Advertisement

ಜ್ವರ ಪರೀಕ್ಷೆ ಇನ್ನು ಬಸ್‌ನಲ್ಲೇ ಲಭ್ಯ

02:23 PM Apr 30, 2020 | Suhan S |

ಬಾಗಲಕೋಟೆ: ಜಿಲ್ಲೆಯಲ್ಲಿ ಪ್ರಾರಂಭಿಸಲಾದ ಕೋವಿಡ್‌-19 ಮೊಬೈಲ್‌ ಫೀವರ್‌ ಬಸ್‌ ಕ್ಲಿನಿಕ್‌ಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಆಗಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ ಚಾಲನೆ ನೀಡಿದರು.

Advertisement

ಜಿಲ್ಲಾಡಳಿತ ಭವನದ ಮುಖ್ಯ ದ್ವಾರದಲ್ಲಿ ಬುಧವಾರ ಚಾಲನೆ ನೀಡಿ ಮಾತನಾಡಿದ ಅವರು ಜಿಲ್ಲೆಯ ಕೋವಿಡ್‌ ಸೋಂಕು ದೃಢಪಟ್ಟ ಕಂಟೇನ್‌ಮೆಂಟ್‌ ಮತ್ತು ಬಫರ್‌ ಝೋನ್‌ಗಳಲ್ಲಿ ಮೊಬೈಲ್‌ ಫೀವರ್‌ ಕ್ಲಿನಿಕ್‌ ಅನುಕೂಲವಾಗಲಿದ್ದು, ಇದನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಲು ತಿಳಿಸಿದರು. ಈ ಫೀವರ್‌ ಕ್ಲಿನಿಕ್‌ನಲ್ಲಿ ಥರ್ಮಲ್‌ ಸ್ಕ್ರೀನಿಂಗ್‌, ರಕ್ತದ ಒತ್ತಡ, ಸಕ್ಕರೆ ಕಾಯಿಲೆ ಬಗ್ಗೆ ಪರೀಕ್ಷೆಗೆ ಒಳಪಡಿಸಲು ತಿಳಿಸಿದರು. ಈ ಕ್ಲಿನಿಕ್‌ನಲ್ಲಿ ಫ್ಯಾನ್‌ಗಳ ವ್ಯವಸ್ಥೆ ಸಹ ಕಲ್ಪಿಸಲಾಗಿದ್ದು, ಬೆಡ್‌, ತಪಾಸಣೆಗೆ ಬೇಕಾದ ಟೇಬಲ್‌ ಗಳ ವ್ಯವಸ್ಥೆ ಇರುವುದಾಗಿ ತಿಳಿಸಿದರು.

ಜಿಲ್ಲಾ ಧಕಾರಿ ಕ್ಯಾಪ್ಟನ್‌ ಡಾ|ಕೆ. ರಾಜೇಂದ್ರ, ಜಿಪಂ ಸಿಇಒ ಗಂಗೂಬಾಯಿ ಮಾನಕರ, ಅಪರ ಜಿಲ್ಲಾ ಕಾರಿ ಮಹಾದೇವ ಮುರಗಿ, ಕೋವಿಡ್‌ ವಿಶೇಷ ಅಪರ ಜಿಲ್ಲಾಧಿಕಾರಿ ಬಸವರಾಜ ಸೋಮಣ್ಣವರ, ಉಪ ವಿಭಾಗಾಧಿಕಾರಿ ಎಂ.ಗಂಗಪ್ಪ, ಬಸವರಾಜ ಅಮ್ಮನವರ, ಡಿಎಚ್‌ಒ ಡಾ|ಎ.ಎನ್‌.ದೇಸಾಯಿ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next