Advertisement

2.9 ಕಿ.ಮೀ. ಮೇಲ್ಸೇತುವೆ ಕಾಮಗಾರಿ ಆರಂಭ

01:50 PM Nov 22, 2020 | Suhan S |

ಟಿ.ದಾಸರಹಳ್ಳಿ: ನಗರದಹೊರ ವರ್ತುಲರಸ್ತೆಯಿಂದ( ರಿಂಗ್‌ ರೋಡ್‌) ಪಶ್ಚಿಮ ಕಾರ್ಡ್‌ ರಸ್ತೆಗೆ ಸಂಪ ರ್ಕ‌ ಕಲ್ಪಿಸುವ 120 ಕೋಟಿ ರೂ. ವೆಚ್ಚದ 2.9 ಕಿ.ಮೀ ಮೇಲ್ಸೇತುವೆ ಕಾಮಗಾರಿಯ ಟೆಂಡರ್‌ ಪ್ರಕ್ರಿಯೆ ಶೀಘ್ರದಲ್ಲಿ ಪೂರ್ಣಗೊಳಿಸಿ ಕಾಮಗಾರಿ ಆರಂಭಿಸುವಂತೆ ಆಹಾರ ನಾಗರಿಕ ಸರಬರಾಜು ಸಚಿವ ಕೆ.ಗೋಪಾಲಯ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Advertisement

ಮಹಾಲಕ್ಷ್ಮೀ ಲೇಔಟ್‌ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ನಾಗಪುರ ವಾರ್ಡ್‌ನಲ್ಲಿ ಶನಿವಾರ ನಡೆದ ವಾರ್ಡ್‌ ಸಮಿತಿ ಸಭೆಯಲ್ಲಿ ಮಾತನಾಡಿದರು.

ಟೆಂಡರ್‌ ಪ್ರಕ್ರಿಯೆ ಪೂರ್ಣಗೊಳಿಸಿ: 120 ಕೋಟಿ ರೂ. ವೆಚ್ಚದಲ್ಲಿ ಹೊರ ವರ್ತುಲ ರಸ್ತೆಯಿಂದ ಪಶ್ಚಿಮ ಕಾರ್ಡ್‌ ರಸ್ತೆ(ಕುರುಬರಹಳ್ಳಿ ಮೂಲಕ) 2.9 ಕಿ.ಮೀ ಉದ್ದದ ಮೇಲು ಸೇತುವೆ ನಿರ್ಮಾಣ ಮಾಡಲು ಯೋಜನೆ ರೂಪಿಸಿದ್ದು, ಕೂಡಲೆ ಟೆಂಡರ್‌ ಪ್ರಕ್ರಿಯೆ ಪೂರ್ಣಗೊಳಿಸಿ ಕೆಲಸ ಪ್ರಾರಂಭಿಸುವಂತೆ ತಿಳಿಸಿದರು. ಶೀಘ್ರ ಸಮಸ್ಯೆ ಬಗೆಹರಿಸಲು ಕ್ರಮ: ಪ್ರತಿ ತಿಂಗಳು 2 ವಾರ್ಡ್‌ ಸಮಿತಿ ಸಭೆ ನಡೆಯಲಿದ್ದು, ಸಭೆಯಲ್ಲಿ ಸ್ಥಳೀಯ ನಿವಾಸಿಗಳು ತಮ್ಮ ಸಮಸ್ಯೆಗಳನ್ನು ತಿಳಿಸಿದ್ದಾರೆ ‌ ಸಂಬಂಧಪಟ್ಟ ಅಧಿಕಾರಿಗಳು ಕೂಡಲೆ ಬಗೆಹರಿಸಲಿದ್ದಾರೆ. ಬೀದಿ ದೀಪ ನಿರ್ವಹಣೆಗೆ ಹೊಸ ಟೆಂಡರ್‌ ಕರೆಯಲಾಗಿದ್ದು, ಶೀಘ್ರ ಸಮಸ್ಯೆ ಬಗೆಹರಿಸಲು ಕ್ರಮವಹಿಸಬೇಕು. ನಾಗಪುರ ವಾರ್ಡ್‌ ವ್ಯಾಪ್ತಿಯಲ್ಲಿ ಉದ್ಯಾನವನಗಳನಿರ್ವಹಣೆಗೆಅನುದಾನ ಕೊಡಬೇಕು. ಅದರಲ್ಲೂ ಹೆಚ್ಚಿನ ಸಂಖ್ಯೆಯಲ್ಲಿ ವಾಯು ವಿಹಾರಕ್ಕೆ ಬರುವ ಉದ್ಯಾನಗಳಿಗೆ ಪ್ರಾಧಾನ್ಯತೆ ನೀಡಿ ನಿರ್ವಹಣೆ ಮಾಡಲು ಅವಶ್ಯಕ ಅನುದಾನ ಬಿಡುಗಡೆ ಮಾಡಲು ಆಡಳಿತಗಾರರಿಗೆ ಸೂಚಿಸಿದರು.

ಉದ್ಯಾನವನಗಳ ಸಮರ್ಪಕ ನಿರ್ವಹಣೆ: ನಾಗಪುರ ವಾರ್ಡ್‌ ವ್ಯಾಪ್ತಿಯ ಎಲ್ಲಾ ರಸ್ತೆಗಳಲ್ಲಿ ಸಮರ್ಪಕವಾಗಿ ಬೀದಿ ದೀಪ ಅಳವಡಿಸಿ, ಉದ್ಯಾನವನಗಳ ಸಮರ್ಪಕ ನಿರ್ವಹಣೆ ಮಾಡಬೇಕು. ಕೊಳವೆ ಬಾವಿ ದುರಸ್ತಿ, ನಿರ್ವಹಣೆ, ಫ‌ಲಾನುಭವಿಗಳಿಗೆ ಲ್ಯಾಪ್‌ ಟಾಪ್‌ವಿತರಣೆ ಮಾಡಲು ಸೂಕ್ತ ಕ್ರಮ ವಹಿಸಬೇಕು. ವಾರ್ಡ್‌ ವ್ಯಾಪ್ತಿಯಲ್ಲಿ ನಿರ್ವಹಣೆ ಕಾಮಗಾರಿಗಳಿಗೆ ಅನುದಾನ ಮೀಸಲಿಟ್ಟಿದ್ದು, ಕೂಡಲೇ ಪಿ.ಒ.ಡಬ್ಲ್ಯೂ ಅನುದಾನ ಬಿಡುಗಡೆ ಮಾಡಲುಕ್ರಮವಹಿಸಬೇಕು. ಅಲ್ಲದೆ ಬೀದಿ ನಾಯಿಗಳ ಹಾವಳಿ ತಪ್ಪಿಸಬೇಕು ಎಂದು ಹೇಳಿದರು.

ತ್ವರಿತವಾಗಿ ಸಮಸ್ಯೆ ನಿವಾರಣೆ: ಬಿಬಿಎಂಪಿ ಆಡಳಿತಾಧಿಕಾರಿ ಗೌರವ್‌ ಗುಪ್ತ ಮಾತನಾಡಿ, ಸ್ಥಳೀಯ ಸಮಸ್ಯೆಗಳನ್ನು ಇತ್ಯರ್ಥ ಮಾಡಲು ಅಧಿಕಾರಿಗಳ ನೇತೃತ್ವದಲ್ಲಿ ವಾರ್ಡ್‌ ಕಮಿಟಿ ರಚನೆ ಮಾಡಲಾಗಿದ್ದು, ಇಲ್ಲಿ ಸ್ಥಳೀಯರ ಸಮಸ್ಯೆಗಳನ್ನು ತ್ವರಿತವಾಗಿ ನಿವಾರಣೆ ಮಾಡಿಕೊಳ್ಳಲು ಉತ್ತಮ ವೇದಿಕೆಯಾಗಿದೆ. ಇದಕ್ಕೆ ಎಲ್ಲರೂ ಕೈಜೋಡಿಸಿ ಕೆಲಸ ಮಾಡಿದರೆ ಇರುವ ಸಮಸ್ಯೆಗಳನ್ನು ತ್ವರಿತವಾಗಿ ನಿವಾರಣೆ ಮಾಡಿಕೊಳ್ಳಬಹುದಾಗಿದೆ ಎಂದರು.

Advertisement

ಸ್ಥಳೀಯರ ದೂರು: ವಾರ್ಡ್‌ ವ್ಯಾಪ್ತಿಯಲ್ಲಿರುವ ರಸ್ತೆ/ ಉದ್ಯಾನಗಳ ಬಳಿ ಬೀದಿ ನಾಯಿಗಳ ಹಾವಳಿ ಹೆಚ್ಚಿದ್ದು, ಅದಕ್ಕೆ ಕಡಿವಾಣ ಹಾಕಬೇಕು, ವಾರ್ಡ್‌ ವ್ಯಾಪ್ತಿಯಲ್ಲಿ ವಿದ್ಯುತ್‌ ಸಮಸ್ಯೆ ಇದ್ದು, ಇದನ್ನು ಪರಿಹರಿಸಬೇಕು, ಒಳಚರಂಡಿಗಳಲ್ಲಿ ಮಳೆ ಬಂದಾಗ ಮ್ಯಾನ್‌ ಹೋಲ್‌ ಉಕ್ಕುತ್ತಿರುವ ಬಗ್ಗೆ ರಸ್ತೆಗಳ ಒತ್ತುವರಿ ಇತ್ಯಾದಿಗಳ ಬಗ್ಗೆ ಸ್ಥಳೀಯರು ದೂರಿದರು.ಈಕುರಿತು ಸಂಬಂಧಪಟ್ಟ ಅಧಿಕಾರಿ ಪ್ರತಿಕ್ರಿಯಿಸಿ, ಎಲ್ಲೆಡೆ ಬೀದಿ ನಾಯಿಗಳ ಹಾವಳಿ ಹೆಚ್ಚಿದೆ ಎಂಬುದರ ಮಾಹಿತಿ ನೀಡಿದರೆ ಕೂಡಲೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ನಾಯಿಗಳನ್ನು ಹಿಡಿದು ಸಂತಾನ ಹರಣ ಶಸ್ತ್ರ ಚಿಕಿತ್ಸೆ(ಎ.ಬಿ.ಸಿ)/ರೇಬಿಸ್‌ ವ್ಯಾಕ್ಸಿನ್‌ ನೀಡಲಾಗುವುದು ಎಂದರು.

ಮಳೆ ನೀರು ಒಳಚರಂಡಿಗೆ ಹೋಗದಂತೆಕ್ರಮ ವಹಿಸಿ :  ಎಲ್ಲಾ ಕಟ್ಟಡಗಳಿಂದ ಮಳೆಗಾದಲ್ಲಿ ಮೇಲ್ಚಾವಣಿಯ ಮೇಲೆಬೀಳುವ ಮಳೆ ನೀರು ನೇರವಾಗಿ ಒಳಚರಂಡಿಗೆ ಹೊಗುತ್ತಿರುವ ಮಾಹಿತಿ ಇದ್ದು ಈ ಕೂಡಲೇ ಅಂತಹ ಕಟ್ಟಡಗಳನ್ನು ಗುರುತಿಸಿ ಅಗತ್ಯಕ್ರಮವಹಿಸಲು ಜಲಮಂಡಳಿ ಅಧಿಕಾರಿಗಳಿಗೆ ಸಭೆಯಲ್ಲಿ ಸೂಚನೆ ನೀಡಿದರು. ನಾಗರಿಕರು ಸಹ ಇದರ ಬಗ್ಗೆ ಗಮನಹರಿಸಿ ತಮ್ಮ ತಮ್ಮಕಟ್ಟಡಗಳ ಮೇಲ್ಚಾವಣಿ ನೀರು ನೇರವಾಗಿ ಮಳೆ ನೀರಿನ ಚರಂಡಿಗಳಿಗೆ ಸೇರುವಂತೆ ಎಚ್ಚರವಹಿಸಬೇಕು ಎಂದು ಆಡಳಿತಾಧಿಕಾರಿ ಗೌರವ್‌ ಗುಪ್ತ ತಿಳಿಸಿದರು.

ಸ್ಥಳೀಯವಾಗಿ ಸಮಸ್ಯೆ ಬಗೆಹರಿಸಿಕೊಳ್ಳಿ :  ವಾರ್ಡ್‌ ವ್ಯಾಪ್ತಿಯಲ್ಲಿ ರಸ್ತೆ ಗುಂಡಿ ಸಮಸ್ಯೆ,ಕಸದ ಸಮಸ್ಯೆ ನಿವಾರಣೆ, ಮನೆಮನೆಕಸ ಸಂಗ್ರಹ, ಬೀದಿ ದೀಪ ಅಳವಡಿಕೆ ಇತ್ಯಾದಿ ಸಮಸ್ಯೆಯ ಬಗ್ಗೆ ಆಯಾ ಅಧಿಕಾರಿಗಳು ಸಮರ್ಪಕವಾಗಿ ಕೆಲಸ ಮಾಡಿ ಇರುವ ಸಮಸ್ಯೆಗಳನ್ನು ಸ್ಥಳೀಯವಾಗಿ ಬಗೆಹರಿಸಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಆಡಳಿತಾಧಿಕಾರಿಗಳು ಸೂಚನೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next