Advertisement

ಗೃಹ ಮಂಡಳಿಯಿಂದ ಇನ್ಮುಂದೆ ನಿವೇಶನ ಬದಲು ಫ್ಲ್ಯಾಟ್: ವಿ.ಸೋಮಣ್ಣ

09:56 PM Jun 20, 2020 | Sriram |

ಬೆಂಗಳೂರು: ಗೃಹ ಮಂಡಳಿಯಿಂದ ಮುಂದಿನ ದಿನಗಳಲ್ಲಿ ನಿವೇಶನ ಬದಲು ಅಪಾರ್ಟ್‌ಮೆಂಟ್‌ ನಿರ್ಮಿಸಿ ಫ್ಲ್ಯಾಟ್ ನೀಡಲಾಗುವುದು ಎಂದು ವಸತಿ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.

Advertisement

ಶನಿವಾರ ಕರ್ನಾಟಕ ಗೃಹ ಮಂಡಳಿ ಹಾಗೂ ವಸತಿ ಇಲಾಖೆಯ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದ ಅವರು, ವಾಸದ ಮನೆಗಳಿಗೆ ಹೆಚ್ಚಿನ ಬೇಡಿಕೆ ಇರುವ ಹಿನ್ನೆಲೆಯಲ್ಲಿ ಫ್ಲ್ಯಾಟ್ ನಿರ್ಮಿಸಿದರೆ ಹೆಚ್ಚಿನ ಜನರಿಗೆ ನೀಡಬಹುದಾಗಿದೆ ಎಂದು ತಿಳಿಸಿದರು.

ನಗರ ಸ್ಥಳೀಯ ಸಂಸ್ಥೆಗಳ ಮೂಲಕ ರಾಜೀವ್‌ಗಾಂಧಿ ವಸತಿ ಯೋಜನೆ, ಕೊಳೆಗೇರಿ ಅಭಿವೃದ್ಧಿ ಮಂಡಳಿಯ ನಿವೇಶನದ ಹಕ್ಕು ಪತ್ರ ನೀಡಲಾಗುವುದು. ಈ ಕುರಿತು ಸಂಪುಟದಲ್ಲೂ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು.

ಬೆಂಗಳೂರಿನಲ್ಲಿ ಬಡವರಿಗೆ ಸಣ್ಣ ವಿಸ್ತೀರ್ಣದ ನಿವೇಶನ ನೀಡುವ ಯೋಜನೆ ರೂಪಿಸಲಾಗುವುದು. ಆದರೆ, ನಿವೇಶನ ಏಳು ವರ್ಷ ಮಾರಾಟ ಮಾಡುವಂತಿಲ್ಲ ಎಂದು ತಿಳಿಸಿದರು.

ಕರ್ನಾಟಕ ಗೃಹ ಮಂಡಳಿ ಸ್ವಾಯತ್ತ ಸಂಸ್ಥೆಯಾಗಿದ್ದು ತನ್ನ ಸ್ವಂತ ಕಾಲಿನ ಮೇಲೆ ನಿಂತಿದೆ. ಸಾರ್ವಜನಿಕರಿಗೆ ಮಂಡಳಿ ಮತ್ತಷ್ಟು ಹತ್ತಿರವಾಗುವ ನಿಟ್ಟಿನಲ್ಲಿ ಕಾಯೋನ್ಮುಖವಾಗಿದ್ದೇವೆ ಎಂದು ಹೇಳಿದರು.

Advertisement

ಗೃಹ ಮಂಡಳಿಯ ಕಾರ್ಯಪಾಲಕ ಅಭಿಯಂತರ, ಸಹಾಯಕ ಕಾರ್ಯಪಾಲಕ ಅಭಿಯಂತರರ ಕಾರ್ಯನಿರ್ವಹಣೆ ಮೇಲೆ ನಿಗಾ ವಹಿಸಲು ಅವರ ವಾನಗಳಿಗೆ ಜಿಪಿಎಸ್‌ ಅಳವಡಿಸಲು ಸೂಚಿಸಲಾಗಿದೆ ಎಂದರು.

ವಿಜಯಪುರದಲ್ಲಿ ನಿವೇಶನ ಹಗರಣದ ಬಗ್ಗೆ ಪ್ರತಿಕ್ರಿಯಿಸಿ ಅದು ಹಿಂದಿನ ಸರ್ಕಾರದಲ್ಲಿ ಆಗಿದೆ. ಹಗರಣದಲ್ಲಿ ಭಾಗಿಯಾಗಿರುವವರ ಪೈಕಿ ಒಬ್ಬ ಮೃತಪಟ್ಟಿದ್ದಾನೆ. ಉಳಿದವರು ಇದ್ದು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ತುಮಕೂರು, ಮೈಸೂರಿನಲ್ಲಿಯೂ ನಿವೇಶನಗಳ ಹಂಚಿಕೆಯಲ್ಲಿ ಹಗರಣ ನಡೆದಿದೆ. ಆದರೆ, ನಿವೇಶನಗಳ ಹಣ ಗೃಹ ಮಂಡಳಿಗೆ ಇನ್ನೂ ಪಾವತಿಯಾಗಿಲ್ಲ. ಇದೆಲ್ಲದರ ಬಗ್ಗೆ ತನಿಖೆಗೆ ಕಾರ್ಯದರ್ಶಿ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next