Advertisement
ಗೃಹ ಸಚಿವ ಜಿ.ಪರಮೇಶ್ವರ ನಿವಾಸದಲ್ಲಿ ಕೆಲ ನಾಯಕರಷ್ಟೇ ಭೋಜನಕೂಟ ಆಯೋಜಿಸಿದ್ದರು. ಅದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ. ಸಮಾನ ಮನಸ್ಕ ನಾಯಕರು ಒಂದೆಡೆ ಸೇರಿ ಊಟ ಮಾಡಿರುವುದು ಸೌಹಾರ್ದಯುತ ಭೇಟಿ ಆಗಿದೆ. ಎಲ್ಲ ನಾಯಕರನ್ನು ಕರೆಯಬೇಕು ಅಂತೇನಿಲ್ಲ. ಕಾಂಗ್ರೆಸ್‌ನಲ್ಲಿ ಯಾವುದೇ ಭಿನ್ನಮತ, ಬಣ ಇಲ್ಲ. ಲೋಕಸಭೆ ಚುನಾವಣೆಯಲ್ಲಿ ಸ್ಪ ರ್ಧಿಸುವ ಅಗತ್ಯ ಬಿದ್ದರೆ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಸ್ಪ ರ್ಧಿಸುತ್ತೇನೆ. ಬಿಜೆಪಿಯವರು ಅನೇಕ ರಾಜ್ಯಗಳಲ್ಲಿ ಆಪರೇಷನ್ ಕಮಲದ ಅಸ್ತ್ರ ಪ್ರಯೋಗಿಸಿ ಅ ಧಿಕಾರದ ಗದ್ದುಗೆ ಹಿಡಿದಿದ್ದಾರೆ. ಅದು ಅವರಿಗೆ ರುಚಿ ಹಿಡಿದಿದೆ. ಇಂಥ ಆಟ ಕರ್ನಾಟಕದಲ್ಲಿ ನಡೆಯಲ್ಲ. ಬಿಜೆಪಿ-ಜೆಡಿಎಸ್ ಬೇರೆಯವರ ಕೆರೆಯಲ್ಲಿ ಮೀನು ಹಿಡಿಯುವ ಕೆಲಸ ಮಾಡುತ್ತಿದ್ದಾರೆ. ಬಿಜೆಪಿಗೆ ಮೂರ್‍ನಾಲ್ಕು ತಿಂಗಳಾದರೂ ವಿಪಕ್ಷ ನಾಯಕನ ಆಯ್ಕೆ ಮಾಡಲು ಆಗುತ್ತಿಲ್ಲ ಎಂದರು.
ಮೈಸೂರು: ರಾಜ್ಯ ದಲ್ಲಿ ಪ್ರಸ್ತುತ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ. ಆ ಕುರಿತಾದ ಪ್ರಶ್ನೆಗಳು ಅಪ್ರಸ್ತುತ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ತಿಳಿಸಿದರು. ಭಾನುವಾರ ಸುದ್ದಿಗೋಷ್ಠಿಯಲ್ಲಿ, ಗೃಹ ಸಚಿವ ಡಾ.ಜಿ. ಪರಮೇಶ್ವರ್ ನಿವಾಸದಲ್ಲಿ ಡಿನ್ನರ್ ಪಾರ್ಟಿ ವಿಚಾರವಾಗಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವ ರು, ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಇದ್ದಾರೆ. ಸ್ಥಾನ ಖಾಲಿ ಇಲ್ಲದಿರುವಾಗ ಚರ್ಚೆ ಯಾಕೆ ಎಂದು ಪ್ರಶ್ನಿಸಿದರು. ಡಾ.ಜಿ.ಪರಮೇಶ್ವರ್ ಆಹ್ವಾನ ನೀಡಿದ್ದು ರಾಜಕೀಯ ವಿಷಯ ಚರ್ಚಿಸಲು ಅಲ್ಲ. ರಾತ್ರಿ ಊಟಕ್ಕೆ ಕರೆದಿದ್ದರು. ಅಲ್ಲಿ ಮುದ್ದೆ ಬಿಟ್ಟು ಯಾವ ಹುದ್ದೆಯ ಬಗ್ಗೆಯೂ ಚರ್ಚೆಯಾಗಿಲ್ಲ. ಚರ್ಚೆಗೆ ವಿಷಯಗಳೇ ಇಲ್ಲದಿರುವಾಗ ಇಂಥ ವಿಚಾರಗಳು ಮುನ್ನೆಲೆಗೆ ಬರುತ್ತವೆ. ಎರಡೂವರೆ ವರ್ಷದ ನಂತರ ಮುಖ್ಯಮಂತ್ರಿ, ಸಚಿವ ಸಂಪುಟ ವಿಸ್ತರಣೆ ಬಗ್ಗೆ ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
Related Articles
Advertisement