ಗದಗ: ನವಿಲುತೀರ್ಥ ಜಲಾಶಯದಿಂದ ಮಲಪ್ರಭಾ ನದಿಗೆ ಅಪಾರ ಪ್ರಮಾಣದ ನೀರು ಬಿಡುಗಡೆ ಮಾಡಿದ್ದರಿಂದ ಜಿಲ್ಲೆಯ ಕೊಣ್ಣೂರು ಸಮೀಪದ ಸೇತುವೆ ಮುಳುಗಡೆಯಾಗಿದ್ದು, ಸೊಲ್ಲಾಪುರ- ಹುಬ್ಬಳ್ಳಿ ಸಂಪರ್ಕ ಸ್ಥಗಿತಗೊಂಡಿದೆ.
ಕಳೆದ ಒಂದು ವಾರದಿಂದ ಜಲಾಶಯದ ಮೇಲ್ಬಾಗದಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಜಲಾಶಯದ ಒಳಹರಿವು ಗಣನೀಯವಾಗಿ ಹೆಚ್ಚಳವಾಗಿದೆ. ಹೀಗಾಗಿ ಸುಮಾರು 25 ಸಾವಿರ ಕ್ಯೂಸೆಕ್ ಹೊರ ಹರಿಸಲಾಗುತ್ತಿದೆ.
ಪರಿಣಾಮ ರಾಷ್ಟ್ರೀಯ ಹೆದ್ದಾರಿ ಸ್ಥಗಿತಗೊಂಡಿದ್ದು ಹುಬ್ಬಳ್ಳಿಯಿಂದ ಆಗಮಿಸುವ ವಾಹನಗಳಿಗೆ ನರಗುಂದ, ರೋಣ ಮೂಲಕ ಪರ್ಯಾಯ ಮಾರ್ಗ ಕಲ್ಪಿಸಲಾಗಿದೆ.
ಇದನ್ನೂ ಓದಿ: ಸಾರ್ವಜನಿಕ ಗಣೇಶೋತ್ಸವ ಆಚರಿಸಲು ಇಲ್ಲ ವಿಘ್ನ: ಪರಿಷ್ಕೃತ ಮಾರ್ಗಸೂಚಿ ಪ್ರಕಟಿಸಿದ ಸರ್ಕಾರ
ಅಲ್ಲದೇ ಅಪಾರ ಪ್ರಮಾಣದ ನೀರಿ ಹರಿಯ ಬಿಟ್ಟಿದ್ದರಿಂದ ನದಿ ಪಾತ್ರದಲ್ಲಿ ಪ್ರವಾಹ ಉಂಟಾಗಿದ್ದು, ನರಗುಂದ ತಾಲೂಕಿನ ಲಖಮಾಪುರ ಗ್ರಾಮ ನಡುಗಡ್ಡೆಯಾಗಿದೆ. ಕೊಣ್ಣೂರು ಗ್ರಾಮದ ಹಲವು ಮನೆಗಳಿಗೆ ನೀರು ನುಗ್ಗಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿದೆ.
ರೋಣ ತಾಲೂಕಿನ ಬೂದಿಹಾಳ, ಲಕಮಾಪುರ, ಮೆಣಸಗಿ ಗ್ರಾಮಕ್ಕೆ ನೀರು ನುಗ್ಗಿದೆ. ಪ್ರವಾಹದ ಮುನ್ಸೂಚನ ಹಿನ್ನೆಲೆಯಲ್ಲಿ ಕೆಲವರು ಸುರಕ್ಷಿತ ಸ್ಥಳಗಳಿಗೆ ತೆರಳುತ್ತಿದ್ದಾರೆ.