Advertisement

ಐತಿಹಾಸಿಕ ಕ್ಷಣ: ನಮೀಬಿಯಾದಿಂದ ಭಾರತಕ್ಕೆ ಬಂದಿಳಿದ ಎಂಟು ಚೀತಾಗಳು

09:19 AM Sep 17, 2022 | Team Udayavani |

ಗ್ವಾಲಿಯರ್: ಭಾರತದ ಕಾಡುಗಳಿಂದ ಕಣ್ಮರೆಯಾಗಿದ್ದ ಚೀತಾಗಳು ಸುಮಾರು 70 ವರ್ಷಗಳ ಬಳಿಕ ಮತ್ತೆ ಬಂದಿದೆ. ನಮೀಬಿಯಾ ದೇಶದಿಂದ ಎಂಟು ಚೀತಾಗಳು ವಿಶೇಷ ವಿಮಾನದಲ್ಲಿ ಭಾರತಕ್ಕೆ ಆಗಮಿಸಿದೆ.

Advertisement

ನಮೀಬಿಯಾದಿಂದ 8 ಚೀತಾಗಳನ್ನು ಹೊತ್ತ ವಿಶೇಷ ಚಾರ್ಟರ್ಡ್ ಕಾರ್ಗೋ ವಿಮಾನವು ಮಧ್ಯಪ್ರದೇಶದ ಗ್ವಾಲಿಯರ್‌ ನಲ್ಲಿರುವ ಭಾರತೀಯ ವಾಯುಪಡೆಯ ನಿಲ್ದಾಣಕ್ಕೆ ಇಂದು ಬೆಳಗ್ಗೆ ಬಂದಿಳಿಯಿತು.

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತಮ್ಮ ಜನ್ಮದಿನದಂದು ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಚೀತಾಗಳನ್ನು ಬಿಡುಗಡೆ ಮಾಡಲಿದ್ದಾರೆ.

ಇದನ್ನೂ ಓದಿ:ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ : ಸರ್ದಾರ ವಲ್ಲಭಭಾಯಿ ಪಟೇಲ್ ಪ್ರತಿಮೆಗೆ ಸಿಎಂ ಮಾಲಾರ್ಪಣೆ

ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಶುಕ್ರವಾರ ಮಾತನಾಡಿ, ದಕ್ಷಿಣ ಆಫ್ರಿಕಾದಿಂದ ಭಾರತಕ್ಕೆ ಚೀತಾಗಳನ್ನು ಮರು-ಪರಿಚಯಿಸಿದ್ದು, ಈ ದಶಕದಲ್ಲಿ ವನ್ಯಜೀವಿಗಳ ಅತಿದೊಡ್ಡ ಘಟನೆ ಎಂದು ಬಣ್ಣಿಸಿದ್ದಾರೆ.

Advertisement

“ನಮೀಬಿಯಾದಿಂದ ಚೀತಾಗಳು ಕುನೋ ರಾಷ್ಟ್ರೀಯ ಉದ್ಯಾನವನಕ್ಕೆ ಬರುತ್ತಿವೆ ಎಂಬುದಕ್ಕಿಂತ ಮಧ್ಯಪ್ರದೇಶಕ್ಕೆ ದೊಡ್ಡ ಕೊಡುಗೆ ಇಲ್ಲ. ಅಳಿದು ಹೋದ ಚೀತಾಗಳನ್ನು ಮತ್ತೆ ಪರಿಚಯಿಸುವ ಇದು ಐತಿಹಾಸಿಕ ಹೆಜ್ಜೆಯಾಗಿದೆ. ಇದು ಈ ಶತಮಾನದ ಅತಿದೊಡ್ಡ ವನ್ಯಜೀವಿ ಘಟನೆಯಾಗಿದೆ. ಇದು ಮಧ್ಯಪ್ರದೇಶದ ಪ್ರವಾಸೋದ್ಯಮಕ್ಕೆ ಮತ್ತಷ್ಟು ಬೂಸ್ಟ್ ನೀಡಲಿದೆ” ಎಂದು ಚೌಹಾಣ್ ಹೇಳಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next