Advertisement

ಪ್ರವಾಹ: 13 ಪರಿಹಾರ ಕೇಂದ್ರ ಸ್ಥಾಪನೆ

10:14 AM Aug 07, 2019 | Team Udayavani |

ಬಾಗಲಕೋಟೆ: ಜಿಲ್ಲೆಯಲ್ಲಿ ಕೃಷ್ಣಾ ನದಿಯ ನೀರಿನ ಹರಿವಿನ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ವಿವಿಧ ಪ್ರವಾಹ ಸ್ಥಳಗಳಿಗೆ ಮಂಗಳವಾರ ಜಿಲ್ಲಾಧಿಕಾರಿ ಆರ್‌.ರಾಮಚಂದ್ರನ್‌ ಭೇಟಿ ನೀಡಿ ಪರಿಹಾರ ಕಾರ್ಯದಲ್ಲಿ ನಿರತರಾಗಿದ್ದಾರೆ.

Advertisement

ಮುಧೋಳ ತಾಲೂಕಿನ ಕಾಂಬಳೆಗಲ್ಲಿಗೆ ಭೇಟಿ ನೀಡಿ ಅಲ್ಲಿರುವ ಸಂತ್ರಸ್ಥರನ್ನು ಭೇಟಿ ಮಾಡಿ ಆಲಿಸಿ ಶಾಂತ್ವನ ಹೇಳಿದರು. 40 ಜನ ಸಂತ್ರಸ್ತರಿಗಾಗಿ ಸರಕಾರಿ ರನ್ನ ಮಾದರಿ ಪ್ರಾಥಮಿಕ ಶಾಲೆಯಲ್ಲಿ ತೆರೆಯಲಾದ ಊಟೋಪಚಾರದ ಪರಿಹಾರ ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳ ಬಗ್ಗೆ ಪರಿಶೀಲಿಸಿದರು.

ನಂತರ ಯಾದವಾಡದ ಬ್ಯಾರೇಜ್‌ಗೆ ಭೇಟಿ ನೀಡಿ ಅಲ್ಲಿರುವ ನೀರಿನ ಪ್ರಮಾಣವನ್ನು ವೀಕ್ಷಿಸಿದರು. ನೀರಿನಿಂದ ಆವರಿಸಿದ ಮಾಚಕನೂರಿನ ಹೊಳೆ ಬಸವೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಮುಧೋಳ ತಾಲೂಕಿನಲ್ಲಿ ಬಾಧಿತಗೊಳ್ಳುವ ಗ್ರಾಮಗಳ ಸಂತ್ರಸ್ತರಿಗಾಗಿ 13 ತುರ್ತು ಚಿಕಿತ್ಸಾ ಕೇಂದ್ರಗಳನ್ನು ಪ್ರಾರಂಭಿಸಿ 6 ಜನ ಮೇಲ್ವಿಚಾರಕರು ಸೇರಿ ಒಟ್ಟು 19 ಜನ ಕಾರ್ಯನಿರ್ವಹಿಸುತ್ತಿದ್ದಾರೆ. ಬಾಧಿತರನ್ನು ಹಾಗೂ ರೋಗಿಗಳನ್ನು ಕೊಂಡೊಯ್ಯಲು 3 ಆ್ಯಂಬುಲೆನ್ಸ್‌ಗಳ ವ್ಯವಸ್ಥೆ ಮಾಡಲಾಗಿದೆ. ಜೀವರಕ್ಷಕ ಔಷಧಿಗಳನ್ನು ಪೂರೈಸಲಾಗಿದ್ದು, ಹಾವು ಕಡಿತಕ್ಕೆ ಔಷಧಿಯನ್ನು ಪೂರೈಸಲಾಗುತ್ತಿದೆ. ಕುಡಿಯುವ ನೀರಿನ ಮೂಲಗಳ ಪರೀಕ್ಷೆ ಮಾಡಿ ಸೂಪರ್‌ ಕ್ಲೋರಿನೇಷನ್‌ ಮಾಡಲಾಗಿದೆ. ಇದುವರೆ ಪ್ರವಾಹ ಪೀಡಿತ ಗ್ರಾಮಗಳಲ್ಲಿಯ 375 ಜನರ ಆರೋಗ್ಯ ತಪಾಸಣೆ ಮಾಡಿ ಸೂಕ್ತ ಚಿಕಿತ್ಸೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಮುಧೋಳ ಪಟ್ಟಣದಲ್ಲಿ ಈಗಾಗಲೇ 29 ಕುಟುಂಬಗಳನ್ನು ಸ್ಥಳಾಂತರಿಸಲಾಗಿದೆ. ಅಲ್ಲದೇ ಬೆಳಗಲಿ ಗ್ರಾಮದಲ್ಲಿ 5 ಟನ್‌, ಲೋಕಾಪುರದಲ್ಲಿ 5 ಟನ್‌ ಮೇವು ಇರಿಸಲಾಗಿದೆ. ಕಂಕಣವಾಡಿಯಲ್ಲಿ 70 ಕುಟುಂಬಗಳ ಪೈಕಿ 50 ಕುಟುಂಬಗಳನ್ನು ಸ್ಥಳಾಂತರಿಸಲಾಗಿದ್ದು ಉಳಿದ 20 ಕುಟುಂಬಗಳ ಸ್ಥಳಾಂತರಿಸುವ ಕಾರ್ಯ ಮಾಡಲಾಗುತ್ತಿದೆ. ಅಲ್ಲದೇ ಅಂಗನವಾಡಿ ಕೇಂದ್ರದಲ್ಲಿ ತಾತ್ಕಾಲಿಕವಾಗಿ ಆರೋಗ್ಯ ತಪಾಸಣೆ ಕೇಂದ್ರ ತೆರೆಯಲಾಗಿದ್ದು, ಅಲ್ಲಿರುವ ಗರ್ಭಿಣಿ ಹಾಗೂ ಬಾಣಂತಿಯರಿಗೆ ಸೂಕ್ತ ಚಿಕಿತ್ಸೆ ಹಾಗೂ ಔಷಧಗಳನ್ನು ವಿತರಿಸಲಾಗುತ್ತಿದೆ.

Advertisement

ಪರಿಶೀಲನೆ ವೇಳೆಯಲ್ಲಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ, ಪ್ರೊಬೇಷನರಿ ಐಎಎಸ್‌ ಅಧಿಕಾರಿ ಗರಿಮಾ ಪೊವಾರ, ಉಪವಿಭಾಗಾಧಿಕಾರಿ ಮೊಹಮ್ಮದ ಈಕ್ರಮ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next