ಚಿಕ್ಕಮಗಳೂರು: ಮತದಾರರ ಪಟ್ಟಿಯಲ್ಲಿರುವ ನ್ಯೂನತೆಗಳನ್ನು ಸರಿಪಡಿಸುವಂತೆ ಮತದಾರರ ಪಟ್ಟಿ ವೀಕ್ಷಕರಾಗಿ ಜಿಲ್ಲೆಗೆ ನೇಮಕವಾಗಿರುವಕೆ.ಪಿ.ಟಿ.ಸಿ.ಎಲ್.ನ ವ್ಯವಸ್ಥಾಪಕ ನಿರ್ದೇಶಕಿ ಡಾ| ಎನ್.ಮಂಜುಳ ಅಧಿಕಾರಿಗಳಿಗೆ ಸೂಚಿಸಿದರು.
ಶುಕ್ರವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಚುನಾವಣೆ ಪ್ರಕ್ರಿಯೆಯನ್ನುಚುನಾವಣಾ ಆಯೋಗದ ನಿರ್ದೇಶನ ಮತ್ತು ನಿಯಮದಂತೆ ನಡೆಸಬೇಕು. ಅರ್ಜಿ ನಮೂನೆ 6, 7, 8, ಮತ್ತು 8ಎ ರಂತೆ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ತೆಗೆದು ಹಾಕುವುದು ಹಾಗೂ ಸ್ಥಳಾಂತರ ಬಗ್ಗೆ ಬಿ.ಎಲ್.ಒ ಗಳಿಂದ ನಿಖರ ಮಾಹಿತಿ ಪಡೆದು ಕ್ರಮ ಕೈಗೊಳ್ಳಬೇಕು. ಮತದಾರರ ಪಟ್ಟಿಗೆ ಸಂಬಂಧಿ ಸಿದಂತೆ ಯಾವುದೇ ದೂರುಗಳು ಬರದಂತೆಗಮನ ಹರಿಸಬೇಕು. ಚುನಾವಣಾ ಆಯೋಗದ ನಿರ್ದೇಶನಗಳನ್ನು ಪಾಲನೆ ಮಾಡಬೇಕು ಎಂದರು.
ಜಿಲ್ಲಾಧಿಕಾರಿ ಡಾ| ಬಗಾದಿ ಗೌತಮ್ ಮಾತನಾಡಿ, ಮತದಾರರ ಪಟ್ಟಿ ವಿಶೇಷಪರಿಷ್ಕರಣೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿಪುರುಷರು 4,67,720, ಮಹಿಳೆಯರು 4,73,325 ಹಾಗೂ ಇತರರು 40 ಸೇರಿದಂತೆ ಒಟ್ಟು 9,41,085 ಮತದಾರರಿದ್ದು, ಶೃಂಗೇರಿ ಕ್ಷೇತ್ರದಲ್ಲಿ 1,66,323, ಮೂಡಿಗೆರೆ ವಿಧಾನಸಭಾ ಕ್ಷೇತ್ರದಲ್ಲಿ 1,68,607, ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿ 2,16,914, ತರೀಕೆರೆ ವಿಧಾನಸಭಾ ಕ್ಷೇತ್ರದಲ್ಲಿ 1,87,021 ಹಾಗೂ ಕಡೂರು ವಿಧಾನಸಭಾ ಕ್ಷೇತ್ರದಲ್ಲಿ 2,02,220 ಮತದಾರರಿದ್ದಾರೆ ಎಂದು ಮಾಹಿತಿ ನೀಡಿದರು.
ನ.22, 29 ಡಿ.6 ಮತ್ತು ಡಿ.13 ರಂದು ವಿಶೇಷ ಅಭಿಯಾನ ನಡೆಯಲಿದೆ. ಪ್ರತಿ ಬಿ.ಎಲ್. ಒಗಳು ವಿಶೇಷ ಅಭಿಯಾನ ದಿನಗಳಂದು ಬೂತ್ ಗಳಲ್ಲಿ ಕಡ್ಡಾಯವಾಗಿ ಹಾಜರಿರಬೇಕು. ಅಂದು ವೀಡಿಯೋ ಮಾಡಬೇಕು. ವೀಡಿಯೋ ಮಾಡಿ ಮಾಹಿತಿ ನೀಡದ ಬಿ.ಎಲ್.ಒ.ಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಕುಟುಂಬ ಸದಸ್ಯರ ಹೆಸರುಗಳು ಒಂದು ಬೂತ್‌ನಿಂದ ಬೇರೆ ಬೇರೆ ಬೂತ್‌ಗಳಲ್ಲಿ ಇರುವ ಬಗ್ಗೆ ದೂರುಗಳಿದ್ದು ಸರಿಪಡಿಸಲು ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು. ಸಭೆಯಲ್ಲಿ ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಸ್.ಪೂವಿತಾ, ಅಪರ ಜಿಲ್ಲಾಧಿಕಾರಿ ಡಾ| ಕುಮಾರ್, ಉಪವಿಭಾಗಾಧಿಕಾರಿ ರೇಣುಕಾ ಪ್ರಸಾದ್, ತಾಲೂಕುಗಳ ತಹಶೀಲ್ದಾರ್‌ಗಳು, ನಗರಸಭೆ ಆಯುಕ್ತ ಬಿ.ಸಿ.ಬಸವರಾಜು ಮತ್ತಿತರರು ಇದ್ದರು.