Advertisement

RSS ಮುಖಂಡರಿಂದ ಧ್ವಜಾರೋಹಣ: ಮುಖ್ಯ ಶಿಕ್ಷಕಿ ವಿರುದ್ಧ ಕ್ರಮಕ್ಕೆ ಆಗ್ರಹ

09:15 PM Feb 05, 2024 | Team Udayavani |

ಮಂಡ್ಯ: ಗಣರಾಜ್ಯೋತ್ಸವ ದಿನದಂದು ಸರಕಾರಿ ನಿಯಮವನ್ನು ಉಲ್ಲಂಘಿಸಿ ಆರೆಸ್ಸೆಸ್‌ ಮುಖಂಡರಿಂದ ಸರಕಾರಿ ಶಾಲೆಯಲ್ಲಿ ರಾಷ್ಟ್ರ ಧ್ವಜಾರೋಹಣ ಮಾಡಿಸಲಾಗಿದೆ ಎಂಬ ಆರೋಪ ಕೇಳಿ ಬಂದಿದ್ದು, ಮುಖ್ಯ ಶಿಕ್ಷಕಿ ವಿರುದ್ಧ ಕ್ರಮಕ್ಕೆ ಆಗ್ರಹಿಸಲಾಗಿದೆ.

Advertisement

ಜ.26ರಂದು ಗಣರಾಜ್ಯೋತ್ಸವ ದಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಿಯಮಗಳ ಪ್ರಕಾರ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷರು ಅಥವಾ ಮುಖ್ಯ ಶಿಕ್ಷಕರು ಧ್ವಜಾರೋಹಣ ಮಾಡಬೇಕು. ಅವರಿಬ್ಬರು ಇದ್ದರೂ ಆರೆಸ್ಸೆಸ್‌ ಸಂಚಾಲಕರಿಂದ ಧ್ವಜಾರೋಹಣ ಮಾಡುವ ಮೂಲಕ ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂದು ಎಸ್‌ಡಿಎಂಸಿ ಸದಸ್ಯರು ಹಾಗೂ ಪೋಷಕರು ದೂರಿದ್ದಾರೆ.

ಇದಕ್ಕೆ ಶಾಲೆಯ ಮುಖ್ಯ ಶಿಕ್ಷಕಿ ಸುಶೀಲಮ್ಮ ಕಾರಣರಾಗಿದ್ದಾರೆ. ವಿದ್ಯಾರ್ಥಿಗಳಲ್ಲಿ ಹಿಂದುತ್ವವನ್ನು ಬಿತ್ತಿ ಗೊಂದಲ ಮೂಡಿಸಿದ್ದಾರೆ. ವಿದ್ಯಾರ್ಥಿಗಳ ಭವಿಷ್ಯವನ್ನು ಲೆಕ್ಕಿಸದೆ ಪ್ರತ್ಯಕ್ಷವಾಗಿ ಶಾಲಾ ಶಿಕ್ಷಣ ಇಲಾಖೆಗೆ ಅವಮಾನ ಮಾಡಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳದಿದ್ದರೆ ಹೋರಾಟ ನಡೆಸುವುದಾಗಿ ದೂರಿನಲ್ಲಿ ಎಚ್ಚರಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next