Advertisement

ಬೆಳಗಾವಿ ಕೋವಿಡ್-19 ವರದಿ: ಸೋಮವಾರದ ಐದು ವರದಿಗಳು ನೆಗೆಟಿವ್

04:56 PM Mar 30, 2020 | keerthan |

ಬೆಳಗಾವಿ: ಕೋವಿಡ್-19 ಸೋಂಕಿಗೆ ಸಂಬಂಧಿಸಿದಂತೆ ಜಿಲ್ಲೆಯಿಂದ ಇತ್ತೀಚೆಗೆ ಹೊಸದಾಗಿ ಪ್ರಯೋಗಾಲಯಕ್ಕೆ ಕಳಿಸಲಾಗಿದ್ದ ಒಟ್ಟು ಎಂಟು ಮಾದರಿಗಳ ಪೈಕಿ ಐದು ವರದಿಗಳು ನೆಗೆಟಿವ್ ಬಂದಿರುತ್ತವೆ ಎಂದು ಜಿಲ್ಲಾಧಿಕಾರಿ ಡಾ.ಎಸ್. ಬಿ.ಬೊಮ್ಮನಹಳ್ಳಿ ಸ್ಪಷ್ಟಪಡಿಸಿದ್ದಾರೆ.

Advertisement

ಈ ಕುರಿತು ಪ್ರಕಟಣೆ ನೀಡಿರುವ ಅವರು, ಎಂಟು ಮಾದರಿಗಳ ಪೈಕಿ ಇನ್ನು ಮೂರು ಮಾದರಿಯ ವರದಿಯನ್ನು ನಿರೀಕ್ಷಿಸಲಾಗಿದೆ ಎಂದು‌ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಇದುವರೆಗೆ ಪ್ರಯೋಗಾಲಯಕ್ಕೆ ಕಳುಹಿಸಲಾಗಿರುವ ಒಟ್ಟಾರೆ 21 ಮಾದರಿಗಳ ಪೈಕಿ ಇದೀಗ ಒಟ್ಟಾರೆ 18 ನೆಗೆಟಿವ್ ಬಂದಿರುತ್ತವೆ ಎಂದು ಅವರು ಹೇಳಿದ್ದಾರೆ.

ಜನರು ವದಂತಿಗಳಿಗೆ ಕಿವಿಗೊಡದೆ ಸರ್ಕಾರದ ಸೂಚನೆ ಮೇರೆಗೆ ಎಲ್ಲ ರೀತಿಯ ಮುನ್ನೆಚ್ವರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಬೊಮ್ಮನಹಳ್ಳಿ ಅವರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next