Advertisement
ಈಚೆಗಷ್ಟೇ ಉದ್ಘಾಟನೆಗೊಂಡಿರುವ ನೂತನ ಅಲೆಗಳಲ್ಲಿ ತೇಲುವ ಸೇತುವೆಯನ್ನು ನೋಡಲು ಮತ್ತು ಅನುಭವಿಸಲು ಹೆಚ್ಚಿನ ಸಂಖ್ಯೆಯಲ್ಲಿ ಜನರು ಬಂದಿದ್ದರೂ ಅವಕಾಶ ನೀದಿರಲಿಲ್ಲ. ಅಲೆಗಳ ಅಬ್ಬರ ಹೆಚ್ಚಿದ್ದರಿಂದ ಸುರಕ್ಷೆಯ ದೃಷ್ಟಿಯಿಂದ ಪ್ರವಾಸಿಗರು ನೀರಿಗೆ ಇಳಿಯದಂತೆ ಸ್ವಯಂಸೇವಕರು ಕಟ್ಟೆಚ್ಚರ ವಹಿಸಿದ್ದರು. ಇಲ್ಲಿನ ಜೀವ ರಕ್ಷಕ ತಂಡ ಎಲ್ಲರ ಮೇಲೂ ನಿಗಾ ಇರಿಸಿ, ನೀರಿಗಿಳಿಯಲು ನಿಷೇಧ ಹೇರಿತ್ತು.
Related Articles
Advertisement
ಏಕಾಏಕಿ ಸಮುದ್ರದ ಅಬ್ಬರ ಕಾಣಿಸಿಕೊಂಡ ಕಾರಣ ಸೇತುವೆಯನ್ನು ಕಳಚಲು ಸಾಧ್ಯವಾಗಲಿಲ್ಲ.ತೇಲುವ ಸೇತುವೆ ಮತ್ತೆ ಸುರಕ್ಷಿತವಾಗಿ ಕಾರ್ಯಾರಂಭ ಮಾಡಲಿದೆ ಎಂದು ತಿಳಿದು ಬಂದಿದೆ. ಎಲ್ಲಾ ಸುರಕ್ಷತಾ ಕ್ರಮಗಳೊಂದಿಗೆ ಮತ್ತೆ ಕಾರ್ಯಾರಂಭ ಮಾಡಲಿದೆ. ಸುರಕ್ಷತೆ ಮತ್ತು ಲೈಫ್ ಜಾಕೆಟ್ ಧರಿಸಿದ ಬಳಿಕವೇ ಸೇತುವೆಯಲ್ಲಿ ನಡೆಯಲು ಅವಕಾಶ ನೀಡಲಾಗುತ್ತದೆ ಎಂದು ಬೀಚ್ ಅಭಿವೃದ್ಧಿ ಸಮಿತಿಯ ನಿರ್ವಾಹಕ ಸುದೇಶ್ ಶೆಟ್ಟಿ ಹೇಳಿದ್ದಾರೆ.
ಸೈಕ್ಲೋನ್ ಎಫೆಕ್ಟ್ ಮತ್ತು ಭಾರೀ ಗಾಳಿಯಿಂದಾಗಿ ತೇಲುವ ಸೇತುವೆಗೆ ಯಾವುದೇ ಹಾನಿಯಾಗದಂತೆ ನಾವು ಸೇತುವೆಯ ಲಾಕ್ ಳನ್ನು ಸಂಪರ್ಕ ಕಡಿತಗೊಳಿಸಿದ್ದೇವೆ. ಇದರಿಂದಾಗಿ ಇಂದು ಬೆಳಗ್ಗೆ ಸೇತುವೆಯ ಕೆಲವು ಬ್ಲಾಕ್‌ಗಳು ಸಮುದ್ರದಲ್ಲಿ ತೇಲುತ್ತಿದ್ದವು. ಸಾವು-ನೋವು ಸಂಭವಿಸಿದೆ ಎಂದು ಜನರು ವದಂತಿ ಹಬ್ಬಿದ್ದಾರೆ. ಯಾವುದೇ ಪ್ರಾಣಹಾನಿಯಾಗಿಲ್ಲ ಅಥವಾ ಯಾರಿಗೂ ಯಾವುದೇ ಹಾನಿಯಾಗಿಲ್ಲ ಎಂದು ನಾವು ಬಲವಾಗಿ ದೃಢೀಕರಿಸುತ್ತೇವೆ. ಪ್ರಸ್ತುತ ತೇಲುವ ಸೇತುವೆಯನ್ನು ಮುಚ್ಚಲಾಗಿದೆ ಏಕೆಂದರೆ ಯಾವುದೇ ಜಲಕ್ರೀಡೆ ಚಟುವಟಿಕೆಗಳನ್ನು ಕೆಲ ಕಾಲ ನಿಲ್ಲಿಸಲು ಆಡಳಿತದಿಂದ ಸೂಚನೆ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.
ಬೀಚ್‌ನ ದಕ್ಷಿಣ ದಿಕ್ಕಿನ ಭಜನ ಮಂದಿರ ಎದುರು ಕೃಷ್ಣಕಟ್ಟೆಯ ಬಳಿ ಸಮುದ್ರದಲ್ಲಿ ಈಜಾಡುತ್ತಿದ್ದ ಮೂವರನ್ನು ಇಲ್ಲಿನ ಜೀವರಕ್ಷಕ ತಂಡವು ರಕ್ಷಿಸಿದೆ. ರವಿವಾರ ಸಂಜೆ 6ರ ವೇಳೆಗೆ ಸಮುದ್ರದಲೆಗೆ ಕೊಚ್ಚಿ ಹೋಗುತ್ತಿದ್ದ ಈ ಮೂವರನ್ನು ಲೈಫ್ಗಾರ್ಡ್ ಜೆಸ್ಕಿ ಮೂಲಕ ರಕ್ಷಿಸಿತ್ತು.