ಹೊಸದಿಲ್ಲಿ: ಪಂಚರಾಜ್ಯಗಳ ಚುನಾವಣಾ ಫಲಿತಾಂಶದಲ್ಲಿ ಕಾಂಗ್ರೆಸ್‌ನ ಭರ್ಜರಿ ಜಯದ ಬಳಿಕ ಪಕ್ಷದ ಸಾಮಾಜಿಕ ತಾಣಗಳ ಮುಖ್ಯಸ್ಥೆ ರಮ್ಯಾ ಅವರು ಪ್ರಧಾನಿಗೆ ಟಾಂಗ್ ನೀಡಿದ್ದು, ಬಿಜೆಪಿ ಮುಕ್ತ ಭಾರತ ಎಂದು ಫೋಟೋ ಪೋಸ್ಟ್ ಮಾಡಿದ್ದಾರೆ.
2013 ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅವರು ಮಾಡಿದ್ದ ಟ್ವೀಟ್‌ನ ಪ್ರಿಂಟ್‌ಸ್ಕ್ರೀನ್ ತೆಗೆದು ಕಾಂಗ್ರೆಸ್ ಮುಕ್ತ ಭಾರತ ಎಂದಿದ್ದಲ್ಲಿ ಕಾಂಗ್ರೆಸ್ ಹೆಸರನ್ನು ಅಳಿಸಿ ಕೇಸರಿ ಬಣ್ಣದಲ್ಲಿ ಬಿಜೆಪಿ ಎಂದು ಬರೆದಿದ್ದಾರೆ.
ಪ್ರಧಾನಿ ಮೋದಿ ಅವರು ಪಂಚ ರಾಜ್ಯಗಳ ಫಲಿತಾಂಶ ಪ್ರಕಟವಾಗಿದ್ದು ಯಾವ ಬದಿಗೆ ಗಾಳಿ ಬೀಸುತ್ತಿದೆ ಎಂದು ಅರ್ಥವಾಗಿದೆ. ಇದು ಕಾಂಗ್ರೆಸ್ ಮುಕ್ತ ಭಾರತದ ಆರಂಭ ಎಂದು ಟ್ವೀಟ್ ಮಾಡಿದ್ದರು.
ಮಧ್ಯಪ್ರದೇಶ, ಛತ್ತೀಸ್‌ಗಢ, ರಾಜಸ್ಥಾನಗಳಲ್ಲಿ ಬಿಜೆಪಿ ಅಧಿಕಾರ ಕಳೆದುಕೊಂಡಿದೆ. ಮೂರು ರಾಜ್ಯಗಳಲ್ಲಿ ಕಾಂಗ್ರೆಸ್ ಸರ್ಕಾರ ರಚಿಸುತ್ತಿದೆ.