Advertisement

ಪರೀಕ್ಷಾ ಅಕ್ರಮಕ್ಕೆ ಐದು ವರ್ಷ ಜೈಲು

11:00 PM Feb 23, 2020 | Lakshmi GovindaRaj |

ಬೆಂಗಳೂರು: ಮಾರ್ಚ್‌ 4ರಿಂದ 23ರವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆಗಳ ಸಂದರ್ಭದಲ್ಲಿ ಯಾರಾದರೂ ಪರೀಕ್ಷಾ ಅಕ್ರಮಗಳಲ್ಲಿ ಭಾಗಿಯಾದರೆ 5 ವರ್ಷ ಜೈಲು ಅಥವಾ 5 ಲಕ್ಷ ದಂಡ ಅಥವಾ ಈ ಎರಡೂ ಶಿಕ್ಷೆಯನ್ನು ವಿಧಿಸಲಾಗುವುದು ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ಎಚ್ಚರಿಸಿದೆ.

Advertisement

ಪರೀಕ್ಷಾ ನಕಲು ಮಾಡುವುದು, ಪರೀಕ್ಷಾ ನಕಲಿಗೆ ಸಹಾಯ ಮಾಡುವುದು, ಬದಲಿ ವ್ಯಕ್ತಿಯಾಗಿ ಪರೀಕ್ಷೆ ಬರೆಯುವುದು, ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಸಮಯದಲ್ಲಿ ಮೊಬೈಲ್‌ ಬಳಕೆ ಅಥವಾ ಉಪಯೋಗಕ್ಕೆ ಐದು ವರ್ಷ ಜೈಲು ಶಿಕ್ಷೆ ಹಾಗೂ 5 ಲಕ್ಷ ದಂಡ ವಿಧಿಸಲಾಗುವುದು. ಕೊಠಡಿ ಮೇಲ್ವಿಚಾರಕರು ಅಥವಾ ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು ಅಕ್ರಮ ಎಸಗಿರುವುದು ಕಂಡುಬಂದಲ್ಲಿ ಕಠಿಣ ಶಿಸ್ತು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದೆ.

ಪರೀಕ್ಷಾ ಕೇಂದ್ರಗಳಿಗೆ ಮೊಬೈಲ್‌ ನಿಷೇಧಿಸಲಾಗಿದೆ. ಇಲಾಖೆಯ ಗುರುತಿನ ಚೀಟಿ ಹೊಂದಿರುವವರಿಗೆ ಮಾತ್ರ ಪರೀಕ್ಷಾ ಕೇಂದ್ರದ ಒಳಗೆ ಪ್ರವೇಶ ಇರಲಿದೆ. ಪರೀಕ್ಷಾ ಕೇಂದ್ರದ ಒಳಗೆ ಹೋಗುವ ಅಧಿಕಾರಿ ಮತ್ತು ಸಿಬ್ಬಂದಿ ಕಡ್ಡಾಯವಾಗಿ ಇಲಾಖೆ ನೀಡಿರುವ ಗುರುತಿನ ಚೀಟಿ ಧರಿಸಬೇಕು. ಪರೀಕ್ಷಾ ಕಾರ್ಯಕ್ಕೆ ಅಡ್ಡಿ ಉಂಟುಮಾಡಿದರೆ, ಪೊಲೀಸ್‌ ಎಫ್ಐಆರ್‌ ದಾಖಲಿಸಲಾಗುವುದು, ಪರೀಕ್ಷಾ ಕೇಂದ್ರದ 200 ಮೀಟರ್‌ ಸುತ್ತಳತೆಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರಲಿದೆ ಎಂದು ಪಿಯು ಇಲಾಖೆ ನಿರ್ದೇಶಕ ಎಂ.ಕನಗವಲ್ಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇ-ಕ್ಯಾಮರಾ, ಲ್ಯಾಪ್‌ಟಾಪ್‌ ಸಹಿತವಾಗಿ ಎಲೆಕ್ಟ್ರಾನಿಕ್ಸ್‌ ವಸ್ತುಗಳನ್ನು ಪರೀಕ್ಷೆಗೆ ತರುವುದನ್ನು ನಿಷೇಧಿಸಲಾಗಿದೆ. ಹಾಗೆಯೇ ಪರೀಕ್ಷಾ ಕೊಠಡಿಯಲ್ಲಿ ಯಾವುದೇ ರೀತಿಯ ವಿದ್ಯುನ್ಮಾನ ಉಪಕರಣ ಹೊಂದುವುದು ಶಿಕ್ಷಾರ್ಹ ಅಪರಾಧವಾಗಿದೆ. ಮುಳ್ಳು ಹೊಂದಿರುವ ಸಾಮಾನ್ಯ ಕೈಗಡಿಯಾರವನ್ನು ಪರೀಕ್ಷೆಯಲ್ಲಿ ಬಳಸಬಹುದು ಎಂದು ಇಲಾಖೆ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next