Advertisement
ನಗರದ ಟೌನ್ ಹಾಲ್‌ನ ಬಿಜಿಎಸ್ ವೃತ್ತದಲ್ಲಿ ಸಮಾವೇಶಗೊಂಡ ನೂರಾರು ಆಶಾ, ಅಂಗನವಾಡಿ, ಅಕ್ಷರ ದಾಸೋಹ ಕಾರ್ಮಿಕರು ಕೇಂದ್ರ ಸರ್ಕಾರ ಕಾರ್ಮಿಕರಿಗೆ ವಂಚನೆ ಮಾಡುತ್ತಿರುವುದನ್ನು ವಿರೋಧಿಸಿ ಘೋಷಣೆ ಕೂಗುತ್ತಾ ಜಿಲ್ಲಾಧಿಕಾರಿಗಳ ಕಚೇರಿಯ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಎಐಯುಟಿಯುಸಿ ಮುಖಂಡ ಮಜೀರ್ ಮಾತನಾಡಿ, ಕೇಂದ್ರದಲ್ಲಿ ಅಧಿಕಾರದಲ್ಲಿರುವ ಎನ್ ಡಿಎ ಸರ್ಕಾರ ದೇಶದ ಕೋಟ್ಯಂತ ಕಾರ್ಮಿಕರ ಬೇಡಿಕೆಗಳನ್ನು ನಿರ್ಲಕ್ಷಿéಸುತ್ತಿದೆ ಮತ್ತು ಕಾರ್ಮಿಕರ ಹೋರಾಟಗಳಿಗೆ ಸ್ಪಂದಿಸದೆ ಮೌನ ವಹಿಸಿದೆ ಎಂದು ಆರೋಪಿಸಿ ದೇಶವ್ಯಾಪಿ ಅಂಗನವಾಡಿ, ಆಶಾ ಮತ್ತು ಬಿಸಿಯೂಟ ಕಾರ್ಯಕರ್ತೆಯರು ಒಂದು ದಿನ ಮುಷ್ಕರ ನಡೆಸುತ್ತಿದ್ದಾರೆ ಎಂದರು.
Related Articles
Advertisement
ಸರ್ಕಾರದ ಧೋರಣೆ ಖಂಡಿಸಿ ಧರಣಿಮಧುಗಿರಿ: ಆಶಾ ಅಂಗನವಾಡಿ ಹಾಗೂ ಬಿಸಿಯೂಟ ಕಾರ್ಯಕರ್ತೆಯರನ್ನು ಕಾರ್ಮಿಕರೆಂದು ಪರಿಗಣಿಸಬೇಕು ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ತಾಲೂಕು ಶಾಖೆ ಹಾಗೂ ಎಐಯುಟಿಯುಸಿ ಪದಾಧಿಕಾರಿಗಳು ಪಟ್ಟಣದ ಪ್ರಮುಖ
ಬೀದಿಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು. ತಿಂಗಳಿಗೆ 18 ಸಾವಿರಕ್ಕಿಂತ ಕಡಿಮೆ ಇರದಂತೆ ವೇತನ ನೀಡಬೇಕು, ಮಾಸಿಕ 3 ಸಾವಿರ ಪಿಂಚಣಿಯ ಜೊತೆಗೆ ಸಾಮಾಜಿಕ ಭದ್ರತೆ ನೀಡಬೇಕೆಂದು ಆಗ್ರಹಿಸಿದರು. ಗೌರವ ಧನ ಮತ್ತು ಪ್ರೋತ್ಸಾಹ ಧನದ ಹೆಸರಿನಲ್ಲಿ ಸರ್ಕಾರವೇ ನಮ್ಮನ್ನು ಶೋಷಣೆ ಮಾಡುತ್ತಿರುವುದು ಖಂಡನೀಯ. ಅಂಗನ ವಾಡಿ ಕಾರ್ಯಕರ್ತೆಯರು ಹಾಗೂ ಸಹಾಯ ಕರಿಗೆ ಮಾಸಿಕ 3 ಸಾವಿರ ಗೌರವ ಧನ ನೀಡಲಾಗುತ್ತಿದೆ. ಆಶಾ ಕಾರ್ಯಕರ್ತೆಯರಿಗೆ ಮಾಡುವ ಕೆಲಸಗಳನ್ನಾಧರಿಸಿ ಪ್ರೋತ್ಸಾಹ ಧನದ ನೀಡುವ ವ್ಯವಸ್ಥೆ ಮಾಡಿರುವುದರಿಂದ ಆದಾಯ ಅನಿಶ್ಚಿತವಾಗಿದೆ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಗ್ರೇಡ್ 2 ತಹಶೀಲ್ದಾರ್ ಎ.ತಿಪ್ಪೇಸ್ವಾಮಿ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ತಾಲೂಕು ಶಾಖೆಯ ಅಧ್ಯಕ್ಷೆ ತಿಮ್ಮಾಜಮ್ಮ, ಕಾರ್ಯದರ್ಶಿ ಭಾರತಿ, ಪದಾಧಿಕಾರಿಗಳಾದ ಮಲ್ಲಮ್ಮ, ಕಮಲಮ್ಮ, ಸುಜಾತ, ಪುಷ್ಪಲತಾ, ಆಶಾ, ಲಕ್ಷ್ಮಮ್ಮ, ಸುವರ್ಣ, ಮಂಜುಳಾ, ಶ್ರೀರಂಗಮ್ಮ, ಸುಗುಣ, ಎಐಯುಟಿಯುಸಿ ಅಶ್ವಿನಿ ಇತರರು ಈ ಸಂದರ್ಭದಲ್ಲಿ
ಉಪಸ್ಥಿತರಿದ್ದರು.