Advertisement
ಅಸ್ಸಾಂನಲ್ಲಿ 19 ಜಿಲ್ಲೆಗಳು ಪ್ರವಾಹ ಪೀಡಿತವಾಗಿದ್ದು, ಶನಿವಾರ ನಾಲ್ವರು ಮೃತಪಟ್ಟಿದ್ದಾರೆ. ಇಲ್ಲಿನ 10 ಲಕ್ಷಕ್ಕೂ ಅಧಿಕ ಮಂದಿ ನಿರ್ವಸಿತರಾಗಿದ್ದಾರೆ. ಸುಮಾರು 63 ಸಾವಿರ ಮಂದಿಯನ್ನು 268 ಪರಿಹಾರ ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ. ರಾಜ್ಯದಲ್ಲಿ 1,750 ಗ್ರಾಮಗಳು ಹಾಗೂ 1 ಲಕ್ಷ ಹೆಕ್ಟೇರ್‌ನಷ್ಟು ಕೃಷಿ ಭೂಮಿ ಮುಳುಗಡೆಯಾಗಿವೆ ಎಂದು ಅಸ್ಸಾಂ ವಿಪತ್ತು ನಿರ್ವಹಣಾ ಪ್ರಾಧಿಕಾರ ಮಾಹಿತಿ ನೀಡಿದೆ. ರಾಷ್ಟ್ರೀಯ ವಿಪತ್ತು ಕ್ರಿಯಾ ಪಡೆ ರಾಜ್ಯಾದ್ಯಂತ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದೆ. ತುರ್ತು ರಕ್ಷಣಾ ಕಾರ್ಯಕ್ಕೆಂದು ಸೇನೆಯನ್ನೂ ಸನ್ನದ್ಧ ಸ್ಥಿತಿಯಲ್ಲಿ ಇಡಲಾಗಿದೆ.
Advertisement
ಪ್ರವಾಹದ ಅಬ್ಬರಕ್ಕೆ ಅಸ್ಸಾಂನಲ್ಲಿ 4 ಬಲಿ
07:55 AM Aug 13, 2017 | |
Advertisement
Udayavani is now on Telegram. Click here to join our channel and stay updated with the latest news.