Advertisement
ಕಳೆದೆರಡು ದಿನಗಳಿಂದ ಜಿಲ್ಲೆಯಾದ್ಯಂತ ಬಿಸಿಲು, ಮೋಡದ ವಾತಾವರಣ ಇದ್ದು, ಬಿಟ್ಟು ಬಿಟ್ಟು ಮಳೆಯಾಗುತ್ತಿದೆ. ಈ ವಾತಾವರಣ ಬದಲಾವಣೆ ಜನರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ಮಕ್ಕಳಲ್ಲಿ ಹೆಚ್ಚಾಗಿ ವೈರಲ್ ಫೀವರ್ ಹೆಚ್ಚಾಗುತ್ತಿದ್ದು, ವೈದ್ಯರ ಬಳಿ ಬರುವವರ ಸಂಖ್ಯೆಯೂ ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ವಹಿಸಬೇಕಾದ ಅನಿವಾರ್ಯವಿದೆ. ಜ್ವರ ಸೇರಿದಂತೆ ಸಾಂಕ್ರಾಮಿಕ ರೋಗ ಮಕ್ಕಳಲ್ಲಿ ಕಂಡುಬಂದರೆ ಅವರನ್ನು ಶಾಲೆಗೆ ಕಳುಹಿಸದೇ ಇರುವುದು ಉತ್ತಮ. ಇಲ್ಲವಾದರೆ ಅದು ಬೇರೊಬ್ಬರಿಗೆ ಹರಡುವ ಸಾಧ್ಯತೆ ಹೆಚ್ಚಿರುತ್ತದೆ.
Related Articles
Advertisement
ಮುನ್ನೆಚ್ಚರಿಕೆ ಅಗತ್ಯ
ಕೈಕಾಲುಗಳನ್ನು ಚೆನ್ನಾಗಿ ತೊಳೆದುಕೊಳ್ಳಿ
ಮನೆಯಿಂದ ಹೊರಗಡೆ ಹೋಗುವಾಗ ಮಾಸ್ಕ್ ಧರಿಸಿ
ಕುಡಿಯಲು ಕುದಿಸಿ ಆರಿಸಿದ ನೀರನ್ನು ಉಪಯೋಗಿಸಿ
ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಆಹಾರಗಳನ್ನು ಸೇವನೆ ಮಾಡಿ
ಜ್ವರ ಸಹಿತ ರೋಗ ಲಕ್ಷಣ ಕಂಡುಬಂದರೆ ವೈದ್ಯರನ್ನು ಸಂಪರ್ಕಿಸಿ
ವೈದ್ಯರ ಸಲಹೆಯಿಲ್ಲದೆ ಯಾವುದೇ ಮಾತ್ರೆ ಸೇವಿಸಬೇಡಿ
ಮಕ್ಕಳಲ್ಲಿ ಸಾಂಕ್ರಾಮಿಕ ರೋಗ ಬಂದರೆ ಶಾಲೆಗೆ ಕಳುಹಿಸದಿರುವುದು ಉತ್ತಮ
ವೈದ್ಯರ ಸಲಹೆ ಇಲ್ಲದೆ ಮಾತ್ರೆ ಸೇವಿಸದಿರಿ
ಕೆಲವು ದಿನಗಳಿಂದ ವೈರಲ್ ಫೀವರ್ ಹೆಚ್ಚಾಗಿ ಕಂಡುಬರುತ್ತಿದೆ. ಮಕ್ಕಳಲ್ಲಿ ಶೀತ, ಜ್ವರ ಸಹಿತ ಸಾಂಕ್ರಾಮಿಕ ರೋಗಗಳು ಕಂಡುಬಂದರೆ ಶಾಲೆಗೆ ಕಳುಹಿಸಬೇಡಿ. ಈ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳ ಜತೆಗೂ ಸಭೆ ನಡೆಸುತ್ತೇವೆ. ಜ್ವರ ಇರುವ ಸಂದರ್ಭದಲ್ಲಿ ವೈದ್ಯರ ಸಲಹೆ ಇಲ್ಲದೆ ನೋವು ನಿವಾರಕ ಮಾತ್ರೆಗಳನ್ನು ತೆಗೆದುಕೊಳ್ಳಬೇಡಿ. ಇದರಿಂದ ಗಂಭೀರ ಅಡ್ಡ ಪರಿಣಾಮಗಳು ಉಂಟಾಗಬಹುದು. ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಿ.
– ಡಾ| ತಿಮ್ಮಯ್ಯ, ದ.ಕ. ಜಿಲ್ಲಾ ಆರೋಗ್ಯಾಧಿಕಾರಿ