Advertisement

ಪ್ರವಾಹ ಹಾನಿ ಕಾಮಗಾರಿ ಪರಿಶೀಲನೆ

11:40 AM Jan 29, 2020 | Team Udayavani |

ಬಾಗಲಕೋಟೆ: ಜಿಲ್ಲೆಯ ಬಾಗಲಕೋಟೆ ಮತ್ತು ಮುಧೋಳ ತಾಲೂಕಿನ ಪ್ರವಾಹದಿಂದ ಹಾನಿಗೊಳಪಟ್ಟ ಶಾಲೆ, ಅಂಗನವಾಡಿ, ರಸ್ತೆ ಹಾಗೂ ಹೆಸ್ಕಾಂ ಕಾಮಗಾರಿ ಸೇರಿದಂತೆ ಇತರೆ ದುರಸ್ತಿ ಕಾಮಗಾರಿಗಳ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅಂಜುಂ ಪರ್ವೇಜ್‌ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Advertisement

ಮಂಗಳವಾರ ಮುಧೋಳ ತಾಲೂಕಿನ ಉತ್ತೂರಿನಲ್ಲಿ ಹೆಸ್ಕಾಂ ಕಾಮಗಾರಿ ಹಾಗೂ ಲೋಕೋಪಯೋಗಿ ಇಲಾಖೆ ಯಿಂದ ಕೈಗೊಂಡ ರಸ್ತೆ ದುರಸ್ತಿ ಹಾಗೂ ಪ್ರವಾಹದಿಂದ ಹಾನಿಗೊಳಗಾದ ಶಾಲಾ ಹಾಗೂ ಅಂಗನವಾಡಿ ಕಟ್ಟಡಗಳ ಕಾಮಗಾರಿಗಳ ಪರಿಶೀಲನೆ ನಡೆಸಿದರು. ರಂಜನಗಿ ಗ್ರಾಮದಲ್ಲಿ ಕೈಗೊಳ್ಳಬೇಕಾದ ವಿದ್ಯುತ್‌ ಕಾಮಗಾರಿಗಳನ್ನು ಸಹ ಪರಿಶೀಲನೆ ನಡೆಸಿದರು.

ನಂತರ ಸಮಾಜ ಕಲ್ಯಾಣ ಇಲಾಖೆಯಿಂದ ನಿರ್ಮಾಣವಾಗುತ್ತಿರುವ ವಾಲ್ಮೀಕಿ ಭವನ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗಿರಿಗಾಂವ ಪುನರ್ವಸತಿ ಕೇಂದ್ರದಲ್ಲಿ ನಿರ್ಮಿತಿ ಕೇಂದ್ರದಿಂದ ನಿರ್ಮಾಣವಾಗುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವಸತಿ ನಿಲಯಕ್ಕೆ ಭೇಟಿ ನೀಡಿ ಕಾಮಗಾರಿಯ ಗುಣಮಟ್ಟವನ್ನು ಪರಿಶೀಲಿಸಿದರು. ಚಿಚಖಂಡಿ ಕೆ.ಡಿ ಗ್ರಾಮದಲ್ಲಿರುವ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಮಕ್ಕಳಿಗೆ ನೀಡುತ್ತಿರುವ ಶಿಕ್ಷಣ ಹಾಗೂ ಆಹಾರ ಪದಾರ್ಥಗಳನ್ನು ಪರಿಶೀಲಿಸಿದರು. ಶಾಲಾ ದುರಸ್ತಿ ಕಾರ್ಯ ಪರಿಶೀಲನೆ ನಡೆಸಿದರು.

ಜಿಲ್ಲಾಧಿಕಾರಿ ಕ್ಯಾಪ್ಟನ್‌ ಡಾ|ಕೆ. ರಾಜೇಂದ್ರ, ತರಬೇತಿ ಐಎಎಸ್‌ ಅಧಿಕಾರಿ ಗರಿಮಾ ಪನ್ವಾರ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಬಲರಾಮಲಮಾಣಿ, ಶಂಕರಲಿಂಗ ಗೋಗಿ, ಎ.ವೈ. ಬಸರಿಗಿಡದ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next