Advertisement
ಉಪ್ಪಿನಂಗಡಿಯಿಂದ ಕಡಬ ಮೂಲಕ ಸುಬ್ರಹ್ಮಣ್ಯಕ್ಕೆ ಸಂಚರಿಸ ಬೇಕಾದ ವಾಹನ ಗಳು ನೆಲ್ಯಾಡಿ, ಇಚ್ಲಂ ಪಾಡಿ ಮೂಲಕ ಬಳಸು ದಾರಿಯಲ್ಲಿ ಸಾಗಬೇಕಾಯಿತು. ಅಪರಾಹ್ನ 2.30ರ ವೇಳೆಗೆ ನೆರೆ ನೀರು ಸೇತುವೆಯ ಮೇಲಿ ನಿಂದ ಇಳಿದ ಬಳಿಕ ವಾಹನ ಸಂಚಾರ ಸುಗಮಗೊಂಡಿತು. ಆದರೆ ಹೊಳೆಯ ನೀರು ಸೇತುವೆಗೆ ತಾಗುತ್ತಿದ್ದು, ಮತ್ತೆ ಯಾವುದೇ ಕ್ಷಣದಲ್ಲಿ ಸೇತುವೆಯ ಮೇಲೆ ನೆರೆನೀರು ಬರುವ ಸಾಧ್ಯತೆಗಳಿವೆ.
ಕಳೆದ ಹಲವು ವರ್ಷಗಳಿಂದ ಮಳೆಗಾಲದಲ್ಲಿ ಹೊಸ್ಮಠ ಮುಳುಗು ಸೇತುವೆ ನೆರೆ ನೀರಿನಲ್ಲಿ ಮುಳುಗಡೆಯಾಗಿ ಉಪ್ಪಿನಂಗಡಿ-ಕಡಬ ರಸ್ತೆಯಲ್ಲಿ ಸಂಚರಿಸುವ ಪ್ರಯಾಣಿಕರು ತೊಂದರೆ ಅನುಭವಿಸುತ್ತಲೇ ಬಂದಿದ್ದಾರೆ. ಈ ವರ್ಷದ ಮಳೆಗಾಲದಲ್ಲಿ ಹೊಸ್ಮಠ ಸೇತುವೆಗೆ ಇದು ಪ್ರಥಮ ಮುಳುಗಡೆ. ಹೊಸ ಸೇತುವೆ ಅಪೂರ್ಣ
ಹೊಸಮಠದಲ್ಲಿ ನೂತನ ಸೇತುವೆ ನಿರ್ಮಾಣಕ್ಕಾಗಿ 7 ಕೋಟಿ 50 ಲಕ್ಷ ರೂ. ಬಿಡುಗಡೆಯಾಗಿ ಕಾಮಗಾರಿ ಪ್ರಗತಿಯಲ್ಲಿದೆ. ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದಡಿಯಲ್ಲಿ ಅನುದಾನ ಮಂಜೂರಾಗಿದ್ದು ಕಾಮಗಾರಿ ನಡೆಯುತ್ತಿದೆ. ಈಗ ಇರುವ ಸೇತುವೆಗಿಂತ ಎತ್ತರದಲ್ಲಿ ಹೊಸ ಸೇತುವೆ ನಿರ್ಮಾಣವಾಗಿದೆ. 125 ಮೀ. ಉದ್ದ ಹಾಗೂ 12 ಮೀ. ಅಗಲದಲ್ಲಿ ತಡೆಬೇಲಿಯನ್ನೊಳಗೊಂಡ 6 ಪಿಲ್ಲರ್‌ಗಳ ಸುಂದರ ಸೇತುವೆ ನಿರ್ಮಾಣಗೊಂಡು ಸಾರ್ವಜನಿಕರ ಉಪ ಯೋಗಕ್ಕೆ ತೆರೆದುಕೊಳ್ಳಲಿದೆ. ಪ್ರಸ್ತುತ ಇರುವ ಸೇತುವೆಯನ್ನು ಹಾಗೆಯೇ ಉಳಿಸಿ ಕೊಂಡು ಸಂಚಾರಕ್ಕೆ ತೊಂದರೆ ಯಾಗದ ರೀತಿಯಲ್ಲಿ ಸೇತುವೆ ನಿರ್ಮಾಣ ಕಾಮಗಾರಿ ನಡೆಸಲಾಗಿದೆ. ಆದರೆ ಕಾಮಗಾರಿ ಪೂರ್ತಿಯಾಗಿಲ್ಲ. ಹೊಸ ಸೇತುವೆಯ ಎರಡೂ ಬದಿಗಳಲ್ಲಿ ಸಂಪರ್ಕ ರಸ್ತೆ ನಿರ್ಮಾಣದ ಕೆಲಸವೂ ಆಗಿಲ್ಲ.