ಉಡುಪಿ: ನಿರಂತರವಾಗಿ ಸುರಿದ ಮಳೆಯಿಂದಾಗಿ ಸ್ವರ್ಣ ನದಿಯು ಉಕ್ಕಿ ಹರಿಯುತ್ತಿದ್ದು, ಉಪ್ಪೂರು, ಬೈಕಾಡಿ, ತೋನ್ಸೆ, ನಯಂಪಳ್ಳಿ ಹಾಗೂ ತಗ್ಗು ಪ್ರದೇಶಗಳು ಮುಳುಗಡೆಯಾಗಿವೆ.
ಶನಿವಾರ ಸಂಜೆ ಆರಂಭವಾದ ಮಳೆ ಬಿರುಸುಗೊಂಡಿತ್ತು. ರಾತ್ರಿ ಮೂರು ಘಂಟೆ ಸುಮಾರಿಗೆ ಸ್ವರ್ಣ ನದಿಯಲ್ಲಿ ಪ್ರವಾಹ ಅಧಿಕವಾಗಿದ್ದು, ಇಂದು ಬೆಳಿಗ್ಗೆಯೂ ಮುಂದುವರಿದ ಕಾರಣ ಅನಿರೀಕ್ಷಿತ ಪರಿಸ್ಥಿತಿ ಸಂಭವಿಸಿದೆ.
ಉಪ್ಪೂರಿನ ಹಲವೆಡೆ ಮನೆಗಳಿಗೆ ನೀರು ನುಗ್ಗಿದ್ದು, ಜನರು ಪರದಾಡುವಂತಾಗಿದೆ. ತಮ್ಮನ್ನು ರಕ್ಷಿಸಲು ದೋಣಿ ಕಳುಹಿಸುವಂತೆ ಕೇಳಿಕೊಂಡರೂ ಯಾರೂ ಬಂದಿಲ್ಲ ಎನ್ನುತ್ತಿದ್ದಾರೆ.
ಇದನ್ನೂ ಓದಿ: ದಶಕದ ಮಳೆಗೆ ಬೆಚ್ಚಿದ ಕೃಷ್ಣನಗರಿ: ಕ್ರೇನ್, ದೋಣಿ ಬಳಸಿ ಜನರ ರಕ್ಷಣೆ, ಲಕ್ಷಾಂತರ ರೂ. ನಷ್ಟ
ಉಡುಪಿಯಲ್ಲಿ ದಶಕಗಳಿಂದ ಕಂಡು ಕೇಳರಿಯದ ಮಳೆಯಾಗುತ್ತಿದ್ದು, ಹಲವವು ಪ್ರದೇಶಗಳು ಜಲಾವೃತವಾಗಿದೆ.
ಇದನ್ನೂ ಓದಿ:ಉತ್ತರೆಯ ಆರ್ಭಟಕ್ಕೆ ಕರಾವಳಿ ತತ್ತರ: ಭಾರಿ ಮಳೆಗೆ ಹಲವು ಪ್ರದೇಶಗಳು ಜಲಾವೃತ