Advertisement

Karnataka: ರಾಜ್ಯ ಪೊಲೀಸ್‌ ಇಲಾಖೆಗೆ ಐದು ರಾಷ್ಟ್ರೀಯ ಪ್ರಶಸ್ತಿ

11:45 PM Dec 26, 2023 | Team Udayavani |

ಬೆಂಗಳೂರು: ರಾಷ್ಟ್ರೀಯ ಅಪರಾಧ ದಾಖಲಾತಿ ವಿಭಾಗ (ಎನ್‌ಸಿಆರ್‌ಬಿ)ದ ವಾರ್ಷಿಕ ಪ್ರಶಸ್ತಿ ಪ್ರಕಟಗೊಂಡಿದ್ದು, ಕರ್ನಾಟಕ ರಾಜ್ಯ ಪೊಲೀಸರಿಗೆ ಐದು ಪ್ರಶಸ್ತಿಗಳು ಲಭಿಸಿವೆ.
ಕೇಂದ್ರ ಗೃಹ ಮಂತ್ರಾಲಯದ ಸಹಯೋಗ ದೊಂದಿಗೆ ರಾಷ್ಟ್ರೀಯ ಅಪರಾಧ ದಾಖಲಾತಿ ವಿಭಾಗ ಮಹತ್ವಾಕಾಂಕ್ಷೆಯ ಯೋಜನೆಗಳಾದ ಕ್ರೈಂ ಕ್ರಿಮಿನಲ್‌ ಟ್ರ್ಯಾಕಿಂಗ್‌ ನೆಟ್‌ವರ್ಕ್‌ ಆ್ಯಂಡ್‌ ಸಿಸ್ಟಂ(ಸಿಸಿಟಿಎನ್‌ಎಸ್‌)/ಇಂಟರ್‌ ಒಪೇರಬಲ್‌ ಕ್ರಿಮಿನಲ್‌ ಜಸ್ಟೀಸ್‌ ಸಿಸ್ಟಂ(ಐಸಿಜೆಎಸ್‌) ಯೋಜನೆಗಳನ್ನು ದೇಶಾದ್ಯಂತ ಅನುಷ್ಠಾನಗೊಳಿಸಲಾಗಿದೆ. ಈ ಯೋಜನೆಗಳ ಅನುಷ್ಠಾನದಲ್ಲಿ ಉತ್ತಮ ಕೊಡುಗೆ ನೀಡಿದ ರಾಜ್ಯಗಳಿಗೆ ಪ್ರಶಸ್ತಿಗಳನ್ನು ನೀಡಲಾಗುತ್ತಿದೆ.

Advertisement

ಡಿ. 21 ಮತ್ತು 22ರಂದು ಹೊಸದಿಲ್ಲಿಯಲ್ಲಿ ನಡೆದ 5ನೇ ಸಮ್ಮೇಳನದಲ್ಲಿ ಕರ್ನಾಟಕ ರಾಜ್ಯ ಪೊಲೀಸ್‌ ಇಲಾಖೆ ಗಣಕೀಕರಣ ಕ್ಷೇತ್ರದಲ್ಲಿ ನೀಡಿದ ಕೊಡುಗೆ ಗುರುತಿಸಿ ಐದು ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗಿದೆ.

ಇಂಟರ್‌-ಆಪೀರಬಲ್‌ ಕ್ರಿಮಿನಲ್‌ ಜಸ್ಟಿಸ್‌ ಸಿಸ್ಟಂ(ಐಸಿಜೆಎಸ್‌) ಯೋಜನೆಯಡಿಯಲ್ಲಿ ಪೊಲೀಸ್‌ ಇಲಾಖೆ, ನ್ಯಾಯಾಂಗ ಇಲಾಖೆ, ಬಂದೀಖಾನೆ ಇಲಾಖೆ, ಅಭಿಯೋಗ ಇಲಾಖೆ ಮತ್ತು ನ್ಯಾಯ ವಿಜ್ಞಾನ ಪ್ರಯೋಗಾಲಯಗಳೊಂದಿಗೆ ಅಪರಾಧ ಮತ್ತು ಅಪರಾಧಿಗಳ ಮಾಹಿತಿಯನ್ನು ಡಿಜಿಟಲ್‌ ರೂಪದಲ್ಲಿ ವಿನಿಯಮ ಮಾಡಿಕೊಳ್ಳಲು ಮತ್ತು ತ್ವರಿತವಾಗಿ ಪ್ರಕರಣಗಳ ವಿಲೇವಾರಿಗೆ ಸಹಕಾರಿಯಾಗುವ ವ್ಯವಸ್ಥೆಯನ್ನು ಸೃಜಿಸುವಲ್ಲಿ ಕರ್ನಾಟಕ ಪೊಲೀಸ್‌ ಇಲಾಖೆ ನೀಡಿರುವ ಉತ್ತಮ ಸೇವೆ ಗುರುತಿಸಿ ರಾಷ್ಟ್ರಮಟ್ಟದಲ್ಲಿ ಪ್ರಥಮ ಬಾರಿಗೆ ಮೂರನೇ ಬಹುಮಾನ ನೀಡಿ ಪ್ರಶಂಸಿಸಲಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next