Advertisement
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ನಿಖರ ತಪಾಸಣೆಗಾಗಿ ತಜ್ಞರ ತಂಡ ಸಿಟಿ ಸ್ಕ್ಯಾನ್ ಮಾಡಲು ಸಲಹೆ ನೀಡಿದ್ದಾರೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಸ್ಕ್ಯಾನಿಂಗ್ ಮಾಡಲಾಗುತ್ತಿದೆ. ಖಾಸಗಿ ಆಸ್ಪತ್ರೆಗಳೆ ಅಧಿಕ ಶುಲ್ಕ ಪಡೆಯುವಂತಿಲ್ಲ ಎಂದರು.
Related Articles
Advertisement
ಅಲ್ಲದೇ, ಮೆಡಿಕಲ್ ಕಾಲೇಜುಗಳಿಲ್ಲದ ಚಿಕ್ಕಮಗಳೂರು, ರಾಮನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಯಾದಗಿರಿ ಜಿಲ್ಲೆಗಳ ಕೋವಿಡ್ ರೋಗಿಗಳನ್ನು ಸಮೀಪದ ನಗರಗಳ ಮೆಡಿಕಲ್ ಕಾಲೇಜು ಹಾಗೂ ಪ್ರಮುಖ ಖಾಸಗಿ ಆಸ್ಪತ್ರೆಗಳಿಗೆ ಕಳುಹಿಸಲಾಗುವುದು. ಕಳೆದ ವರ್ಷವೂ ಹೀಗೆ ಮಾಡಿದ್ದೆವು. ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಸಚಿವರಿಗೆ ಮಾಹಿತಿ ಕೊರತೆ ಇದೆ ಎಂದರು.
ಎಲ್ಲ ಕೋವಿಡ್ ರೋಗಿಗಳಿಗೂ ರೆಮ್ ಡಿಸಿವಿರ್ ಇಂಜೆಕ್ಷನ್ ಅಗತ್ಯವಿಲ್ಲ. ಸ್ವಯಂ ನಿರ್ಧಾರ ಮಾಡಿ ಯಾರೂ ತೆಗೆದುಕೊಳ್ಳಬಾರದು. ಯಾವ ರೋಗಿಗಳಿಗೆ ನೀಡಬೇಕು ಎಂಬ ಬಗ್ಗೆ ವೈದ್ಯರಿಗೆ ತಾಂತ್ರಿಕ ಸಮಿತಿ ಸಲಹೆ ನೀಡಲಿದೆ. ರೆಮ್ ಡಿಸಿವಿರ್ ಹಾಗೂ ಆಕ್ಸಿಜನ್ ಸಿಲಿಂಡರ್ ಗಳನ್ನು ಜನರು ಆತಂಕದಿಂದ ಮುಂಚೆಯೇ ಸಂಗ್ರಹಿಸಿಕೊಳ್ಳುತ್ತಿದ್ದಾರೆ. ಇದರಿಂದಾಗಿ ಕೃತಕ ಅಭಾವ ಸೃಷ್ಟಿಯಾಗಿದೆ ಎಂದರು.