Advertisement

Five state elections ಬಿಜೆಪಿ ಸುನಾಮಿ ಅಲೆೆ: ವಿಜಯೇಂದ್ರ

12:15 AM Dec 04, 2023 | Team Udayavani |

ಬೆಂಗಳೂರು: ಇಡೀ ದೇಶದಲ್ಲಿ ಬಿಜೆಪಿ ಪರ ವಾತಾವರಣವಿದೆ. ದೇಶದಲ್ಲಿ ಮತ್ತೊಮ್ಮೆ ನರೇಂದ್ರ ಮೋದಿ ಅವರು ಪ್ರಧಾನಮಂತ್ರಿ ಆಗಬೇಕೆಂಬ ಆಸೆ ಜನತೆಯಲ್ಲಿ ಇದೆ ಎಂಬುದು ಈ ನಾಲ್ಕು ರಾಜ್ಯಗಳ ಚುನಾವಣ ಫ‌ಲಿತಾಂಶದಿಂದ ಗೊತ್ತಾಗಿದೆ.

Advertisement

ಪಂಚರಾಜ್ಯ ಚುನಾವಣೆ ಒಂದು ರೀತಿಯ ಸೆಮಿಫೈನಲ್‌ ಎಂದು ವಿಶ್ಲೇಷಿಸಲಾಗುತ್ತಿತ್ತು. ಸುನಾಮಿ ರೀತಿಯಲ್ಲಿ ಬಿಜೆಪಿ ಅಲೆ ಎದ್ದಿದೆ ಎಂಬುದು ಸ್ಪಷ್ಟವಾಗಿ ಗೋಚರಿಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಹೇಳಿದ್ದಾರೆ.

ಫ‌ಲಿತಾಂಶದ ಬಳಿಕ ದಿಲ್ಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಲ್ಕು ರಾಜ್ಯಗಳ ವಿಜಯದೊಂದಿಗೆ ವಿಜಯ ಯಾತ್ರೆ ಇಲ್ಲಿಗೇ ನಿಲ್ಲುವುದಿಲ್ಲ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ನರೇಂದ್ರ ಮೋದಿ ಅವರು ಪ್ರಧಾನಿ ಆಗುವ ಮೂಲಕ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂಬ ವಿಷಯದಲ್ಲಿ ಯಾವುದೇ ಅನುಮಾನ ಉಳಿದಿಲ್ಲ ಎಂದು ತಿಳಿಸಿದರು.

 

Advertisement

Udayavani is now on Telegram. Click here to join our channel and stay updated with the latest news.

Next