Advertisement
ಇದರಿಂದ ಗಡಿಭಾಗದ ಮಹಾರಾಷ್ಟ್ರದ ಕೊಲ್ಲಾಪೂರ ಜಿಲ್ಲೆಯ ಶಿರೋಳ ತಾಲೂಕಿನ ಸುಕ್ಷೇತ್ರ ನರಸಿಂಹವಾಡಿ ಶ್ರೀ ದತ್ತ ಮಂದಿರ ಜಲಾವೃತಗೊಂಡಿದೆ.
Related Articles
Advertisement
ಮಹಾರಾಷ್ಟ್ರದ ಕೊಂಕಣ ಭಾಗದ ಮಹಾಬಳೇಶ್ವರ, ಕೋಯ್ನಾ, ನವಜಾ ಹಾಗೂ ಕಾಳಮ್ಮವಾಡಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಮಳೆ ಸುರಿದಿದೆ. ರಾಜ್ಯದ ಕೃಷ್ಣಾ, ದೂಧಗಂಗಾ ಮತ್ತು ವೇಧಗಂಗಾ ನದಿ ನೀರಿನ ಮಟ್ಟದಲ್ಲಿ ಭಾರಿ ಏರಿಕೆ ಕಂಡಿದೆ. ಚಿಕ್ಕೋಡಿ ಉಪವಿಭಾಗದ ಕೆಳಹಂತದ ಐದು ಸೇತುವೆ ಜಲಾವೃತಗೊಂಡು ಸಂಚಾರ ಕಡಿತವಾಗಿವೆ.
ಕೃಷ್ಣಾ ನದಿಗೆ ಮಹಾರಾಷ್ಟçದಿಂದ ಅಧಿಕ ನೀರು ಹರಿದು ಬರಲಾರಂಭಿಸಿದೆ. ಒಂದೇ ದಿನ ಕೃಷ್ಣಾ ನದಿ ಮೂರು ಅಡಿಯಷ್ಟು ನೀರು ಹೆಚ್ಚಳವಾಗಿ ಅಪಾಯ ಮಟ್ಟ ಮೀರಿ ಹರಿಯುತ್ತಿದೆ. ದೂಧಗಂಗಾ ಮತ್ತು ವೇಧಗಂಗಾ ನದಿಯೂ ಕೂಡಾ ಅಪಾಯ ಮಟ್ಟ ಹರಿಯುತ್ತಿದೆ.
ದೂಧಗಂಗಾ ನದಿಯ ಚಿಕ್ಕೋಡಿ ತಾಲೂಕಿನ ಮಲಿಕವಾಡ-ದತ್ತವಾಡ, ನಿಪ್ಪಾಣಿ ತಾಲೂಕಿನ ಕಾರದಗಾ-ಭೋಜ, ವೇಧಗಂಗಾ ನದಿಯ ಬಾರವಾಡ-ಕುನ್ನೂರ, ಭೋಜವಾಡಿ-ಕುನ್ನೂರ, ಕೃಷ್ಣಾ ನದಿಯ ಮಾಂಜರಿ-ಬಾ.ಸವದತ್ತಿ ಸೇತುವೆ ಜಲಾವೃತಗೊಂಡಿವೆ. ರ‍್ಯಾಯ ರಸ್ತೆ ಇರುವುದರಿಂದ ಪ್ರಯಾಣಿಕರು ಸುತ್ತುಬಳಿಸಿ ಪ್ರಯಾಣ ಮಾಡುತ್ತಿದ್ದಾರೆ.
ಮಹಾರಾಷ್ಟ್ರದ ರಾಜಾಪೂರ ಬ್ಯಾರೇಜದಿಂದ ಕೃಷ್ಣಾ ನದಿಗೆ 60 ಸಾವಿರ ಅಧಿಕ ಕ್ಯೂಸೆಕ್ ನೀರು ಹರಿದು ಬರಲಾರಂಭಿಸಿದೆ.