ನ್ಯಾ.ಎ.ಎಸ್.ಓಖಾ ನೇತೃತ್ವದ ನ್ಯಾಯಪೀಠ ಪ್ರಕರಣವೊಂದರ ವಿಚಾರಣೆ ವೇಳೆ ಕೇಂದ್ರ ಸರ್ಕಾರಕ್ಕೆ ಈ ನಿರ್ದೇಶನ ನೀಡಿದೆ. ಇದೇ ವೇಳೆ, ಹಿಟ್ ಆ್ಯಂಡ್ ರನ್ ಪ್ರಕರಣಗಳಲ್ಲಿ ಪರಿಹಾರ ಕೋರಿ ಕೆಲವೇ ಕೆಲವು ಅರ್ಜಿಗಳು ಸಲ್ಲಿಕೆಯಾಗಿವೆ ಎಂಬ ವಾದವನ್ನು ಒಪ್ಪದ ನ್ಯಾಯಪೀಠ, ಪೊಲೀಸರು ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರವೇ ಕ್ಲೇಮು ಮಾಡುವ ಪ್ರಾಧಿಕಾರಕ್ಕೆ ಪರಿಹಾರ ಪಡೆಯುವವರ ವಿವರಗಳನ್ನು ನಿಗದಿ ಮಾಡಿರುವ ಕಾಲಾವಧಿಯಲ್ಲಿ ಸಲ್ಲಿಕೆ ಮಾಡಲೇಬೇಕು ಎಂದು ತಾಕೀತು ಮಾಡಿತು.
Advertisement
2022 ಏ.1ರಿಂದ ಜಾರಿಯಾಗಿರುವ ಮೋಟಾರು ವಾಹನಗಳ ತಿದ್ದುಪಡಿ ಕಾಯ್ದೆಯ ಅನ್ವಯ ಅಪಘಾತ ಪ್ರಕರಣಗಳಲ್ಲಿ ಅಸುನೀಗಿದವರ ಕುಟುಂಬ ಸದಸ್ಯರಿಗೆ 2 ಲಕ್ಷ ರೂ., ಗಾಯಗೊಂಡವರಿಗೆ 50 ಸಾವಿರ ರೂ. ಪರಿಹಾರ ನೀಡುವ ಅವಕಾಶ ಕಲ್ಪಿಸಲಾಗಿದೆ.