02:52 PM May 26, 2020 | keerthan |

ವಿಜಯಪುರ: ಜಿಲ್ಲೆಯಲ್ಲಿ ಮಂಗಳವಾರ ಮತ್ತೆ ಐವರಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ. ಮಹಾರಾಷ್ಟ್ರ ರಾಜ್ಯದಿಂದ ಮರಳಿ ಕ್ವಾರಂಟೈನ್ ಕೇಂದ್ರದಲ್ಲಿದ್ದ ಕಾರ್ಮಿಕರಲ್ಲಿ ಕೋವಿಡ್ ಸೋಂಕು ದೃಢಪಟ್ಟಿದ್ದು, ಜಿಲ್ಲೆಯ ಸೋಂಕಿತರ ಸಂಖ್ಯೆ75ಕ್ಕೆ ಏರಿದೆ.

Advertisement

ಮಹಾರಾಷ್ಟ್ರದಿಂದ ಜಿಲ್ಲೆಗೆ ಮರಳಿ ಸಾಂಸ್ಥಿಕ ಕ್ವಾರಂಟೈನ್ ಕೇಂದ್ರದಲ್ಲಿದ್ದ 18 ವರ್ಷದ ಯುವಕ ಪಿ2203, 34 ವರ್ಷದ ಪುರುಷ ಪಿ2204, 30 ವರ್ಷದ ಪುರುಷ ಪಿ2205, 60 ವರ್ಷದ ಪುರುಷ ಪಿ2206 ಹಾಗೂ 17 ವರ್ಷದ ಯುವಕ ಪಿ2207 ಎಂದು ಗುರುತಿಸ ಲಾಗಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 75ಕ್ಕೆ ಏರಿದೆ.

ಸೋಂಕು ತಗುಲಿದ ಕೋವಿಡ್-19 ಪೀಡಿತರಿಗೆ ಜಿಲ್ಲಾಸ್ಪತ್ರೆಯಲ್ಲಿ ತೆರೆದಿರುವ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕಿತ ಎಲ್ಲರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರ ಮಾಹಿತಿ ನೀಡಿದ್ದಾರೆ.

ಕಳೆದ ಮೇ 15 ರ ಬಳಿಕ ಮಹಾರಾಷ್ಟ್ರ ರಾಜ್ಯದಲ್ಲಿ ನೆಲೆಸಿದ್ದ ವಿಜಯಪುರ ಮೂಲದ ಕಾರ್ಮಿಕರು ಸೇವಾ ಸಿಂಧು ಪಾಸ್ ಮೂಲಕ ಜಿಲ್ಲೆಗೆ ಮರಳಿದ್ದರು. ಜಿಲ್ಲೆಗೆ ಮರಳಿದ ಎಲ್ಲ ಕಾರ್ಮಿಕರನ್ನು ಜಿಲ್ಲಾಡಳಿತ ಸಾಂಸ್ಥಿಕ ಕ್ವಾರಂಟೈನ್ ಮಾಡಿದೆ. ಅಲ್ಲದೇ ಕಾರ್ಮಿಕರ ಆರೋಗ್ಯ ತಪಾಸಣೆ, ಗಂಟಲು ದ್ರವ ಸಂಗ್ರಹಿಸಿ ಪರೀಕ್ಷೆಗೆ ಕಳಿಸಲಾಗಿದೆ. ಕಾರ್ಮಿಕರಲ್ಲಿ ಇನ್ನೂ ಹಲವರಿಗೆ ಸೋಂಕು ದೃಢಪಡುವ ಸಾಧ್ಯತೆ ಇದ್ದು, ಜಿಲ್ಲೆಯ ಜನರನ್ನು ಭಯದಲ್ಲಿ ಬದುಕುವಂತೆ ಮಾಡಿದೆ.

Advertisement

Udayavani is now on Telegram. Click here to join our channel and stay updated with the latest news.

Next