Advertisement

ಪ್ರವಾಹ ಭೀತಿ:ಸುರಕ್ಷಿತ ಸ್ಥಳಕ್ಕೆ ತೆರಳಲು ಜನರಿಗೆ ಸೂಚನೆ

02:59 PM Aug 31, 2017 | |

ಚಡಚಣ: ಮಹಾರಾಷ್ಟ್ರದಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವುದರಿಂದ ಉಜನಿ ಜಲಾಶಯ ಅಪಾಯದ ಮಟ್ಟ ಮೀರಿ ಭರ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ ನದಿ ಪಾತ್ರದ ಗ್ರಾಮಗಳ ಜನರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಇಂಡಿ ತಹಸೀಲ್ದಾರ ಸಂತೋಷ ಮ್ಯಾಗೇರಿ ತಿಳಿಸಿದ್ದಾರೆ.

Advertisement

ಮಹಾರಾಷ್ಟ್ರ ಸರಕಾರ ಜಲಾಶಯದಿಂದ ಭೀಮಾನದಿಗೆ ಸುಮಾರು 15ರಿಂದ 20 ಸಾವಿರ ಕ್ಯೂಸೆಕ್‌ ನೀರು ಬಿಡುವ ಸಂಭವವಿದೆ. ಆ.29ರಂದು ಸುಮಾರು 6500 ಕ್ಯೂಸೆಕ್‌ ನೀರು ಹರಿ ಬಿಡಲಾಗಿದ್ದು, ಗುರುವಾರ ರಾಜ್ಯದ ಗಡಿ ಪ್ರವೇಶಿಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನದಿ ಪಾತ್ರದ ಗ್ರಾಮಗಳಾದ ಉಮರಜ, ದಸೂರ, ಹೊಳೆಸಂಖ, ಉಮರಾಣಿ, ಟಾಕಳಿ, ಗೋವಿಂದಪುರ, ನಿವರಗಿ ಸೇರಿದಂತೆ ಮತ್ತಿತರ ಗ್ರಾಮಗಳಲ್ಲಿ ಈಗಾಗಲೇ ಡಂಗುರ ಸಾರಲಾಗಿದ್ದು, ಸಾರ್ವಜನಿಕರು ಜಾಗೃತಿ ವಹಿಸಿ ತಮ್ಮ ದನಕರುಗಳೊಂದಿಗೆ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ತಹಸೀಲ್ದಾರರು ಸೂಚಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next