Advertisement
ರಾಜ್ಯದ 12 ಜಿಲ್ಲೆಗಳಲ್ಲಿ ಪ್ರವಾಹದಿಂದ 80 ಸಾವಿರ ಹೆಕ್ಟೇರ್ ಬೆಳೆ ನಷ್ಟವಾಗಿದೆ, ರಸ್ತೆ, ಸೇತುವೆ ಸೇರಿ ಮೂಲಸೌಕರ್ಯಗಳಿಗೆ ಸಾಕಷ್ಟು ಹಾನಿಯಾಗಿದೆ. ಪ್ರಾಥಮಿಕ ಅಂದಾಜು ಪ್ರಕಾರ 4 ಸಾವಿರ ಕೋಟಿ ರೂ. ನಷ್ಟವುಂಟಾ ಗಿದೆ. ಪೂರ್ಣ ಮಾಹಿತಿ ಸಂಗ್ರಹ ಅನಂತರ ಅದರ ಪ್ರಮಾಣ ಹೆಚ್ಚಾಗಬಹುದು. ಹೀಗಾಗಿ ತತ್‌ಕ್ಷಣದ ಪರಿಹಾರ ಕಾರ್ಯಗಳಿಗೆ ನೆರವು ಅಗತ್ಯ ಇದೆ ಎಂದು ಪ್ರಧಾನಿ ಜತೆಗೆ ವೀಡಿಯೋ ಕಾನ್ಫರೆನ್ಸ್ ಸಂದರ್ಭ ಪ್ರವಾಹ ಪರಿಸ್ಥಿತಿಯ ಕುರಿತು ಮಾಹಿತಿ ನೀಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ ಮತ್ತು ಕಂದಾಯ ಸಚಿವ ಅಶೋಕ್ ತಿಳಿಸಿದರು.
Related Articles
Advertisement
4 ಸಾವಿರ ಕೋಟಿ ರೂ. ನೀಡಿರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿಯನ್ನು ನಿರ್ವಹಿಸಲು ಈಗಾಗಲೇ ತರಬೇತಿ ಪಡೆದ 200 ಎಸ್‌ಡಿಆರ್‌ಎಫ್ ಸಿಬಂದಿ, ನಾಲ್ಕು ಎನ್‌ಡಿಆರ್‌ಎಫ್ ತಂಡಗಳು ಮತ್ತು ನಾಲ್ಕು ರಕ್ಷಣ ಹೆಲಿಕಾಪ್ಟರ್‌ಗಳನ್ನು ಒದಗಿಸಲಾಗಿದ್ದು, ಹೆಚ್ಚುವರಿಯಾಗಿ 4 ಎನ್‌ಡಿಆರ್‌ಎಫ್ ತಂಡಗಳನ್ನು ಕಳುಹಿಸಲು ಕೋರಿದ್ದೇವೆ ಎಂದರು. ದೀರ್ಘಾವಧಿ ಪರಿಹಾರವಾಗಿ ಕಾವೇರಿ ಮತ್ತು ಕೃಷ್ಣಾ ನದಿ ಪಾತ್ರಗಳಲ್ಲಿ ಹಾಗೂ ಪಶ್ಚಿಮ ಘಟ್ಟಗಳು ವ್ಯಾಪಿಸಿರುವ ನೆರೆ ರಾಜ್ಯಗಳಲ್ಲಿ ಭೂಕುಸಿತಕ್ಕೆ ಸಂಬಂಧಿಸಿ ಮ್ಯಾಪಿಂಗ್ ಮತ್ತು ಮುನ್ಸೂಚನೆ ವ್ಯವಸ್ಥೆಯನ್ನು ಸ್ಥಾಪಿಸುವ ಕುರಿತು ಕೇಂದ್ರ ಭೂ ವಿಜ್ಞಾನ ಸರ್ವೇಕ್ಷಣ ಇಲಾಖೆ ವತಿಯಿಂದ ಅಧ್ಯಯನ ಕೈಗೊಳ್ಳುವಂತೆಯೂ ಮನವಿ ಮಾಡಲಾಗಿದೆ. ಕೇಂದ್ರ ಜಲ ಆಯೋಗದ ವತಿಯಿಂದ ಕೃಷ್ಣಾ ನದಿ ಪಾತ್ರ ದಲ್ಲಿ ಪ್ರವಾಹ ಪರಿಸ್ಥಿತಿ ಮುನ್ಸೂಚನೆ ವ್ಯವಸ್ಥೆ ಸ್ಥಾಪಿಸಬೇಕು. ಕಡಲ್ಕೊರೆತ ನಿಯಂ ತ್ರಣಕ್ಕಾಗಿ ನ್ಯಾಷನಲ್ ಸೈಕ್ಲೋನ್ ಮಿಟಿಗೇಶನ್ ರಿಲೀಫ್ ಪ್ರಾಜೆಕr… ಯೋಜನೆ ಯಡಿ ಕಡಲು ಕೊರೆತ ಸೇರ್ಪಡೆಗೊಳಿಸಲು ಪ್ರಸ್ತಾವನೆ ಸಲ್ಲಿಸಿದ್ದೇವೆ ಎಂದರು. ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಪರಿಹಾರ ಕಾರ್ಯ ಚುರುಕುಗೊಳಿಸಲಾಗಿದೆ. ಸಂಕಷ್ಟಕ್ಕೆ ಸಿಲುಕಿದವರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುವ ಕೆಲಸವನ್ನು ರಾಜ್ಯ ಮತ್ತು ಕೇಂದ್ರದ ಪಡೆಗಳ ಜತೆಗೂಡಿ ಮಾಡಲಾಗಿದೆ. ಈ ನಿಟ್ಟಿನಲ್ಲಿ ಮತ್ತಷ್ಟು ನೆರವನ್ನೂ ಕೇಂದ್ರದಿಂದ ಕೋರಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್, ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮ, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಪಾಲ್ಗೊಂಡಿದ್ದರು. 6 ರಾಜ್ಯಗಳ ಸಿಎಂಗಳ ಜತೆಗೆ ಮೋದಿ ಚರ್ಚೆ
ಹೊಸದಿಲ್ಲಿ: ದೇಶದ ವಿವಿಧ ಭಾಗಗಳಲ್ಲಿ ಮಳೆಯಿಂದ ಉಂಟಾಗಿರುವ ಪ್ರವಾಹ ಸ್ಥಿತಿ ಮತ್ತು ಹಾನಿಯ ಬಗ್ಗೆ ಪ್ರಧಾನಿ ಮೋದಿ ಸೋಮವಾರ ಪರಿಶೀಲನೆ ನಡೆ ಸಿದ್ದು, ಪ್ರವಾಹಪೀಡಿತ 6 ರಾಜ್ಯಗಳ ಮುಖ್ಯ ಮಂತ್ರಿಗಳೊಂದಿಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ಮಾತುಕತೆ ನಡೆಸಿದ್ದಾರೆ.
ಕೇರಳ, ಅಸ್ಸಾಂ, ಬಿಹಾರ, ಉತ್ತರಪ್ರದೇಶ ಮತ್ತು ಮಹಾರಾಷ್ಟ್ರದ ಸಿಎಂಗಳು ಈ ಸಭೆಯಲ್ಲಿ ಭಾಗಿಯಾಗಿದ್ದರು. ಕರ್ನಾಟಕ ಸಿಎಂ ಪರವಾಗಿ ಗೃಹ ಮತ್ತು ಕಂದಾಯ ಸಚಿವರು ಭಾಗವಹಿಸಿದ್ದರು. ಪ್ರವಾಹ ಮುನ್ಸೂಚನೆಗೆ ಶಾಶ್ವತ ವ್ಯವಸ್ಥೆಯೊಂದನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯದ ಎಲ್ಲ ಸಂಸ್ಥೆಗಳ ನಡುವೆ ಉತ್ತಮ ಸಮನ್ವಯ ಏರ್ಪಡಬೇಕು ಎಂದು ಪ್ರಧಾನಿ ಮೋದಿ ಅಭಿಪ್ರಾಯ ಪಟ್ಟಿದ್ದಾರೆ. ಇದಕ್ಕಾಗಿ ಹೊಸ ತಂತ್ರಜ್ಞಾನಗಳನ್ನು ವ್ಯಾಪಕವಾಗಿ ಬಳಸುವಂತೆಯೂ ಪ್ರಧಾನಿ ಮೋದಿ ಅವರು ಸಲಹೆ ನೀಡಿದ್ದಾರೆ. ಸ್ಥಳೀಯ ವ್ಯವಸ್ಥೆಗೆ ಉತ್ತೇಜನ
ಸ್ಥಳೀಯವಾಗಿ ಮುನ್ಸೂಚನೆ ನೀಡುವಂಥ ಎಚ್ಚರಿಕೆ ವ್ಯವಸ್ಥೆಗಳಲ್ಲಿ ಹೂಡಿಕೆಗೆ ಉತ್ತೇಜನ ನೀಡಬೇಕು. ನದಿ ಅಪಾಯದ ಮಟ್ಟ ಮೀರಿ ಹರಿಯುವುದು, ಮುಳುಗಡೆ ಸ್ಥಿತಿ ಅಥವಾ ಸಿಡಿಲು ಮತ್ತಿತರ ಅಪಾಯಗಳು ಎದುರಾದಾಗ ಸ್ಥಳೀಯ ಮಟ್ಟದಲ್ಲೇ ಜನರಿಗೆ ಎಚ್ಚರಿಕೆ ನೀಡಲು ಇದು ಸಹಾಯಕವಾಗುತ್ತದೆ ಎಂದೂ ಪ್ರಧಾನಿ ಮೋದಿ ಅಭಿಪ್ರಾಯಪಟ್ಟಿದ್ದಾರೆ. ಸುಮಾರು ಒಂದೂವರೆ ತಾಸು ಕಾಲ ಸಂವಾದ ನಡೆದಿದ್ದು, ಪ್ರವಾಹ ಪರಿಹಾರ ಸಾಮಗ್ರಿಗಳಲ್ಲಿ ಮಾಸ್ಕ್, ಕೈತೊಳೆಯುವ ವ್ಯವಸ್ಥೆ, ಸ್ಯಾನಿಟೈಸರ್‌ಗಳೂ ಒಳಗೊಂಡಿ ರುವಂತೆ ನೋಡಿಕೊಳ್ಳಿ. ಪ್ರವಾಹ ಸ್ಥಿತಿಯ ನಡುವೆಯೇ ಕೊರೊನಾ ಮುನ್ನೆಚ್ಚರಿಕೆ ಕ್ರಮಗಳೂ ಪಾಲನೆಯಾಗುವಂತೆ ನೋಡಿಕೊಳ್ಳಿ ಎಂದೂ ಮೋದಿ ಸೂಚಿಸಿದ್ದಾರೆ. 885 ಗ್ರಾಮಗಳಿಗೆ ಹಾನಿ
ಹಾನಿಗೀಡಾದ ಜಿಲ್ಲೆಗಳು
ಬೆಳಗಾವಿ, ರಾಯಚೂರು, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ
56 ಹಾನಿಗೀಡಾದ ತಾಲೂಕುಗಳು
3000 ಹಾನಿಗೊಂಡ ಮನೆಗಳ ಸಂಖ್ಯೆ
80 ಸಾವಿರ ಹೆಕ್ಟೇರ್ ಕೃಷಿ, ತೋಟಗಾರಿಕೆ ಬೆಳೆ ನಾಶ
3,500 ಕಿ.ಮೀ. -ರಸ್ತೆ ಹಾಳು
104 ಸಣ್ಣ ನೀರಾವರಿ ಕೆರೆಗಳಿಗೆ ಹಾನಿ
394 ಕಟ್ಟಡಗಳಿಗೆ ಹಾನಿ