ನವದೆಹಲಿ: 2023ನೇ ಸಾಲಿನ ಕೇಂದ್ರದ ಬಜೆಟ್ ನಲ್ಲಿ ಕೃಷಿ, ಪಶು ಸಂಗೋಪನೆ, ಹೈನುಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಸಾಲದ ಗುರಿಯನ್ನು 20 ಲಕ್ಷ ಕೋಟಿ ರೂಪಾಯಿಗೆ ಹೆಚ್ಚಿಸಿರುವುದಾಗಿ ಘೋಷಿಸಲಾಗಿದೆ.
ಇದನ್ನೂ ಓದಿ:ಆನ್ ಲೈನ್ ಕ್ಲಾಸ್ ನಡೆಯುತ್ತಿರುವಾಗಲೇ ಶಿಕ್ಷಕನ ಕತ್ತು ಹಿಸುಕಿ ಕೊಲೆಗೈದ ದುಷ್ಕರ್ಮಿಗಳು
ಗ್ರಾಮೀಣ ಪ್ರದೇಶದಲ್ಲಿ ಕೃಷಿ ಉತ್ತೇಜನಕ್ಕಾಗಿ ಹೊಸ ಸ್ಟಾರ್ಟ್ ಅಪ್ ಗಳಿಗೆ ಪ್ರೋತ್ಸಾಹ ನೀಡಲಾಗುವುದು ಎಂದು ಬಜೆಟ್ ನಲ್ಲಿ ತಿಳಿಸಲಾಗಿದೆ. ತೋಟಗಾರಿಕೆ ಬೆಳೆಯ ಉತ್ಪಾದನೆ ಹೆಚ್ಚಿಸಲು ಹೆಚ್ಚಿನ ಆದ್ಯತೆ ಈ ಬಾರಿಯ ಬಜೆಟ್ ನಲ್ಲಿ ನೀಡಲಾಗಿದೆ.
ಭಾರತವನ್ನು ಜಗತ್ತಿನ ಧಾನ್ಯಗಳ ಹಬ್ ನ್ನಾಗಿ ಮಾಡಲಾಗುವುದು. ಸಬ್ ಕಾ ಸಾಥ್ ಸಬ್ ಕಾ ವಿಕಾಸ ಘೋಷಣೆಯಡಿ ಕೃಷಿ ಕ್ಷೇತ್ರಕ್ಕೆ, ರೈತರಿಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ.
ಕಳೆದ ವರ್ಷ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ್ದ ಬಜೆಟ್ ನಲ್ಲಿ ಕೃಷಿ ಕ್ಷೇತ್ರದ ಸಾಲದ ಗುರಿಯನ್ನು 18 ಲಕ್ಷ ಕೋಟಿ ರೂಪಾಯಿ ಹೆಚ್ಚಳಮಾಡಿತ್ತು. ಅದಕ್ಕೂ ಹಿಂದಿನ ವರ್ಷ 16.50 ಲಕ್ಷ ಕೋಟಿ ರೂ. ಮೀಸಲಿಟ್ಟಿದ್ದು, 2022-23ನೇ ಸಾಲಿನಲ್ಲಿ ಕೃಷಿ, ಹೈನುಗಾರಿಕೆ ಕ್ಷೇತ್ರದ ಸಾಲದ ಗುರಿಯನ್ನು 20 ಲಕ್ಷ ಕೋಟಿ ರೂಪಾಯಿಗೆ ಏರಿಕೆ ಮಾಡಿದೆ.
ಅಷ್ಟೇ ಅಲ್ಲ ದೇಶದ ಸುಮಾರು 10 ಲಕ್ಷ ರೈತರಿಗೆ ನೈಸರ್ಗಿಕ ಕೃಷಿ ಅಭಿವೃದ್ಧಿಗೊಳಿಸಲು ಪ್ರೋತ್ಸಾಹ ನೀಡಲಾಗುವುದು. ಅದೇ ರೀತಿ ಕೃಷಿ ಕ್ಷೇತ್ರಕ್ಕೆ ಡಿಜಿಟಲ್ ಸ್ಪರ್ಶ ನೀಡುವ ಮೂಲಕ ರೈತರು ಸುಲಭವಾಗಿ ಬೆಳೆ ಕುರಿತ ಮಾಹಿತಿ, ಮಾರುಕಟ್ಟೆ ಧಾರಣೆ, ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದ ಮಾಹಿತಿಯನ್ನು ಪಡೆಯಬಹುದಾಗಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಬಜೆಟ್ ನಲ್ಲಿ ತಿಳಿಸಿದ್ದಾರೆ.