Advertisement

Flight: ಲ್ಯಾಂಡಿಂಗ್ ವೇಳೆ ವಿಮಾನದಲ್ಲಿ ಬೆಂಕಿ… 367 ಪ್ರಯಾಣಿಕರು ಅದೃಷ್ಟವಶಾತ್ ಪಾರು

03:31 PM Jan 02, 2024 | Team Udayavani |

ಟೋಕಿಯೊ: ಟೋಕಿಯೊದ ಹನೆಡಾ ವಿಮಾನ ನಿಲ್ದಾಣದ ರನ್‌ವೇಯಲ್ಲಿ ಜಪಾನ್ ಏರ್‌ಲೈನ್ಸ್ ಗೆ ಸೇರಿದ ವಿಮಾನ(JAL 516) ವೊಂದಕ್ಕೆ ಬೆಂಕಿ ಹೊತ್ತಿಕೊಂಡಿದೆ.

Advertisement

ಮೂಲಗಳ ಪ್ರಕಾರ ವಿಮಾನ ಲ್ಯಾಂಡ್ ಆಗುತ್ತಿದ್ದಂತೆ ಇನ್ನೊಂದು ವಿಮಾನಕ್ಕೆ ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಆದರೆ ವಿಡಿಯೋದಲ್ಲೂ ಸ್ಪಷ್ಟ ಚಿತ್ರಣ ಕಾಣದ ಕಾರಣ ಬೆಂಕಿ ಹೊತ್ತಿಕೊಳ್ಳಲು ಏನು ಕಾರಣ ಎಂಬುದು ಇನ್ನಷ್ಟೇ ತಿಳಿದುಬರಬೇಕಾಗಿದೆ.

ಬೆಂಕಿ ಹೊತ್ತಿಕೊಂಡ ಪರಿಣಾಮ ಕೆಲಹೊತ್ತು ನಿಲ್ದಾಣದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದ್ದು ಕೂಡಲೇ ಕಾರ್ಯಪ್ರವೃತ್ತರಾದ ಸಿಬಂದಿಗಳು ವಿಮಾನದಲ್ಲಿದ್ದ 367ಪ್ರಯಾಣಿಕರನ್ನು ರಕ್ಷಣೆ ಮಾಡಿದ್ದಾರೆ ಎನ್ನಲಾಗಿದೆ.

ಘಟನೆಯಿಂದ ವಿಮಾನದ ಹೆಚ್ಚಿನ ಭಾಗಗಳು ಸುಟ್ಟು ಹೋಗಿದ್ದು ದಟ್ಟ ಹೊಗೆ ಕಾಣಿಸಿಕೊಂಡಿದೆ ಅಗ್ನಿ ಶಾಮಕ ಸಿಬ್ಬಂದಿಯ ಕಾರ್ಯಾಚರಣೆಯಿಂದ ಸಂಭವನೀಯ ಅವಘಡ ತಪ್ಪಿದೆ.

ಇದನ್ನೂ ಓದಿ: Just Pass Movie; ಹುಡುಗರಿಗೆ ಗುರು ದೆಸೆ; ಪ್ರಿನ್ಸಿಪಾಲ್ ಪಾತ್ರದಲ್ಲಿ ರಂಗಾಯಣ ರಘು

Advertisement

Advertisement

Udayavani is now on Telegram. Click here to join our channel and stay updated with the latest news.

Next