Advertisement

ಉತ್ತರಖಂಡದಲ್ಲಿ ಮೇಘಸ್ಪೋಟ : 34 ಮಂದಿ ಸಾವು, ಹಲವರು ನಾಪತ್ತೆ  

08:11 AM Oct 20, 2021 | Team Udayavani |

ಡೆಹರಾಡೂನ್ : ಉತ್ತರಾಖಂಡದಲ್ಲಿ ಭಾರಿ ಮಳೆಯಾಗುತ್ತಿದ್ದು, ಜನರ ಜೀವನ ಅಕ್ಷರಶಃ ತತ್ತರಿಸಿ ಹೋಗಿದೆ. ರಾಜ್ಯದಲ್ಲಿ ಈವರೆಗೆ 34 ಮಂದಿ ಸಾವನ್ನಪ್ಪಿದ್ದು, ಗುಡ್ಡಗಳಿಂದ ಆವೃತವಾದ ರಾಜ್ಯದಲ್ಲಿ ಬಹುತೇಕ ನದಿಗಳು ಉಕ್ಕಿ ಹರಿಯುತ್ತಿವೆ.

Advertisement

ಮಳೆ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ಮೋದಿ ಮತ್ತು ಗೃಹ ಸಚಿವರಿಗೆ ಪರಿಸ್ಥಿತಿಯ ಬಗ್ಗೆ ಮಾಹಿತಿ ನೀಡಲಾಗಿದೆ. ಮನೆ, ಸೇತುವೆಗಳು ಹಾನಿಗೊಳಗಾಗಿವೆ. ರಕ್ಷಣಾ ಕಾರ್ಯಾಚರಣೆಗಾಗಿ ಮೂರು ಸೇನಾ ಹೆಲಿಕಾಪ್ಟರ್‌ ಗಳನ್ನು ನಿಯೋಜಿಸಲಾಗಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್  ಮಾಹಿತಿ ನೀಡಿದ್ದಾರೆ.

ಮಳೆ ಮತ್ತು ಪ್ರವಾಹದಿಂದ “ಇಲ್ಲಿಯವರೆಗೆ 34 ಜನರು ಸಾವನ್ನಪ್ಪಿದ್ದಾರೆ ಮತ್ತು ಐವರು ನಾಪತ್ತೆಯಾಗಿದ್ದಾರೆ. ಮೃತರ ಕುಟುಂಬಗಳಿಗೆ 4 ರೂ. ಲಕ್ಷ ಪರಿಹಾರ ನೀಡಲಾಗುವುದು. ಮನೆ ಕಳೆದುಕೊಂಡವರಿಗೆ ₹ 1.9 ಲಕ್ಷ ನೀಡಲಾಗುವುದು. ಜಾನುವಾರುಗಳನ್ನು ಕಳೆದುಕೊಂಡವರಿಗೆ ಎಲ್ಲಾ ರೀತಿಯ ಸಹಾಯವನ್ನು ನೀಡಲಾಗುವುದು  ಎಂದು ಸಿಎಂ ಭರವಸೆ ನೀಡಿದ್ದಾರೆ.

ಇನ್ನು ಮಂಗಳವಾರ ನೈನಿತಾಲ್ ಜಿಲ್ಲೆಯಲ್ಲಿ ರಾಮಗಡದ ಗ್ರಾಮವೊಂದರಲ್ಲಿ ಭಾರಿ ಮಳೆಯ ನಡುವೆ ಮೇಘಸ್ಫೋಟ ಸಂಭವಿಸಿದ್ದು, ಅನೇಕರು ಗಾಯಗೊಂಡಿದ್ದಾರೆ. ಪೊಲೀಸರು ಹಾಗೂ ಅಧಿಕಾರಿಗಳ ತಂಡ ಸ್ಥಳಕ್ಕೆ ಧಾವಿಸಿದೆ. ಗಾಯಾಳು ಜನರನ್ನು ರಕ್ಷಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next