Advertisement
ಮುಂದಿನ ಲೋಕಸಭೆ ಚುನಾವಣೆಗೆ ಸೆಮಿಫೈನಲ್ ಎಂದೇ ಪರಿಗಣಿಸಲಾಗಿರುವ ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢ, ತೆಲಂಗಾಣ, ಮಿಜೋರಾಮ್ ರಾಜ್ಯಗಳ ಚುನಾವಣೆ ಕೇಂದ್ರದಲ್ಲಿನ ಬಿಜೆಪಿ ನೇತೃತ್ವದ ಎನ್‌ಡಿಎ, ಕಾಂಗ್ರೆಸ್ ನೇತೃತ್ವದ ಐ.ಎನ್.ಡಿ.ಐ.ಎ. ಒಕ್ಕೂಟಕ್ಕೆ ಮಹತ್ವದ್ದಾಗಿದೆ. 2018ರಲ್ಲಿ ಈ ಐದೂ ರಾಜ್ಯಗಳ ವಿಧಾನಸಭೆ ಒಂದೇ ಹಂತದಲ್ಲಿ ನಡೆದಿತ್ತು. ಈ ಬಾರಿಯೂ ಅದೇ ಮಾದರಿ ಅನುಸರಿಸಿದರೂ, ದಿನಾಂಕಗಳು ಮಾತ್ರ ಬೇರೆ ಬೇರೆಯಾಗಿ ಇರುವ ಸಾಧ್ಯತೆಗಳು ಇವೆ ಎಂದು ಹೇಳಲಾಗಿದೆ.
ಚುನಾವಣೆಗಳಿಗೆ ಮುನ್ನ ಮತದಾರರಿಗೆ ಉಚಿತ ಕೊಡುಗೆಗಳನ್ನು ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಪಿಐಎಲ್ ಅನ್ನು ವಿಚಾರಣೆಗೆ ಅಂಗೀಕರಿಸಿದೆ. ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್, ನ್ಯಾ.ಜೆ.ಬಿ.ಪರ್ದಿವಾಲಾ, ನ್ಯಾ.ಮನೋಜ್ ಮಿಶ್ರಾ ಅವರನ್ನೊಳಗೊಂಡ ನ್ಯಾಯಪೀಠ ಮಧ್ಯಪ್ರದೇಶ, ರಾಜಸ್ಥಾನ ಮತ್ತು ಕೇಂದ್ರ ಸರ್ಕಾರ, ಭಾರತದ ಚುನಾವಣಾ ಆಯೋಗ, ಆರ್‌ಬಿಐಗೆ ನೋಟಿಸ್ ಜಾರಿ ಮಾಡಿದೆ. ಮಧ್ಯಪ್ರದೇಶ, ರಾಜಸ್ಥಾನ ಸರ್ಕಾರಗಳು ತೆರಿಗೆ ಪಾವತಿದಾರರ ಹಣ ಲೂಟಿ ಮಾಡುತ್ತಿವೆ ಎಂದು ಅರ್ಜಿದಾರರು ಆರೋಪಿಸಿದ್ದಾರೆ.