Advertisement

ಮತ್ತೆ ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನಟಿ ರಾಗಿಣಿ ದ್ವಿವೇದಿ

02:51 PM Sep 07, 2020 | keerthan |

ಬೆಂಗಳೂರು: ಮಾದಕ ವಸ್ತು ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ ದ್ವಿವೇದಿಗೆ ಮತ್ತೆ ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

Advertisement

ಪ್ರಕರಣದ ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಧೀಶರ ಎದುರು ಹಾಜರುಪಡಿಸಿದ್ದಾರೆ. ಹತ್ತು ದಿನಗಳ ಕಾಲ ನಟಿ ರಾಗಿಣಿಯನ್ನು ಕಸ್ಟಡಿಗೆ ನೀಡಬೇಕೆಂದು ಸಿಸಿಬಿ ಪೊಲೀಸರು ಮನವಿ ಮಾಡಿದ್ದರು. ಆದರೆ ಐದು ದಿನಗಳ ಕಾಲ ಮಾತ್ರ ಕಸ್ಟಡಿಗೆ ನೀಡಲಾಗಿದೆ ಎಂದು ವರದಿಯಾಗಿದೆ.

ಸ್ಯಾಂಡಲ್ ವುಡ್ ಡ್ರಗ್ ಮಾಫಿಯಾ ಕುರಿತು ತನಿಖೆ ಆರಂಭಿಸಿದ್ದ ಸಿಸಿಬಿ ಪೊಲೀಸರು ರಾಗಿಣಿಯ ಆಪ್ತ ಡ್ರಗ್ ಪೆಡ್ಲರ್ ರವಿಶಂಕರ್​ನನ್ನು ವಶಕ್ಕೆ ಪಡೆದಿದ್ದರು. ಆಗ ಆತ ರಾಗಿಣಿಯ ಹೆಸರನ್ನೂ ಹೇಳಿದ್ದ ಎನ್ನಲಾಗಿದೆ. ಇದರ ಬೆನ್ನಲ್ಲೇ ಹಿನ್ನೆಲೆಯಲ್ಲಿ ರಾಗಿಣಿ ಮನೆ ಮೇಲೆ ದಾಳಿ ನಡೆಸಿ, ಆಕೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿತ್ತು. ಅದೇ ದಿನ ಸಂಜೆ ನಟಿಯನ್ನು ಬಂಧಿಸಲಾಗಿತ್ತು.

ಇದನ್ನೂ ಓದಿ: ಬೀದಿ ನಾಯಿ ಸಂಬರಗಿಯನ್ನು ಹಾಗೆ ಬಿಡಬೇಡಿ, ನಾನು ಸತ್ತರೂ ಅವನನ್ನು ಬಿಡುವುದಿಲ್ಲ: ಸಂಜನಾ

Advertisement

ವಿಡಿಯೋ ಕಾನ್ಫರೆನ್ಸ್‌ ಮೂಲಕ ನ್ಯಾಯಾಧೀಶರ ಎದುರು ಹಾಜರುಪಡಿಸಿ ಮೂರು ದಿನಗಳ ಕಾಲ ವಿಚಾರಣೆಗಾಗಿ ಪೊಲೀಸರ ವಶಕ್ಕೆ ಪಡೆಯಲಾಗಿತ್ತು. ಆದರೆ ಸಿಸಿಬಿ ಪೊಲೀಸರ ವಿಚಾರಣೆ ವೇಳೆ ಅನಾರೋಗ್ಯದ ನೆಪವೊಡ್ಡಿ ನಟಿ ವಿಚಾರಣೆಗೆ ಸಹಕಾರ ನೀಡಿರಲಿಲ್ಲ ಎನ್ನಲಾಗಿದೆ. ಈ ಕಾರಣದಿಂದ ಇಂದು ಮತ್ತೆ ಐದು ದಿನಗಳ ಕಾಲ ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆ ಮುಂದುವರಿಸಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next