Advertisement

Assam: ಕಲ್ಲಿದ್ದಲು ಗಣಿ ಒಳಗೆ ಪ್ರವಾಹ: 3 ಸಾವು, 6 ಕಾರ್ಮಿಕರು ನಾಪತ್ತೆ!

10:34 PM Jan 07, 2025 | Team Udayavani |

ಗುವಾಹಟಿ: ಅಸ್ಸಾಂನ ದಿಮಾ ಹಸಾವೊ ಜಿಲ್ಲೆಯ ಕಲ್ಲಿದ್ದಲು ಗಣಿಯೊಳಗೆ ದಿಢೀರ್‌ ನೀರಿನ ಹರಿವು ಉಂಟಾಗಿದ್ದು, 100 ಅಡಿ ಆಳದಲ್ಲಿ ನೀರು ತುಂಬಿದ ಕಾರಣ ಒಳಗೆ 9 ಕಾರ್ಮಿಕರು ಸಿಲುಕಿದ್ದು, ಈ ಪೈಕಿ 3 ಮಂದಿ ಮೃತಪಟ್ಟಿದ್ದಾರೆ. ಉಳಿದ 6 ಮಂದಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.

Advertisement

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ, ರಾಜ್ಯ ವಿಪತ್ತು ನಿರ್ವಹಣಾ ಪಡೆ, ಸೇನೆ ಮತ್ತು ಅಸ್ಸಾಂ ರೈಫಲ್ಸ್‌ ಜಂಟಿಯಾಗಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ. ವಿಶಾಖಪಟ್ಟಣದಿಂದ ನೌಕಾಪಡೆಯ ಮುಳುಗುತಜ್ಞರನ್ನೂ ಕರೆಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಸ್ಸಾಂನ ಉಮ್ರಾಂಗ್ಸೊ ಪ್ರದೇಶದ ಗಣಿ ಕ್ವಾರಿಯಲ್ಲಿ ಈ ಘಟನೆ ನಡೆದಿದೆ. ನೀರಿನ ಮಟ್ಟ ಏಕಾಏಕಿ ಏರಿದ್ದರಿಂದ ಅವರಿಗೆ ತಪ್ಪಿಸಿಕೊಳ್ಳಲು ಸಾಧ್ಯವಾಗಿಲ್ಲ ಎಂದು ತಿಳಿದುಬಂದಿದೆ. ಘಟನೆ ವೇಳೆ ಗಣಿಯಲ್ಲಿ 15 ಕಾರ್ಮಿಕರಿದ್ದರು ಎಂದು ಮೂಲಗಳು ತಿಳಿಸಿವೆಯಾದರೂ ಸರ್ಕಾರ ಇದನ್ನು ದೃಢಪಡಿಸಿಲ್ಲ.

Advertisement

Udayavani is now on Telegram. Click here to join our channel and stay updated with the latest news.

Next