Advertisement
ಕೃಷ್ಣಾ ನದಿಯ ಉಗಮ ಸ್ಥಾನ ಮಹಾರಾಷ್ಟ್ರದ ಮಹಾಬಲೇಶ್ವರ ಸುತ್ತ ಭಾರಿ ಮಳೆ ಸುರಿಯುತ್ತಿದ್ದು, ಕೃಷ್ಣಾ ನದಿಗೆ 2,28,121 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಆಲಮಟ್ಟಿ ಜಲಾಶಯಕ್ಕೆ 2.50 ಲಕ್ಷ ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಪ್ರವಾಹ ಉಂಟಾಗದಂತೆ ಮುಂಜಾಗ್ರತೆಯ ಕ್ರಮವಾಗಿ ಆಲಮಟ್ಟಿ ಜಲಾಶಯದಿಂದ 2,58,710 ಕ್ಯೂಸೆಕ್ ನೀರು ಹೊರ ಬಿಡಲಾಗುತ್ತಿದೆ.
ಕಳೆದ ಐದು ವರ್ಷಗಳಿಂದ ಬರ ಎದುರಿಸಿದ್ದ ಜಿಲ್ಲೆಯ ಜನರು, ಈ ಭಾರಿ ನದಿ ಪಾತ್ರದಲ್ಲಿ ಭರ್ತಿ ನೀರು ಕಾಣುತ್ತಿದ್ದಾರೆ. ಘಟಪ್ರಭಾ ನದಿಯ 5 ಸೇತುವೆ ಸಹಿತ ಬ್ಯಾರೇಜ್ ಹಾಗೂ ಕೃಷ್ಣಾ ನದಿಯ ಜಮಖಂಡಿ ತಾಲೂಕು ವ್ಯಾಪ್ತಿಯ ಮೂರು ಸೇತುವೆಗಳು ಜಲಾವೃತಗೊಂಡಿವೆ. ಹೀಗಾಗಿ ಜನರು ಸುಮಾರು 25ರಿಂದ 40 ಕಿ.ಮೀ ವರೆಗೆ ಸುತ್ತಿ- ತಮ್ಮೂರು ಸೇರುತ್ತಿದ್ದಾರೆ.
Related Articles
Advertisement
10 ಕುಟುಂಬ ಸುರಕ್ಷಿತ ಸ್ಥಳಕ್ಕೆಜಮಖಂಡಿ ತಾಲೂಕಿನ ಮುತ್ತೂರ ಗ್ರಾಮ, ಕೃಷ್ಣಾ ನದಿಗೆ ಹೊಂದಿಕೊಂಡಿದ್ದು, ನದಿ ಪಕ್ಕದಲ್ಲಿದ್ದ 10 ಕುಟುಂಬಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಇಲ್ಲಿ ಗ್ರಾಮದಲ್ಲಿ (ಭಾಗಶಃ ಮುಳುಗಡೆ ಗ್ರಾಮ) 38 ಕುಟುಂಬಗಳು ನದಿ ಪಕ್ಕದಲ್ಲಿದ್ದು, ಅವರಿಗೆ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು ಎಲ್ಲ ರೀತಿಯ ಸಿದ್ಧತೆ ಮಾಡಿ ಕೊಳ್ಳಲಾಗಿದೆ. ಜಮಖಂಡಿ ಶಾಸಕ ಆನಂದ ನ್ಯಾಮಗೌಡ, ಎಸಿ ಅಕ್ರಮ್ ಷರಿಫ್, ತಹಶೀಲ್ದಾರರು ಪ್ರವಾಹ ಭೀತಿ ಎದುರಿಸುತ್ತಿರುವ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ, ಪರಿಸ್ಥಿತಿ ಅವಲೋಕಿಸಿದರು. ಇತ್ತ ಬಾಗಲಕೋಟೆಯಲ್ಲಿ ಜಿಲ್ಲಾಧಿಕಾರಿ ಆರ್. ರಾಮಚಂದ್ರನ್, ಸಂಜೆ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳ ಸಭೆ ನಡೆಸಿ, ಪ್ರವಾಹ ಪರಿಸ್ಥಿತಿ ಎದುರಿಸಲು ಎಲ್ಲ ರೀತಿಯ ಸಿದ್ಧತೆಯಲ್ಲಿರುವ ಅಧಿಕಾರಿಗಳಿಗೆ ಸೂಚಿಸಿದರು.